ನವದೆಹಲಿ: ಕೇಂದ್ರ ಸರ್ಕಾರವು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಆವರನ್ನು ಕಡ್ಡಾಯ ರಜೆಯ ಮೇಲೆ ತೆರಳುವಂತೆ ಆದೇಶಿಸಿದ್ದ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಬುಧವಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ 
ಇಂದು ಕೈಗೆತ್ತಿಕೊಳ್ಳಲಿದೆ. 


COMMERCIAL BREAK
SCROLL TO CONTINUE READING

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾ. ಎಸ್.ಕೆ.ಕೌಲ್ ಮತ್ತು ಕೆ.ಎಂ.ಜೋಸೆಫ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಲಿದೆ. 


ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿ ರಾಕೇಶ್ ಅಸ್ತಾನಾ ಈ ಇಬ್ಬರು ಮುಖ್ಯ ಅಧಿಕಾರಿಗಳ ಹಗ್ಗ-ಜಗ್ಗಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಇತಿಹಾದಲ್ಲೇ ಮೊದಲ ಬಾರಿಗೆ ಎನ್ನುವ ಹಾಗೆ ಅತ್ಯುನ್ನತಾ ತನಿಖಾ ಸಂಸ್ಥೆಯ ಅಧಿಕಾರಿಗಳಿಗೆ ರಜೆ ನೀಡಲಾಗಿದೆ. ಸಿಬಿಐ ಕೇಂದ್ರದಲ್ಲಿ ನಡೆಯುತ್ತಿರುವ ಭ್ರಷ್ಟಚಾರದ ಮುಸುಕಿನ ಗುದ್ದಾಟಕ್ಕೆ ತೆರೆ ಎಳೆಯುವ ಸಲುವಾಗಿ ಕೇಂದ್ರ ಸಚಿವಾಲಯ ನೇಮಕಾತಿ ಸಮಿತಿ ಸದ್ಯ ಇಲಾಖೆಯ ಜಂಟಿ ನಿರ್ದೇಶಕರಾಗಿರುವ ನಾಗೇಶ್ವರ್​ ರಾವ್​ ಅವರನ್ನು ನಿರ್ದೇಶಕರಾಗಿ ಅಧಿಕಾರವಹಿಸಿಕೊಳ್ಳುವಂತೆ ಆದೇಶ ನೀಡಿತ್ತು.


ಕಡ್ಡಾಯ ರಜೆ ನೀಡಿರುವ ಕೇಂದ್ರ ಸರ್ಕಾರದ ನಿಲುವನ್ನು ಪ್ರಶ್ನಿಸಿ ಹಾಗೂ 1986 ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಎಂ.ನಾಗೇಶ್ವರ್ ರಾವ್ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಿರುವ ಕ್ರಮಕ್ಕೆ ತಡೆ ನೀಡುವಂತೆಯೂ ಮನವಿ ಮಾಡಿ ಅಲೋಕ್ ವರ್ಮಾ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.