Accident In Akola: ಮಹಾರಾಷ್ಟ್ರದ ಅಕೋಲಾದಲ್ಲಿ ಬಿರುಗಾಳಿ ಸಹಿತ ಮಳೆಗೆ ಭಾರೀ ಹಾನಿ ಸಂಭವಿಸಿದೆ. ಬಾಲಾಪುರ ತಾಲೂಕಿನ ಬಾಬೂಜಿ ಮಹಾರಾಜ ಮಂದಿರ ಆವರಣದ ತಗಡಿನ ಶೆಡ್‌ ಮೇಲೆ ಬೇವಿನ ಮರ ಬಿದ್ದಿದೆ. ಇದರಿಂದ ತಗಡಿನ ಶೆಡ್ ಕುಸಿದು 40 ಮಂದಿ ಅದರಡಿ ಸಿಲುಕಿದ್ದರು. ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಳುಗಳು ಅಕೋಲಾ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ವೇಳೆ 40 ಮಂದಿ ತಗಡಿನ ಶೆಟ್‌ ಕಳೆಗೆ ಇದ್ದರು ಎಂದು ಅಕೋಲಾ ಜಿಲ್ಲಾಧಿಕಾರಿ ನೀಮಾ ಅರೋರಾ ತಿಳಿಸಿದ್ದಾರೆ. ತಗಡಿನ ಶೆಡ್ ಮೇಲೆ ಹಳೆಯ ಮರವೊಂದು ಬಿದ್ದು ಈ ಅವಘಡ ಸಂಭವಿಸಿದೆ.


COMMERCIAL BREAK
SCROLL TO CONTINUE READING

ಶೆಡ್ ಅಡಿಯಲ್ಲಿ ಸುಮಾರು 40 ಜನರು ಇದ್ದರು, ಈ ಪೈಕಿ 36 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಕೋಲಾದ ಡಿಎಂ ಹೇಳಿದರು. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇನ್ನೂ ಮೂವರು ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಭಕ್ತರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಇದನ್ನೂ ಓದಿ : ಮ್ಯೂಸಿಕ್ ನಿಲ್ಲಿಸುವಂತೆ ಹೇಳಿದ ಗರ್ಭಿಣಿ ಮಹಿಳೆ ಮೇಲೆ ಗುಂಡಿನ ದಾಳಿ, ಆಸ್ಪತ್ರೆಯಲ್ಲಿ ಸಾವು 


ಅಪಘಾತದ ಬಗ್ಗೆ ಡಿಸಿಎಂ ಫಡ್ನವೀಸ್ ಸಂತಾಪ : 


ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೂಡ ಅಕೋಲಾದಲ್ಲಿ ನಡೆದ ಈ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಅವಘಡದಲ್ಲಿ ಕೆಲವು ಭಕ್ತರು ಸಾವನ್ನಪ್ಪಿದ್ದಾರೆ. ಧಾರ್ಮಿಕ ಕಾರ್ಯಕ್ರಮಕ್ಕಾಗಿ ಜನರು ಜಮಾಯಿಸಿದ್ದರು. ಅಕೋಲಾದಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಸೇರಿದ್ದ ಜನರು ತೆಗಡಿನ ಶೆಡ್‌ನ ಮೇಲೆ ಮರ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬೇಸರವಾಗಿದೆ ಎಂದು ದೇವೇಂದ್ರ ಫಡ್ನವಿಸ್ ಟ್ವೀಟ್ ಮಾಡಿದ್ದಾರೆ.  


ಸ್ಥಳಕ್ಕೆ ಉನ್ನತ ಅಧಿಕಾರಿಗಳು ಭೇಟಿ : 


ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯುವಂತೆ ಸಹಕರಿಸಿದರು. ನಾವು ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಗಾಯಾಳುಗಳಿಗೆ ಚಿಕಿತ್ಸೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ : Watch: ತನ್ನ ನಾಲಿಗೆಗೆ ಮುತ್ತಿಟ್ಟು, ನೆಕ್ಕುವಂತೆ ಬಾಲಕನಿಗೆ ಸೂಚಿಸಿದ ದಲೈಲಾಮ! ಇದೆಂಥಾ ಅಸಹ್ಯ? ವಿಡಿಯೋ ನೋಡಿ


ಸಂತ್ರಸ್ತರಿಗೆ ಆರ್ಥಿಕ ನೆರವು ದೊರೆಯಲಿದೆ : 


ಗಾಯಾಳುಗಳಲ್ಲಿ ಕೆಲವರನ್ನು ಜಿಲ್ಲಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಸಣ್ಣಪುಟ್ಟ ಗಾಯಗಳಾಗಿರುವವರಿಗೆ ಬಾಲಾಪುರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಫಡ್ನವೀಸ್ ಟ್ವೀಟ್‌ನಲ್ಲಿ ಬರೆದಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಸಿಎಂ ಏಕನಾಥ್ ಶಿಂಧೆ ನಿರ್ಧರಿಸಿದ್ದಾರೆ ಎನ್ನಲಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.