ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿ ಜೊತೆಗೆ ಕೇರಳದ ವಯನಾಡಿನಲ್ಲಿಯೂ ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.ಇಂದು ನಾಮಪತ್ರ ಸಲ್ಲಿಸುವ ವೇಳೆ ರಾಹುಲ್ ಗಾಂಧಿ ಜೊತೆಗೆ ಸಾಥ್ ನೀಡಿದ ಪ್ರಿಯಾಂಕಾ ಗಾಂಧಿ ಈಗ ಟ್ವೀಟ್ ಮೂಲಕ ವಯನಾಡಿನ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. 


COMMERCIAL BREAK
SCROLL TO CONTINUE READING

"ನನ್ನ ಸಹೋದರ,ನನ್ನ ನಿಜವಾದ ಸ್ನೇಹಿತ ಹಾಗೂ ನನಗೆ ತಿಳಿದಿರುವವರಲ್ಲಿ ಅತಿ ಧೈರ್ಯದ ವ್ಯಕ್ತಿ. ವಯನಾಡಿನವರೆಲ್ಲರು ಅವನನ್ನು ನೋಡಿಕೊಳ್ಳಿ ಅವರೆಂದಿಗೂ ನಿಮ್ಮನ್ನು ಕೈ ಬಿಡುವುದಿಲ್ಲ "ಎಂದು ಮನವಿ ಮಾಡಿಕೊಂಡಿದ್ದಾರೆ.



ಈ ಹಿಂದೆ ಕೇವಲ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಾತ್ರ ಭಾಗವಹಿಸುತ್ತಿದ್ದ ಪ್ರಿಯಾಂಕಾ ಗಾಂಧಿ ಈಗ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ.ಅಲ್ಲದೆ ಉತ್ತರ ಪ್ರದೇಶದ ಪೂರ್ವ ಭಾಗದ ಕಾಂಗ್ರೆಸ್ ಉಸ್ತುವಾರಿಯನ್ನು ವಹಿಸಿದ್ದಾರೆ.ಆ ಮೂಲಕ ಯುಪಿಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಕೈ ಜೋಡಿಸುತ್ತಿದ್ದಾರೆ.ಇನ್ನೊಂದೆಡೆ ಹಲವು ಊಹಾಪೋಹಗಳ ಪ್ರಕಾರ ಅವರು ವಾರಣಾಸಿಯಲ್ಲಿ ಮೋದಿ ವಿರುದ್ಧ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


ಇತ್ತೀಚಿಗೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷವು ಇಚ್ಚಿಸಿದ್ದಲ್ಲಿ ಚುನಾವಣೆಗೆ ನಿಲ್ಲುವುದಾಗಿ ಹೇಳಿಕೆ ನೀಡಿ ಮಾಧ್ಯಮದವರಿಗೆ ಅಚ್ಚರಿ ಮೂಡಿಸಿದ್ದರು.