close

News WrapGet Handpicked Stories from our editors directly to your mailbox

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ ತಮಿಳುನಾಡು ಸರ್ಕಾರ ಬದ್ಧ: ಸಿಎಂ

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಅನುಭವಿಸುತ್ತಿರುವ ಏಳು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಮತ್ತೆ ತಮಿಳು ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ಒತ್ತಾಯಿಸಿವೆ.

Updated: May 20, 2019 , 06:16 PM IST
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ ತಮಿಳುನಾಡು ಸರ್ಕಾರ ಬದ್ಧ: ಸಿಎಂ

ಸೇಲಂ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಏಳು ಅಪರಾಧಿಗಳ ಬಿಡುಗಡೆಗೆ ತಮಿಳುನಾಡು ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ.

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ಶಿಫಾರಸುಗಳ ಆಧಾರದ ಮೇಲೆ ರಾಜ್ಯಪಾಲರು ಅಪರಾಧಿಗಳ ಬಿಡುಗಡೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. "ಎಲ್ಲಾ ಏಳು ಆರೋಪಿಗಳ ಬಿಡುಗಡೆಯಾಗಲಿ ಎಂಬುದೇ ನಮ್ಮ ಆಶಯ. ಅದಕ್ಕಾಗಿ ನಾವು ಕ್ಯಾಬಿನೆಟ್ ನಲ್ಲಿ ನಿರ್ಣಯವನ್ನು ಜಾರಿಗೊಳಿಸಿ ರಾಜ್ಯಪಾಲರಿಗೆ ಕಳುಹಿಸಿದ್ದೇವೆ. ಅದರ ಅನುಸಾರ ರಾಜ್ಯಪಾಲರು ನಿರ್ಧರಿಸಲಿದ್ದಾರೆ" ಎಂದು ತಿಳಿಸಿದರು. 

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಅನುಭವಿಸುತ್ತಿರುವ ಏಳು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಮತ್ತೆ ತಮಿಳು ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ಒತ್ತಾಯಿಸಿದ ಹಿನ್ನೆಲೆಯಲ್ಲಿ ಸಿಎಂ ಪಳನಿಸ್ವಾಮಿ ಹೇಳಿಕೆ ನೀಡಿದ್ದಾರೆ. 

ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ 1991ರ ಮೇ 21ರಂದು ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಹತ್ಯೆ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಲಾಯಿತು. ಈ ಸಂಬಂಧ ಏಳು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಏಳೂ ಜನ ಆಪರಾಧಿಗಳು 1991ರಿಂದ ಜೈಲುವಾಸ ಅನುಭವಿಸುತ್ತಿದ್ದಾರೆ.