ನವದೆಹಲಿ : Supreme Court on Demonetisation : 2016ರಲ್ಲಿ 500 ಮತ್ತು 1000 ರೂಪಾಯಿ ನೋಟುಗಳನ್ನು ಅಮಾನ್ಯಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಕೇಂದ್ರ ಸರ್ಕಾರ ಕೈಗೊಂಡ ನೋಟು ರದ್ದತಿ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಸುಪ್ರೀಂ ಕೋರ್ಟ್‌ನ ಈ ತೀರ್ಪನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ ತನ್ನ ತೀರ್ಪಿನಲ್ಲಿ ಹೇಳಿದೆ. ನೋಟ್ ಬ್ಯಾನ್ ಪ್ರಕರಣದ ವಿರುದ್ದವಾಗಿ ಸಲ್ಲಿಸಲಾಗಿದ್ದ ಎಲ್ಲಾ 58 ಅರ್ಜಿಗಳನ್ನು ಕೋರ್ಟ್ ವಜಾಗೊಳಿಸಿದೆ. 


COMMERCIAL BREAK
SCROLL TO CONTINUE READING

ನೋಟು ಅಮಾನ್ಯೀಕರಣಕ್ಕೂ ಮುನ್ನ ಕೇಂದ್ರ ಸರ್ಕಾರ ಮತ್ತು ಆರ್‌ಬಿಐ ನಡುವೆ ಸಮಾಲೋಚನೆ ನಡೆದಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ನಿರ್ಧಾರ ತೆಗೆದುಕೊಳ್ಳುವ ಕುರಿತಂತೆ ಆರ್ ಬಿಐ ಮತ್ತು ಕೇಂದ್ರ ಸರ್ಕಾರದ ಮಧ್ಯೆ ಉತ್ತಮ ಸಮನ್ವಯವಿತ್ತು ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ನೋಟು ಅಮಾನ್ಯಗೊಳಿಸಲು ಆರ್‌ಬಿಐಗೆ ಯಾವುದೇ ಸ್ವತಂತ್ರ ಅಧಿಕಾರವಿಲ್ಲ. ಆದರೆ  ಕೇಂದ್ರ ಮತ್ತು ಆರ್‌ಬಿಐ ನಡುವಿನ ಸಮಾಲೋಚನೆ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನುವುದನ್ನು ಕೋರ್ಟ್ ಒತ್ತಿ ಹೇಳಿದೆ.


ಇದನ್ನೂ ಓದಿ :  Train Derailed: ರಾಜಸ್ಥಾನದ ಪಾಲಿಯಲ್ಲಿ ಹಳಿತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ನ 11 ಬೋಗಿಗಳು


ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಸರ್ಕಾರದ ನಡುವೆ ಈ ಹಿಂದೆಯೇ ಈ ಬಗ್ಗೆ ಚರ್ಚೆ ನಡೆದಿದ್ದು,  ನಿರ್ಧಾರದಲ್ಲಿ ಕೇಂದ್ರದ ತಪ್ಪಿಲ್ಲ ಎಂದು ನ್ಯಾಯಮೂರ್ತಿ ಬಿ.ಆರ್.ಗವಾಯಿ ಹೇಳಿದ್ದಾರೆ. ಈ ನಿರ್ಧಾರವನ್ನು ಯಾವ ಉದ್ದೇಶಕ್ಕಾಗಿ ತೆಗೆದುಕೊಳ್ಳಲಾಗಿದೆ ಎನ್ನುವುದು ಪ್ರಸ್ತುತವಲ್ಲ ಎಂದು ನ್ಯಾಯಮೂರ್ತಿ ಹೇಳಿದ್ದಾರೆ. 


ಇದರೊಂದಿಗೆ, ಕೇಂದ್ರದ 2016ರ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್, ಅದರ ವಿರುದ್ಧ ಸಲ್ಲಿಸಲಾದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ. ನವೆಂಬರ್ 8, 2016 ರಂದು ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಯು ಕಾನೂನಾತ್ಮಕವಾಗಿಯೇ ಇದೆ ಎಂದು  ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. 


ಇದನ್ನೂ ಓದಿ :  Nashik Factory Fire : ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ : 9 ಜನ ಸಜೀವ ದಹನ


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.