ಹೈದರಾಬಾದ್‌: ಟಿಆರ್ ಎಸ್, ಟಿಡಿಪಿ ಮತ್ತು ಕಾಂಗ್ರೆಸ್ ನ ಹೆಚ್ಚಿನ ಸಂಖ್ಯೆಯ ನಾಯಕರು ಭಾನುವಾರ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.


COMMERCIAL BREAK
SCROLL TO CONTINUE READING

ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಹಿರಂಗ ಸಮಾವೇಶದಲ್ಲಿ ಇತರ ಪಕ್ಷಗಳ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿದೆ.


ಇತ್ತೀಚಿಗೆ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಬಂಡಾಯ ಎದ್ದಿರುವ ನಾಯಕರು ಮುಂದಣ ವರ್ಷಗಳಲ್ಲಿ ತಮ್ಮ ರಾಜಕೀಯ ಜೀವನವನ್ನು ಭದ್ರಪದಿಸಿಕೊಳ್ಳಲು ಬಿಜೆಪಿಗೆ ಸೇರ್ಪಡೆಗೊಳ್ಳುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.


ರಾಜ್ಯದಲ್ಲಿ ಸದ್ಯದಲ್ಲೇ ನಡೆಯಲಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಬಲಪಡಿಸುವುದು ಮತ್ತು ಕ್ಲಸ್ಟರ್ ಮಟ್ಟದಲ್ಲಿ ತಂಡಗಳನ್ನು ರಚಿಸುವುದು ನಡ್ದಾ ಅವರ ಪ್ರಮುಖ ಉದ್ದೇಶವಾಗಿದೆ. 


ಈಗಾಗಲೇ ಟಿಆರ್‌ಎಸ್‌ನ ಮಾಜಿ ಸಂಸದ ಜಿ.ವಿವೇಕಾನಂದ, ಮಾಜಿ ಶಾಸಕ ಸೋಮರಾಪು ಸತ್ಯನಾರಾಯಣ, ಡಿಟಿಪಿಯ ಮಾಜಿ ಇ.ಪೆದ್ದಿ ರೆಡ್ಡಿ ಬಿಜೆಪಿಗೆ ಸೇರ್ಪಡೆಯಾಗಿದ್ದು, ಇಂದು ಮತ್ತಷ್ಟು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.