MK Stalin : ಸೋನಿಯಾ ಗಾಂಧಿ ಭೇಟಿಯಾದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್!
ತಮಿಳುನಾಡು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಡಿಎಂಕೆ ಜತೆ ಮೈತ್ರಿ
ನವದೆಹಲಿ : ತಮಿಳುನಾಡು ಸಿಎಂ, ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಇಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಕೂಡಾ ಉಪಸ್ಠಿತರಿರುವುದಾಗಿ ವರದಿ ತಿಳಿಸಿದೆ.
ತಮಿಳುನಾಡು ವಿಧಾನಸಭಾ ಚುನಾವಣೆ(Tamil Nadu Assembly Elections 2021) ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಡಿಎಂಕೆ ಜತೆ ಮೈತ್ರಿ ಮಾಡಿಕೊಂಡಿತ್ತು. ಚುನಾವಣೆಯಲ್ಲಿ ಡಿಎಂಕೆ ಭರ್ಜರಿ ಜಯಭೇರಿ ಗಳಿಸಿದ ನಂತರ ಇದೇ ಮೊದಲ ಬಾರಿಗೆ ಸ್ಟಾಲಿನ್ ಮತ್ತು ಸೋನಿಯಾಗಾಂಧಿ ಚರ್ಚೆ ನಡೆಸಿರುವುದಾಗಿ ವರದಿ ವಿವರಿಸಿದೆ.
ಇದನ್ನೂ ಓದಿ : Indian Railways : ಜೂ. 21 ರಿಂದ 50 ವಿಶೇಷ ರೈಲುಗಳ ಸಂಚಾರ ಪುನರಾರಂಭ : ಇಲ್ಲಿದೆ ನೋಡಿ ಫುಲ್ ಲಿಸ್ಟ್!
ಮೈತ್ರಿ ಪಾಲುದಾರರಾಗಿರುವ ಕಾಂಗ್ರೆಸ್ ಪಕ್ಷ(Congress Party), ರಾಜ್ಯದಲ್ಲಿನ ನೂತನ ಸರ್ಕಾರದ ಹೊಸ ಯೋಜನೆಗಳು ಮತ್ತು ನೀತಿಗಳ ಬಗ್ಗೆ ಸೋನಿಯಾ ಗಾಂಧಿ ಜತೆ ಚರ್ಚೆ ನಡೆಸಲಾಯಿತು ಎಂದು ವರದಿ ಹೇಳಿದೆ.
ಇದನ್ನೂ ಓದಿ : LPG Delivery Charges : ನಿಮಗೆ ಬೇಕಾದ ಸಮಯದಲ್ಲಿ ಎಲ್ ಪಿಜಿ ಸಿಲಿಂಡರ್ ಬೇಕಾದರೆ ಏನು ಮಾಡಬೇಕು?
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಮತ್ತು ನಾನು (ರಾಹುಲ್ ಗಾಂಧಿ) ಇಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ದುರ್ಗಾವತಿ ಸ್ಟಾಲಿನ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.
DL and RC Validity : ಸೆ. 30ರವರೆಗೆ 'DL-RC' ಸೇರಿದಂತೆ ವಿವಿಧ ದಾಖಲೆಗಳ 'ವ್ಯಾಲಿಡಿಟಿ' ವಿಸ್ತರಣೆ!
ಕೋವಿಡ್(Covid-19) ಪರಿಸ್ಥಿತಿ ನಿರ್ವಹಣೆ ಹಾಗೂ ರಾಜ್ಯಕ್ಕೆ ಅಗತ್ಯವಿರುವ ಹಣಕಾಸು ನೆರವಿನ ಹಿನ್ನೆಲೆಯಲ್ಲಿ ಎಂಕೆ ಸ್ಟಾಲಿನ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸುವುದು ನಿರ್ಧಾರವಾಗಿದೆ.
ಇದನ್ನೂ ಓದಿ : SBI ಗ್ರಾಹಕರಿಗೊಂದು ಮಹತ್ವದ ಮಾಹಿತಿ : ತಪ್ಪದೇ ಈ 3 ಕೆಲಸಗಳನ್ನ ಮಾಡಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.