ನವದೆಹಲಿ :  ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಜಾರಿಗೆ ತರಲಾದ ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ  48 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕೊನೆಗೂ ಸುಗ್ಗಿ ಹಬ್ಬ ಸಂಕ್ರಾಂತಿ ಹಾಗೂ ಲೋಹರಿಯ ಸಿಹಿ ಸಿಕ್ಕಿದೆ. ಕೇಂದ್ರ ಸರ್ಕಾರದ ವಿವಾದಿತ 3 ಕೃಷಿ ಕಾಯ್ದೆಗಳಿಗೆ ತಡೆ ನೀಡಿರುವ ಸರ್ವೋಚ್ಚ ನ್ಯಾಯಾಲಯ ಸಮಸ್ಯೆ ಬಗೆಹರಿಸಲು ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದೆ.


Central Government) ತಾಕೀತು ಮಾಡಿತ್ತು. ಇಂದು ಈ ಕುರಿತಂತೆ ಮಹತ್ವದ ತೀರ್ಪು ಪ್ರಕಟಿಸಿರುವ ಸರ್ವೋಚ್ಚ ನ್ಯಾಯಾಲಯವು ಯಾವುದೇ ಶಕ್ತಿಗೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಈಗಿರುವ ಸಮಸ್ಯೆಯನ್ನು ನಾವು ಇತ್ಯರ್ಥಪಡಿಸಲೇಬೇಕಾಗಿದೆ. ಅದ್ದರಿಂದ ನಾವು ಸಮಿತಿಯೊಂದನ್ನು ರಚನೆ ಮಾಡುತ್ತಿದ್ದೇವೆ. ಸಮಿತಿಯಲ್ಲಿ ಕಾಯ್ದೆ ಕುರಿತ ಸಾಧಕ ಹಾಗೂ ಬಾಧಕಗಳ ಕುರಿತು ಕೂಲಂಕುಷವಾಗಿ ಸಮಾಲೋಚನೆ ನಡೆಸಲಾಗುವುದು. ಈ ಸಂದರ್ಭದಲ್ಲಿ ರೈತರು ನಮಗೆ ಸಹಕಾರ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಜೆ. ಬೊಬ್ಡೆ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ - Farmers Protest: 'ಕೃಷಿ ಕಾನೂನುಗಳಿಗೆ ನೀವು ತಡೆ ನೀಡದಿದ್ದರೆ, ಆ ಕೆಲಸ ನಾವು ಮಾಡಬೇಕಾದೀತು'


ನಿರ್ದಿಷ್ಟ ಕಾರಣಗಳಿಲ್ಲದೇ ಕಾಯ್ದೆಗಳನ್ನು ರದ್ದು ಮಾಡಲು ಸಾಧ್ಯವಿಲ್ಲ :
ಇನ್ನು ವಿವಾದಿತ ಕೃಷಿ ಕಾನೂನುಗಳನ್ನು(Agricultural Laws) ತಡೆ ಹಿಡಿದಿರುವ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠ ನೂತನ ಕೃಷಿ ಕಾಯ್ದೆಗಳನ್ನು ತಾತ್ಕಾಲಿಕವಾಗಿ ರದ್ದು ಮಾಡಬಹುದು. ಆದರೆ ಅದನ್ನು ಶಾಶ್ವತವಾಗಿ ರದ್ದು ಪಡಿಸಲು ಸಾಧ್ಯವಿಲ್ಲ. ಏಕೆಂದರೆ ನಿರ್ದಿಷ್ಟ ಕಾರಣಗಳಿಲ್ಲದೆ ಯಾವುದೇ ಕಾಯ್ದೆಯನ್ನೂ ರದ್ದು ಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.


ಇದನ್ನೂ ಓದಿ -  Farmer Protest : ಕೇಂದ್ರ ಸರ್ಕಾರ -ರೈತ ಸಂಘಟನೆಗಳ ಮಾತುಕತೆ ; ನಾಲ್ಕು ಬೇಡಿಕೆಗಳ ಪೈಕಿ ಎರಡನ್ನು ಈಡೇರಿಸಲು ಒಪ್ಪಿದ ಸರ್ಕಾರ


ರೈತರ ಪ್ರತಿಭಟನಾ ಸ್ಥಳಕ್ಕೆ ತೆರಳಿ ಎಂದು ಪ್ರಧಾನಿಯವರಿಗೆ ಹೇಳಲು ಸಾಧ್ಯವಿಲ್ಲ :
ಇನ್ನು ವಿಚಾರಣೆ ವೇಳೆ ಕೃಷಿ ಸಚಿವರು, ಗೃಹ ಸಚಿವರು ಸೇರಿದಂತೆ ಹಲವು ಪ್ರತಿಭಟನಾ ನಿರತ ರೈತರೊಂದಿಗೆ ಚರ್ಚೆ ನಡೆಸಿದ್ದಾರೆ. ಆದರೆ ಪ್ರಧಾನಿಯವರು ಮಾತ್ರ ಇದುವರೆಗೂ ಪ್ರತಿಭಟನಾ ನಿರತ ರೈತರನ್ನು ಭೇಟಿಯಾಗಿಲ್ಲ ಎಂದು ರೈತರು (Farmers) ಹೇಳುತ್ತಿದ್ದಾರೆ ಎಂದು ರೈತರ ಪರ ವಕೀಲ ಎಂ. ಎಲ್. ಶರ್ಮಾ ವಾದಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎಸ್.ಜೆ. ಬೊಬ್ಡೆ ಪ್ರಧಾನಿಯನ್ನು ಪ್ರತಿಭಟನಾ ಸ್ಥಳಕ್ಕೆ ತೆರಳಿ ಎಂದು ಹೇಳಲು ನಮಗೆ ಸಾಧ್ಯವಿಲ್ಲ ಎಂದಿದ್ದಾರೆ.


 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.