ಬಲಿಯಾ: ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡೋದು ಬಿಟ್ಟು ಮೊಬೈಲ್ ನಲ್ಲಿ ಅಶ್ಲೀಲ ವೀಡಿಯೋಗಳನ್ನು ತೋರಿಸಿ, ಅಶ್ಲೀಲವಾಗಿ ವರ್ತಿಸುತ್ತಿದ್ದ ಶಿಕ್ಷಕನೋರ್ವನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. 


COMMERCIAL BREAK
SCROLL TO CONTINUE READING

ಆರೋಪಿ ಪ್ರಾಥಮಿಕ ಶಾಲಾ ಶಿಕ್ಷಕ ಅರವಿಂದ್ ಕುಮಾರ್ ನನ್ನು ಮಂಗಳವಾರ ಅಮಾನತುಗೊಳಿಸಲಾಗಿದ್ದು, ಆತನ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಅಧಿಕಾರಿ ಸಂತೋಷ್ ರಾಯ್ ತಿಳಿಸಿದ್ದಾರೆ. 


ಗುರು-ಶಿಷ್ಯರ ಸಂಬಂಧವನ್ನು ಹಾಳು ಮಾಡುತ್ತಿರುವ ಬಗ್ಗೆ ಗ್ರಾಮಸ್ಥರು ಈ ಹಿಂದೆ ದೂರು ನೀಡಿದ್ದರು. ಐದು ಮತ್ತು ಆರನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಪಾಠ ಮಾಡುವ ಬದಲಿಗೆ ಮೊಬೈಲ್ ನಲ್ಲಿ ಅಶ್ಲೀಲ ವೀಡಿಯೋ ತೋರಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ದೂರಿದ್ದರು. ಈ ಸಂಬಂಧ ಬ್ಲಾಕ್ ಎಜುಕೇಶನ್ ಆಗಿಸರ್ ಹೇಮಂತ್ ಕುಮಾರ ಅವರ ತನಿಖಾ ವರದಿ ಆಧರಿಸಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ರಾಯ್ ತಿಳಿಸಿದ್ದಾರೆ.