ಹೈದರಾಬಾದ್: ತೆಲುಗು ದೇಶಂ ಪಕ್ಷ(ಟಿಡಿಪಿ) 2019ರ ಲೋಕಸಭಾ ಚುನಾವಣೆಗಾಗಿ 25 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 


COMMERCIAL BREAK
SCROLL TO CONTINUE READING

ಅಶೋಕ್ ಗಜಪತಿ ರಾಜು ವಿಜಯನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಕೇಸಿನೆನಿ ಶ್ರೀನಿವಾಸ್ ವಿಜಯವಾಡದಿಂದ, ಗಲ್ಲಾ ಜಯದೇವ್ ಗುಂಟೂರು ಕ್ಷೇತ್ರದಿಂದ ಮತ್ತು ಎನ್. ಶಿವಪ್ರಸಾದ್ ಅವರಿಗೆ ಚಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.



ಆಂಧ್ರ ಪ್ರದೇಶದಲ್ಲಿ ಲೋಕಸಭಾ ಚುನಾವಣೆ ಜೊತೆಗೆ ವಿಧಾನಸಭಾ ಚುನಾವಣೆ ಕೂಡಾ ನಡೆಯಲಿದೆ. ವಿಧಾನಸಭಾ ಚುನಾವಣೆಗಾಗಿ ಈ ಮೊದಲು 126 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಟಿಡಿಪಿ, ಇದೀಗ 36 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. 



ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸುನೀಲ್ ಅರೋರಾ ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ 25 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆಯನ್ನು ಘೋಷಿಸಿದ್ದು, ಏಪ್ರಿಲ್ 11 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿವೆ. ಮೇ 23ರಂದು ಫಲಿತಾಂಶ ಪ್ರಕಟವಾಗಲಿವೆ ಎಂದು ಘೋಷಿಸಿದ್ದಾರೆ.