ತಮಿಳುನಾಡು : 2025-2026ರ ಹಣಕಾಸು ವರ್ಷದ ತಮಿಳುನಾಡು ಬಜೆಟ್‌ನ ಚಿಹ್ನೆಯನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಇಂದು (ಮಾರ್ಚ್ 13, 2025) ಬಿಡುಗಡೆ ಮಾಡಿದ್ದಾರೆ. ಆದರೆ, ಬಜೆಟ್‌ನ ಚಿಹ್ನೆ ಇದೀಗ ಹೊಸ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಏಕೆಂದರೆ ರಾಷ್ಟ್ರೀಯ ರೂಪಾಯಿ ಚಿಹ್ನೆ "₹" ಬದಲಿಗೆ ತಮಿಳು ಅಕ್ಷರ "ரூ" ಎಂದು ಬದಲಾಯಿಸಲಾಗಿದೆ.
ತಮಿಳುನಾಡಿನಲ್ಲಿ ತ್ರಿಭಾಷಾ ನೀತಿಯ ವಿಷಯ ಈಗಾಗಲೇ ಉತ್ತುಂಗಕ್ಕೇರಿದೆ. ಈ ಪರಿಸ್ಥಿತಿಯಲ್ಲಿ, 2025-2026ರ ಹಣಕಾಸು ವರ್ಷದ ತಮಿಳುನಾಡು ಸರ್ಕಾರದ ಬಜೆಟ್ ಅನ್ನು ನಾಳೆ (ಮಾರ್ಚ್ 14, 2025) ವಿಧಾನಸಭೆಯಲ್ಲಿ ಮಂಡಿಸಲಾಗುವುದು. ಇದನ್ನು ಹಣಕಾಸು ಸಚಿವ ತಂಗಮ್ ತೆನ್ನರಸು ಅವರು ಬೆಳಿಗ್ಗೆ 10 ಗಂಟೆಗೆ ಪ್ರಸ್ತುತಪಡಿಸಲಿದ್ದಾರೆ.. ಈ ಕುರಿತು ಮುಖ್ಯಮಂತ್ರಿ ಸ್ಟಾಲಿನ್ ತಮ್ಮ ಸಾಮಾಜಿಕ ಮಾಧ್ಯಮ ಪುಟದಲ್ಲಿ ಬಜೆಟ್‌ಗೆ ಸಂಬಂಧಿಸಿದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ:3600 ತಾಯಂದಿರು, 714 ಲೀಟರ್ ಹಾಲಿನ ದಾನ..! ಇಲ್ಲಿದೆ ತಾಯಿ ಹಾಲಿನ ಬ್ಯಾಂಕ್..!
ತಮಿಳುನಾಡು ಸರ್ಕಾರದ 2025-2026ರ ಬಜೆಟ್ "ಎಲ್ಲರಿಗೂ ಎಲ್ಲವೂ" ಎಂಬ ಶೀರ್ಷಿಕೆಯನ್ನು ಹೊಂದಿದ್ದು, ಇದು ತಮಿಳುನಾಡಿನ ವ್ಯಾಪಕ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂಬ ಸಂದೇಶ ವಿಡಿಯೋದಲ್ಲಿದೆ.. ಆದರೆ ವಿಡಿಯೋದಲ್ಲಿ "₹" ಬದಲಿಗೆ ತಮಿಳು ಅಕ್ಷರ "ரூ" ಬರೆಯಲಾಗಿದೆ. ಇದರಿಂದ ಭಾಷಾ ಸಮಸ್ಯೆಗೆ ಸಂಬಂಧಿಸಿದಂತೆ ಚರ್ಚೆಗಳು ಹುಟ್ಟಿಕೊಂಡಿವೆ.
சமூகத்தின் அனைத்துத் தரப்பினரும் பயன்பெறும் வகையில் தமிழ்நாட்டின் பரவலான வளர்ச்சியை உறுதி செய்திட…#DravidianModel #TNBudget2025 pic.twitter.com/83ZBFUdKZC
— M.K.Stalin (@mkstalin) March 13, 2025
ತಮಿಳುನಾಡು ಸರ್ಕಾರದ ಈ ನಿರ್ಧಾರಕ್ಕೆ ಪ್ರಶಂಸೆ ಮತ್ತು ವಿರೋಧ ಎರಡೂ ವ್ಯಕ್ತವಾಗಿದೆ. ಹಿಂದಿ ಹೇರಿಕೆ ತಮಿಳುನಾಡಿನ ರಾಜಕೀಯ ಕ್ಷೇತ್ರದಲ್ಲಿ ಬಹಳ ಹಿಂದಿನಿಂದಲೂ ಇರುವ ವಿಷಯ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಇದನ್ನು ತೀವ್ರವಾಗಿ ಖಂಡಿಸುತ್ತಿದೆ. ತಮಿಳು ಭಾಷೆಯನ್ನು ರಕ್ಷಿಸಲು ಮುಖ್ಯಮಂತ್ರಿಯವರು ಭಾರತೀಯ ರೂಪಾಯಿ ಚಿಹ್ನೆಯನ್ನು ಬದಲಾಯಿಸಿದ್ದು ಸಮಂಜಸವಾದ ಹೆಜ್ಜೆ ಎಂದು ಕೆಲವರು ಶ್ಲಾಘಿಸಿದ್ದಾರೆ.
ಇದನ್ನೂ ಓದಿ:TAX ಇಲ್ಲದೇ ಭಾರತೀಯರು ದುಬೈನಿಂದ ಎಷ್ಟು Gold ತರಬಹುದು ಗೊತ್ತೆ..? 1 KG ಗೂ ಹೆಚ್ಚು.. ಆದರೆ...
ಈ ಮಧ್ಯೆ, ರಾಷ್ಟ್ರೀಯ ಚಿಹ್ನೆಗಳನ್ನು ಅವಹೇಳನ ಮಾಡುವುದು ದೇಶವನ್ನೇ ಅವಮಾನಿಸಿದಂತೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಖಂಡಿಸುತ್ತಿದ್ದಾರೆ. ತಮಿಳುನಾಡಿನಲ್ಲಿ ಭಾಷಾ ಸಮಸ್ಯೆ ಈಗಾಗಲೇ ಮುಂದುವರೆದಿದ್ದು, ರೂಪಾಯಿ ಚಿಹ್ನೆಯನ್ನು ಬದಲಾಯಿಸಿ ಬಜೆಟ್ ಸ್ಟ್ಯಾಂಪ್ ಬಿಡುಗಡೆ ಮಾಡುವ ಸರ್ಕಾರದ ನಿರ್ಧಾರವು ವಿವಾದವನ್ನು ಹುಟ್ಟುಹಾಕಿದೆ. ಆದರೂ ಮಾರ್ಚ್ 14, 2025 ರಂದು ಮಂಡಿಸಲಾಗುವ ಬಜೆಟ್‌ನಲ್ಲಿ ಇದಕ್ಕೆ ವಿವರಣೆಯನ್ನು ನೀಡುವ ನಿರೀಕ್ಷೆಯಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









