ರಾಜಾಗೆ ‘ಸಜಾ’: ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಬಿಜೆಪಿಯಿಂದ ಅಮಾನತು!

ರಾಜಾ ಸಿಂಗ್ ಹೇಳಿಕೆಯಿಂದ ಆಕ್ರೋಶಗೊಂಡ ಮುಸ್ಲಿಂ ಸಮುದಾಯದ ಜನರು ಹೈದರಾಬಾದ್‌ನ ಹಲವು ಪ್ರದೇಶಗಳಲ್ಲಿ ಸೋಮವಾರ ಸಂಜೆಯಿಂದ ಇಲ್ಲಿಯವರೆಗೆ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಟಿ ರಾಜಾ ಸಿಂಗ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

Written by - Bhavishya Shetty | Last Updated : Aug 23, 2022, 04:19 PM IST
    • ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಬಿಜೆಪಿಯಿಂದ ಅಮಾನತು
    • ಪಕ್ಷದಿಂದ ಏಕೆ ಉಚ್ಚಾಟಿಸಬಾರದು ಎಂಬುದಕ್ಕೆ 10 ದಿನಗಳೊಳಗೆ ಉತ್ತರ ನೀಡುವಂತೆ ಶೋಕಾಸ್ ನೋಟೀಸ್
    • ರಾಜಾ ಸಿಂಗ್ ಹೇಳಿಕೆಯಿಂದ ಆಕ್ರೋಶಗೊಂಡ ಮುಸ್ಲಿಂ ಸಮುದಾಯ
ರಾಜಾಗೆ ‘ಸಜಾ’: ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಬಿಜೆಪಿಯಿಂದ ಅಮಾನತು! title=
MLA T Raja

ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಅಮಾನತುಗೊಳಿಸಿದೆ. ಪಕ್ಷವು ಅವರಿಗೆ ನೋಟಿಸ್ ಕಳುಹಿಸಿದ್ದು, ಹೇಳಿಕೆಗೆ 10 ದಿನಗಳಲ್ಲಿ ಉತ್ತರ ನೀಡುವಂತೆ ಕೋರಿದೆ. ಟಿ ರಾಜಾ ಅವರು ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇಂದು ಮುಂಜಾನೆ ಅವರ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

ರಾಜಾ ಸಿಂಗ್ ಹೇಳಿಕೆಯಿಂದ ಆಕ್ರೋಶಗೊಂಡ ಮುಸ್ಲಿಂ ಸಮುದಾಯದ ಜನರು ಹೈದರಾಬಾದ್‌ನ ಹಲವು ಪ್ರದೇಶಗಳಲ್ಲಿ ಸೋಮವಾರ ಸಂಜೆಯಿಂದ ಇಲ್ಲಿಯವರೆಗೆ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಟಿ ರಾಜಾ ಸಿಂಗ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. 

ಇದನ್ನೂ ಓದಿ: ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ: ಆಕ್ರೋಶ ಹೊರಹಾಕಿದ ಓವೈಸಿ

ಬಿಜೆಪಿ ಪ್ರಕಟಣೆ:  ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ಕಾರ್ಯದರ್ಶಿ ಓಂ ಪಾಠಕ್ ನೀಡಿರುವ ಹೇಳಿಕೆಯಲ್ಲಿ ಟಿ ರಾಜಾ ಅವರನ್ನು ಅಮಾನತು ಮಾಡಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಅವರನ್ನು ಪಕ್ಷದಿಂದ ಏಕೆ ಉಚ್ಚಾಟಿಸಬಾರದು ಎಂಬುದಕ್ಕೆ 10 ದಿನಗಳೊಳಗೆ ಉತ್ತರ ನೀಡುವಂತೆ ಬಿಜೆಪಿ ಅವರಿಗೆ ಶೋಕಾಸ್ ನೋಟಿಸ್ ಕೂಡ ನೀಡಿದೆ.

ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನವ್ವರ್ ಫಾರೂಕಿ ಮತ್ತು ನಿರ್ದಿಷ್ಟ ಧರ್ಮವನ್ನು ಟೀಕಿಸುವ ವಿಡಿಯೋವನ್ನು ಬಿಜೆಪಿ ಶಾಸಕ ಸೋಮವಾರ ಬಿಡುಗಡೆ ಮಾಡಿದ್ದರು. ವೀಡಿಯೊದಲ್ಲಿ, ಟಿ ರಾಜಾ ಸಿಂಗ್ ಅವರು ನಿರ್ದಿಷ್ಟ ಧರ್ಮದ ವಿರುದ್ಧ ಕೆಲವು ಟೀಕೆಗಳನ್ನು ಮಾಡುತ್ತಿರುವುದು ಕಂಡುಬಂದಿದೆ. ಬಿಜೆಪಿ ಮುಖಂಡನ ಬಂಧನಕ್ಕೆ ಆಗ್ರಹಿಸಿ ಹಲವು ಸಮುದಾಯದವರು ಸೋಮವಾರ ರಾತ್ರಿ ಹಳೇ ನಗರದಲ್ಲಿ ಧರಣಿ ನಡೆಸಿದ್ದರು.

ಪೊಲೀಸರು ಹೇಳಿಕೆಯಲ್ಲಿ ಹೇಳಿದ್ದೇನು?  ಮಾದಾಪುರದಲ್ಲಿ ಶನಿವಾರದಂದು ಫಾರೂಕಿ ಅವರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆ ಸ್ಥಳಕ್ಕೆ ಹಾನಿ ಮಾಡುವುದಾಗಿ ಟಿ ರಾಜಾ ಸಿಂಗ್ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಹೈದರಾಬಾದ್‌ನ ಗೋಶಾಮಹಲ್ ಕ್ಷೇತ್ರದ ಶಾಸಕ ಸಿಂಗ್ ಅವರನ್ನು ಹಳೆ ನಗರದ ಮಂಗಲ್‌ಹಟ್‌ನಲ್ಲಿರುವ ಅವರ ನಿವಾಸದಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಬಳಿಕ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಭಾರತೀಯ ಕ್ರೀಡಾ ಪಾಧಿಕಾರ: ಆನ್ಲೈನ್ ಲಿಂಕ್ ಇಲ್ಲಿದೆ

ಟಿ ರಾಜಾ ಸಿಂಗ್ ಅವರು ಈ ಹಿಂದೆ ಫಾರೂಕಿ ತಮ್ಮ ಕಾರ್ಯಕ್ರಮಗಳಲ್ಲಿ ಹಿಂದೂ ದೇವತೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News