ಕನ್ಯಾಕುಮಾರಿ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ 27 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶುಕ್ರವಾರ ತನ್ನ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಶ್ರೀ ಮೂಕಾಂಬಿಕಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ (SMIMS) 2ನೇ ವರ್ಷದ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯ ಕೋಣೆಯಲ್ಲಿದ್ದ ಡೆತ್‍ನೋಟ್‍ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅದು ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗಿದೆ.


ಇದನ್ನೂ ಓದಿ: ಶೀಘ್ರದಲ್ಲೇ ಬರಲಿದೆ ವಂದೇ ಭಾರತ್ ಸ್ಲೀಪರ್‌ ರೈಲು


ತನ್ನ ಡೆತ್‍ನೋಟ್‍ನಲ್ಲಿ ಸಾವಿಗೆ ಕಾರಣವನ್ನು ತಿಳಿಸಿರುವ ವಿದ್ಯಾರ್ಥಿನಿ ಹಲವರ ಹೆಸರುಗಳನ್ನು ಉಲ್ಲೆಖಿಸಿದ್ದಾಳೆ. ‘ನನ್ನ ಕಾಲೇಜಿನ ಪ್ರಾಧ್ಯಾಪಕರು ಮತ್ತು ಸಿನಿಯರ್‍ಗಳು ನನಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಾನಸಿಕವಾಗಿ ನಿಂದಿಸಿದ್ದಾರೆ’ ಎಂದು ಆರೋಪಿಸಿದ್ದಾಳೆ. ‘ಕ್ಷಮಿಸಿಬಿಡಿ ಅಪ್ಪಾ.. ನಾನು ನಿಮ್ಮನ್ನು ಹೆಚ್ಚು ಪ್ರೀತಿಸುತ್ತೇನೆ’ ಅಂತಾ ಹೇಳಿದ್ದಾಳೆ.    


‘ಖಿನ್ನತೆಯಿರುವ ಜನರು ಸಹ ಸಂತೋಷವಾಗಿರುವುದನ್ನು ಕಾಣಬಹುದು. ದಯೆಯಿಂದಿರಿ, ನಿರ್ಣಯಿಸಬೇಡಿ. ನಿಮ್ಮ ಕುಟುಂಬಕ್ಕಾಗಿ ಖುಷಿಯಿಂದ ಇರಿ’ ಎಂದು ಬರೆದಿದ್ದಾಳೆ. ವಿದ್ಯಾರ್ಥಿನಿಯ ಡೆತ್‍ನೋಟ್‍ ಆಧರಿಸಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆಕೆ ಡೆತ್‍ನೋಟ್‍ನಲ್ಲಿ ಉಲ್ಲೇಖಿಸಿರುವ ಜನರ ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣವು ತಮಿಳುನಾಡು ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎಂ.ರವಿ ಅವರ ಗಮನ ಸೆಳೆದಿದೆ. ಅವರು ಸಹ ವಿದ್ಯಾರ್ಥಿನಿಯ ಡೇತ್‍ನೋಟ್‍ಅನ್ನು ಟ್ವಿಟರ್‍ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: Daily GK Quiz: ಭಾರತದ ಯಾವ ರಾಜ್ಯವು ವಿಶ್ವದ ಅತಿದೊಡ್ಡ ಶಾಲೆಯನ್ನು ಹೊಂದಿದೆ?


‘ನಾನು ವಿದ್ಯಾರ್ಥಿನಿಯ ಸೂಸೈಡ್ ನೋಟ್ ಗಮನಿಸಿದೆ. ಈ ಬಗ್ಗೆ ತನಿಖೆ ನಡೆಸಿ ಸತ್ಯಾಂಶಗಳನ್ನು ಹೊರತರಬೇಕು. ಇಂತಹ ಕಿರುಕುಳವನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ. ರಾಷ್ಟ್ರೀಯ ಪ್ರಶಸ್ತಿ ವಿಜೇತ ಗಾಯಕಿ ಚಿನ್ಮಯಿ ಸಹ ಈ ಪ್ರಕರಣದ ಸಮಗ್ರ ತನಿಖೆಗಾಗಿ ಆಗ್ರಹಿಸಿದ್ದಾರೆ. ಮಹಿಳಾ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಅಧ್ಯಯನ ಮತ್ತು ಇಂಟರ್ನ್‌ಶಿಪ್ ಸಮಯದಲ್ಲಿ ಎದುರಿಸುತ್ತಿರುವ ಲೈಂಗಿಕ ಕಿರುಕುಳ ಪ್ರಕರಣಗಳ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.   


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.