ಹೈದರಾಬಾದ್ : ಕೊರೊನಾವೈರಸ್ ಪ್ರಕರಣಗಳು ಕಡಿಮೆಯಾಗುತ್ತಿರುವ ಮಧ್ಯೆ, ಕ್ರಮೇಣ ಎಲ್ಲಾ ರಾಜ್ಯಗಳು ಅನ್ಲಾಕ್ ಪ್ರಕ್ರಿಯೆ ಆರಂಭಿಸಿವೆ. ಇಂದಿನಿಂದ ಅಂದರೆ  ಭಾನುವಾರದಿಂದ ತೆಲಂಗಾಣದಲ್ಲಿ ಲಾಕ್‌ಡೌನ್ ಕೊನೆಗೊಂಡಿದೆ. ಇದರೊಂದಿಗೆ ಶಾಲಾ ಕಾಲೇಜುಗಳನ್ನುಮತ್ತೆ ಆರಂಭಿಸುವ ನಿರ್ಧಾರಕ್ಕೆ ಬಂದಿದೆ. 


COMMERCIAL BREAK
SCROLL TO CONTINUE READING

ಶಾಲಾ ಕಾಲೇಜು ಪುನರಾರಂಭಕ್ಕೆ ಸರ್ಕಾರ ನಿರ್ಧಾರ : 
ಕರೋನವೈರಸ್ (Coronavirus) ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ ಇದೀಗ, ಜುಲೈ 1 ರಿಂದ ರಾಜ್ಯದಲ್ಲಿ ಲಾಕ್ ಡೌನ್ ಕೊನೆಗೊಳಿಸಲು ತೆಲಂಗಾಣ ಸರ್ಕಾರ (Telangana Govt) ನಿರ್ಧರಿಸಿದೆ. ಇದರೊಂದಿಗೆ, ರಾಜ್ಯದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಕೂಡಾ ಸರ್ಕಾರ ನಿರ್ಧರಿಸಿದೆ. ಕರೋನಾ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಲಾಕ್‌ಡೌನ್ (Lockdown) ಜಾರಿಯಲ್ಲಿತ್ತು.


ಇದನ್ನೂ ಓದಿ : ನೂತನ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಕಳವಳಕಾರಿ-ಏಮ್ಸ್ ಮುಖ್ಯಸ್ಥ


ಅಧಿಕೃತ ಪ್ರಕಟಣೆ: 
ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ರಾಜ್ಯ ಕ್ಯಾಬಿನೆಟ್ ನಲ್ಲಿ ಈ ನಿರ್ಧಾರ ತೆಗೆದುಕೊಂಡಿರುವ ಬಗ್ಗೆ ತಿಳಿಸಲಾಗಿದೆ.  ಅಲ್ಲದೆ, ಲಾಕ್ ಡೌನ್ (lockdown) ಸಮಯದಲ್ಲಿ ವಿಧಿಸಲಾದ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ರಾಜ್ಯದಲ್ಲಿ COVID-19 ಪ್ರಕರಣಗಳು ಕಡಿಮೆಯಾಗಿರುವ ಬಗ್ಗೆ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಯ ವರದಿ ಬಂದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 


ಸೂಚನೆ ನೀಡಿದ ಶಿಕ್ಷಣ ಇಲಾಖೆ : 
ನೆರೆಯ ರಾಜ್ಯಗಳಲ್ಲೂ ಕರೋನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂದು ತೆಲಂಗಾಣ ಕ್ಯಾಬಿನೆಟ್ (Telangana Cabinet) ಹೇಳಿದೆ. ಜೂನ್ 8 ರಂದು ರಾಜ್ಯದ ಲಾಕ್ ಡೌನ್ ಅನ್ನು ಇನ್ನೂ 10 ದಿನಗಳವರೆಗೆ ವಿಸ್ತರಿಸಲು ಕ್ಯಾಬಿನೆಟ್ ನಿರ್ಧರಿಸಿತ್ತು. ಶಿಕ್ಷಣ ಇಲಾಖೆಯು ಜುಲೈ 1 ರಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಸೂಚನೆಗಳನ್ನು ನೀಡಿದೆ. ಅಂದರೆ ಜುಲೈ ಒಂದರಿಂದ ಆಫ್ ಲೈನ್ ತರಗತಿಗಳು ನಡೆಯಲಿವೆ. 


ಇದನ್ನೂ ಓದಿ : Ministry of Education: ಮನೆಯಲ್ಲಿ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಿ, ಪೋಷಕರಿಗೆ ಶಿಕ್ಷಣ ಸಚಿವಾಲಯದ ಮಾರ್ಗಸೂಚಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.