ನವದೆಹಲಿ: ರೈತರಲ್ಲಿ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಒಂದು ದಿನದ ನಂತರ, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ತೆಲಂಗಾಣ ಸರ್ಕಾರದ ಪರವಾಗಿ ಎಲ್ಲಾ ಹುತಾತ್ಮ ರೈತರ ಕುಟುಂಬಗಳಿಗೆ 3 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: T-20 World Cup: 'Khan Sahab ನೀವು ಹಠ ಮಾಡಬಾರದಿತ್ತು' ಪಾಕ್ ಪ್ರಧಾನಿ Imran Khanಗೆ ಟಾಂಗ್ ನೀಡಿದ ಮಾಜಿ ಪತ್ನಿ


ಇದೆ ವೇಳೆ ಅವರು ಪ್ರತಿ ದುಃಖಿತ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಪ್ರಧಾನಿ ಮೋದಿಯವರನ್ನು ಒತ್ತಾಯಿಸಿದ್ದಾರೆ.ಸಿಂಘು ಗಡಿಯಲ್ಲಿ ರೈತರ ಪ್ರತಿಭಟನೆ ವೇಳೆ ರೈತರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಕೆಸಿಆರ್ ಮನವಿ ಮಾಡಿದ್ದಾರೆ.


ಇದನ್ನೂ ಓದಿ : GST Hike: Fashion ಪ್ರಿಯರಿಗೊಂದು ಕಹಿ ಸುದ್ದಿ


ಈ ಹಿಂದೆ, ತೆಲಂಗಾಣ ಸಿಎಂ ಪಿಎಂ ಮೋದಿಗೆ ಬರೆದ ಪತ್ರದಲ್ಲಿ ಮುಂದಿನ ರಬಿ ಋತುವಿನಲ್ಲಿ ತೆಲಂಗಾಣದಿಂದ ಅಕ್ಕಿ ಸಂಗ್ರಹಣೆಯ ಗುರಿಯನ್ನು ಖಚಿತಪಡಿಸಲು ಭಾರತೀಯ ಆಹಾರ ನಿಗಮಕ್ಕೆ (ಎಫ್‌ಸಿಐ) ನಿರ್ದೇಶಿಸುವಂತೆ ಒತ್ತಾಯಿಸಿದರು.ಕೃಷಿ ಕಾನೂನುಗಳ ಕುರಿತು, ಪ್ರಧಾನಿ ಮೋದಿ ಅವರು ಶುಕ್ರವಾರ ಗುರುಪರ್ಬ್ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ಕೇಂದ್ರವು ಹೊಸದಾಗಿ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.