ಸ್ವಾಮಿ ಚಿನ್ಮಯಾನಂದ್ ಪ್ರಕರಣ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ

ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಾಯಾನಂದ್ ಅವರು ಮೇಲೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಆರೋಪಗಳನ್ನು ಹೊರಿಸಿದ್ದ ಶಹಜಹಾನಪುರ ಕಾನೂನು ವಿದ್ಯಾರ್ಥಿನಿ ದಾಖಲಿಸಿದ ಹೇಳಿಕೆಯ ಪ್ರಮಾಣೀಕೃತ ನಕಲನ್ನು ಪಡೆಯುವ ಅಲಹಾಬಾದ್ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂ ಕೋರ್ಟ್ ಶನಿವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

Last Updated : Nov 16, 2019, 12:29 PM IST
ಸ್ವಾಮಿ ಚಿನ್ಮಯಾನಂದ್ ಪ್ರಕರಣ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ title=

ನವದೆಹಲಿ: ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಾಯಾನಂದ್ ಅವರು ಮೇಲೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಆರೋಪಗಳನ್ನು ಹೊರಿಸಿದ್ದ ಶಹಜಹಾನಪುರ ಕಾನೂನು ವಿದ್ಯಾರ್ಥಿನಿ ದಾಖಲಿಸಿದ ಹೇಳಿಕೆಯ ಪ್ರಮಾಣೀಕೃತ ನಕಲನ್ನು ಪಡೆಯುವ ಅಲಹಾಬಾದ್ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂ ಕೋರ್ಟ್ ಶನಿವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿ ಯು.ಯು ಲಲಿತ್ ಮತ್ತು ನ್ಯಾ. ವಿನೀತ್ ಸರನ್ ಅವರ ನ್ಯಾಯಪೀಠವು ನೋಟಿಸ್ ಜಾರಿಗೊಳಿಸಿದ್ದು, ಕಾನೂನು ವಿದ್ಯಾರ್ಥಿನಿ ಮನವಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ಚಿನ್ಮಯಾನಂದ್ ಅವರಿಂದ ಪ್ರತಿಕ್ರಿಯೆ ಕೋರಿದೆ. ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಡಿಸೆಂಬರ್ 9 ಕ್ಕೆ ಮುಂದೂಡಿದೆ.

ಅಲಹಾಬಾದ್ ಹೈಕೋರ್ಟ್‌ನ ನವೆಂಬರ್ 7 ರ ಆದೇಶದ ವಿರುದ್ಧ ಶಹಜಹಾನಪುರ ಕಾನೂನು ವಿದ್ಯಾರ್ಥಿನಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ದಾಖಲಾದ ಸಂತ್ರಸ್ತೆಯ ಹೇಳಿಕೆಯ ಪ್ರಮಾಣೀಕೃತ ಪ್ರತಿಯನ್ನು ಪಡೆಯಲು ಚಿನ್ಮಯಾನಾದ್‌ಗೆ ಅರ್ಹತೆ ಇದೆ ಎಂದು ಅಭಿಪ್ರಾಯಪಟ್ಟಿದೆ. ಈಗ ಹೈಕೋರ್ಟ್ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಮೇಲ್ಮನವಿ ಅರ್ಜಿಯಲ್ಲಿ ಕಾನೂನು ವಿದ್ಯಾರ್ಥಿನಿ ಚಾರ್ಜ್‌ಶೀಟ್ ಸಲ್ಲಿಸುವ ಮೊದಲು ಸಂತ್ರಸ್ತೆ ಹೇಳಿಕೆಯ ಪ್ರತಿಯನ್ನು ನೀಡುವ ಹೈಕೋರ್ಟ್‌ನ ನಿರ್ದೇಶನವು ಕಾನೂನಿಗೆ ವಿರುದ್ಧವಾಗಿದೆ ಮತ್ತು ಇದು ಬಹುದೊಡ್ಡ ಪರಿಣಾಮಗಳನ್ನು ಬೀರಬಹುದು ಎಂದು ಹೇಳಿದ್ದಾರೆ.

ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಸಂತ್ರಸ್ತೆಯ ಹೇಳಿಕೆಯ ಪ್ರತಿ ಪಡೆಯಲು ಪೂರ್ವಭಾವಿ ಷರತ್ತು, ಚಾರ್ಜ್‌ಶೀಟ್ ಸಲ್ಲಿಸಲಾಗಿದ್ದು, ಮ್ಯಾಜಿಸ್ಟ್ರೇಟ್‌ ಗಮನಕ್ಕೆ ತರಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.ಸೆಪ್ಟೆಂಬರ್ 21 ರಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಚಿನ್ಮಯಾನಂದ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿತ್ತು.

 

Trending News