Child birth Offer: ಜನಸಂಖ್ಯಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರವು ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ʼನಾವಿಬ್ಬರೂ ನಮಗಿಬ್ಬರುʼ ಅನ್ನೋ ಘೋಷವಾಕ್ಯವೂ ದೇಶದಲ್ಲಿ ಚಾಲ್ತಿಯಲ್ಲಿದೆ. ಇಂದಿನ ದುಬಾರಿ ದುನಿಯಾದಲ್ಲಿ ಒಂದೇ ಮಗುವನ್ನ ಹೆತ್ತು ಹೊತ್ತು ಸಾಕುವಷ್ಟರಲ್ಲಿ ಬದುಕು ಸಾಕು ಅನಿಸುತ್ತದೆ ಅನ್ನೋರಿದ್ದಾರೆ. ಭಾರತದಲ್ಲಿ ಬಹುತೇಕರು ಎರಡು ಮಕ್ಕಳು ಮಾಡಿಕೊಂಡು ನೆಮ್ಮದಿಯಾಗಿರಲು ಪ್ರಯತ್ನಿಸುತ್ತಿದ್ದಾರೆ. ಇದೀಗ ಆಂಧ್ರಪ್ರದೇಶದಲ್ಲಿ ಸರ್ಕಾರದ ಪ್ರತಿನಿಧಿಯೇ ಮೂರನೇ ಮಗು ಮಾಡಿಕೊಳ್ಳಿ ಅಂತಾ ದಂಪತಿಗೆ ಸೂಚಿಸಿದ್ದಾರೆ. ಮೂರನೇ ಮಗು ಮಾಡಿಕೊಂಡರೆ ವಿಶೇಷ ಸವಲತ್ತುಗಳನ್ನ ನೀಡುವುದಾಗಿ ವಾಗ್ದಾನ ಮಾಡಿದ್ದಾರೆ.
ಹೌದು, ಮೂರನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವುದಾಗಿ ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ (TDP) ವಿಜಯನಗರ ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಘೋಷಿಸಿದ್ದಾರೆ. ದಂಪತಿಗೆ ಜನಿಸುವ ಮೂರನೇ ಮಗು ಹೆಣ್ಣಾದರೆ ತಮ್ಮ ಸಂಬಳದಿಂದ 50,000 ರೂ. ಹಾಗೂ ಗಂಡು ಮಗುವಾದರೆ ಒಂದು ಹಸುವನ್ನು ಗಿಫ್ಟ್ ನೀಡುವುದಾಗಿ ಆಫರ್ ನೀಡಿದ್ದಾರೆ. ಸಂಸದರ ಈ ಘೋಷಣೆ ಸಖತ್ ಸಂಚಲನವನ್ನು ಸೃಷ್ಟಿಸಿದೆ.
ಇದನ್ನೂ ಓದಿ: ಕನ್ನಡದ ಪ್ರಖ್ಯಾತ ನಟ ಅಚ್ಯುತ್ ಕುಮಾರ್ ಪತ್ನಿ ಯಾರು ಗೊತ್ತೇ? ಅವರೂ ಸಖತ್ ಫೇಮಸ್ ನಟಿ..
ಆಂಧ್ರಪ್ರದೇಶದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, TDP ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಮೂರನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಪ್ರೋತ್ಸಾಹಧನ ನೀಡುವುದಾಗಿ ಹೇಳಿದ್ದಾರೆ. ಅವರ ಈ ಹೇಳಿಕೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಸಂಸದರ ಹುಟ್ಟೂರು ರಣಸ್ಥಳಂನಲ್ಲಿರುವ ಪಕ್ಷದ ಕಾರ್ಯಕರ್ತರು ಮತ್ತು ಸಾವಿರಾರು ಅಭಿಮಾನಿಗಳು ಈ ಘೋಷಣೆಯನ್ನ ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದಾರೆ. ಮಹಿಳಾ ಸಬಲೀಕರಣ ಮತ್ತು ಜನಸಂಖ್ಯಾ ಬೆಳವಣಿಗೆ ಉತ್ತೇಜಿಸಲು ಸಂಸದರು ಈ ಆಫರ್ ನೀಡುತ್ತಿದ್ದಾರೆ ಅಂತಾ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಂಸದರು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಯಾವುದೇ ಒಬ್ಬ ಮಹಿಳೆ ಮೂರನೇ ಮಗುವಿಗೆ ಅದರಲ್ಲೂ ಹೆಣ್ಣು ಮಗುವಿಗೆ ಜನ್ಮ ನೀಡಿದರೆ, ನನ್ನ ಸಂಬಳದಿಂದ 50 ಸಾವಿರ ರೂ. ಹಣ ನೀಡುತ್ತೇನೆ. ಗಂಡು ಮಗುವಾದರೆ ಒಂದು ಹಸುವನ್ನು ಗಿಫ್ಟ್ ನೀಡುತ್ತೇನೆ ಅಂತಾ ಹೇಳಿದ್ದಾರೆ. ಇದು ಜನಸಂಖ್ಯಾ ಬೆಳವಣಿಗೆ ಉತ್ತೇಜಿಸುವುದರ ಜೊತೆಗೆ ಮಹಿಳೆಯರ ಸಬಲೀಕರಣದ ಕ್ರಾಂತಿಕಾರಿ ನಿರ್ಧಾರವೆಂದು ಹೇಳಿದ್ದಾರೆ. ಈ ವಿಶೇಷ ಘೋಷಣೆ ಮಾಡಿರುವ ಸಂಸದ ಅಪ್ಪಲನಾಯ್ಡು ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಜನಸಂಖ್ಯಾ ಬೆಳವಣಿಗೆಗೆ ಕ್ರಮ ಕೈಗೊಳ್ಳಬೇಕೆಂದು ನಾಯ್ಡು ಸಹ ಕರೆ ನೀಡಿದ್ದರು. ಈ ಹಿನ್ನೆಲೆ ಅಪ್ಪಲನಾಯ್ಡು ಅವರು ಮೂರನೇ ಮಗು ಹೊಂದಲು ಉತ್ತೇಜನ ನೀಡುತ್ತಿದ್ದಾರೆ.
ಇದನ್ನೂ ಓದಿ: ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜೀವಮಾನ ಸಾಧನೆ ಪ್ರಶಸ್ತಿ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









