ಸಸ್ಪೆಂಡ್ ಆಗಿದ್ದ ಎಎಪಿ ಸಂಸದ ಹರಿಂದರ್ ಸಿಂಗ್ ಖಾಲ್ಸಾ ಬಿಜೆಪಿಗೆ ಸೇರ್ಪಡೆ

ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಹರಿಂದರ್ ಸಿಂಗ್ ಖಾಲ್ಸಾ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ಎಎಪಿ ಟಿಕೆಟ್ ಪಡೆದು ಪಂಜಾಬ್ ನ ಫತೇಘರ್ ಸಾಹಿಬ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿದ್ದರು.
ನವದೆಹಲಿ: ಆಮ್ ಆದ್ಮಿ ಪಕ್ಷದಿಂದ ಅಮಾನತುಗೊಂಡಿದ್ದ ಸಂಸದ ಹರಿಂದರ್ ಸಿಂಗ್ ಖಾಲ್ಸಾ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಹರಿಂದರ್ ಸಿಂಗ್ ಖಾಲ್ಸಾ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ಎಎಪಿ ಟಿಕೆಟ್ ಪಡೆದು ಪಂಜಾಬ್ ನ ಫತೇಘರ್ ಸಾಹಿಬ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿದ್ದರು. ಆದರೆ 2015ರಲ್ಲಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಭಾರತೀಯ ಜನತಾ ಪಕ್ಷದ ಮೈತ್ರಿ ಪಕ್ಷ ಪಂಜಾಬ್ ಶಿರೋಮಣಿ ಅಕಾಲಿ ದಳ(SAD)ದೊಂದಿಗೆ ರಾಜಕೀಯ ಪ್ರವೇಶಿಸಿದ ಖಾಲ್ಸಾ ಸಂಸದರಾಗಿ ಆಯ್ಕೆಯಾಗಿದ್ದರು. ಸದ್ಯ 2019ನೇ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್ ರಾಜ್ಯದ 13 ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.