ಉತ್ತರಪ್ರದೇಶ ಬಿಜೆಪಿ ನೂತನ ಅಧ್ಯಕ್ಷರಾಗಿ ಸ್ವತಂತ್ರ ದೇವ್ ಸಿಂಗ್ ನೇಮಕ
ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರಾಗಿ ಸಿಂಗ್ ಅವರ ನೇಮಕ ಮಾಡಿ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಅಧಿಕಾರವಹಿಸಿಕೊಳ್ಳಲು ತಿಳಿಸಿದ್ದಾರೆ.
ನವದೆಹಲಿ: ಬಿಜೆಪಿಯ ಹಿರಿಯ ಮುಖಂಡ ಸ್ವತಂತ್ರ ದೇವ್ ಸಿಂಗ್ ಅವರನ್ನು ಮಂಗಳವಾರ ಉತ್ತರ ಪ್ರದೇಶ ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರಾಗಿ ಸಿಂಗ್ ಅವರ ನೇಮಕ ಮಾಡಿ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಅಧಿಕಾರವಹಿಸಿಕೊಳ್ಳಲು ತಿಳಿಸಿದ್ದಾರೆ.
ಪ್ರಸ್ತುತ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಂಪುಟದಲ್ಲಿ ಸಾರಿಗೆ ಸಚಿವರಾಗಿರುವ ಸ್ವತಂತ್ರ ದೇವ್ ಸಿಂಗ್, ಉತ್ತರಪ್ರದೇಶದಲ್ಲಿ ನಡೆದ 2017 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಗಳ ಉಸ್ತುವಾರಿ ವಹಿಸಿದ್ದರು.