ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿಯ ಅವಘಡ ಸಂಭವಿಸಿದೆ. ಬಿಜ್ನೋರ್-ಮೊಹಿತ್ ಪೆಟ್ರೊ ಕೆಮಿಕಲ್ ಫ್ಯಾಕ್ಟರಿನಲ್ಲಿ ಮೀಥೇನ್ ಅನಿಲದ ಟ್ಯಾಂಕ್ ಬ್ಲಾಸ್ಟ್ ಆಗಿದ್ದು, ಅದರಿಂದ ಇಡೀ ಕಾರ್ಖಾನೆ ಹೊತ್ತಿ ಉರಿದಿದೆ ಎಂದು ಹೇಳಲಾಗಿದೆ. ಕಾರ್ಖಾನೆಯಲ್ಲಿ ಬೆಂಕಿ ತಗುಲಿರುವ ಸುದ್ದಿ ತಿಳಿದ ನಂತರ ಅಲ್ಲಿ ಕೆಲಸ ಮಾಡುವವರಲ್ಲಿ ಆತಂಕ ಉಂಟಾಯಿತು.


COMMERCIAL BREAK
SCROLL TO CONTINUE READING

6 ಕಾರ್ಮಿಕರ ಸಾವು:
ಬೆಂಕಿ ಅವಘಡದ ಸುದ್ದಿ ತಿಳಿದ ಪೊಲೀಸರು, ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಈ ಬೆಂಕಿ ಅವಘಡದಲ್ಲಿ ಇಲ್ಲಿಯವರೆಗೆ ಆರು ಮಂದಿ ಮೃತಪಟ್ಟಿರುವ ಬಗ್ಗೆ ಆಡಳಿತಾಧಿಕಾರಿಗಳು ದೃಢಪಡಿಸಿದ್ದಾರೆ. ೮ ಮಂದಿ ಗಾಯಗೊಂಡಿರುವ ಬಗ್ಗೆ ವರದಿಗಳಾಗಿವೆ. ಅದೇ ಸಮಯದಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.