Terrorist attacks in Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ ಏಕಕಾಲಕ್ಕೆ ಎರಡು ಕಡೆಗಳಲ್ಲಿ ಉಗ್ರರ ದಾಳಿ ನಡೆದಿದೆ. ಮೊದಲ ದಾಳಿಯಲ್ಲಿ ಶೋಪಿಯಾನ್‌ನಲ್ಲಿ ಬಿಜೆಪಿ ಪಕ್ಷದ ಮುಖಂಡ, ಮಾಜಿ ಸರಪಂಚ್‌ನನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ಎರಡನೇ ದಾಳಿಯಲ್ಲಿ ಪಹಲ್ಗಾಮ್ ನಲ್ಲಿ ಜೈಪುರದಿಂದ ಬಂದಿದ್ದ ದಂಪತಿಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರ ದಾಳಿಯ ನಂತರ ಎರಡೂ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಮತ್ತು ಶೋಪಿಯಾನ್‌ನಲ್ಲಿ ಎರಡು ಪ್ರತ್ಯೇಕ ಗುಂಡಿನ ದಾಳಿಗಳು ನಡೆದಿದೆ. ಶೋಪಿಯಾನ್‌ನ ಹೀರ್‌ಪೋರಾ ಪ್ರದೇಶದಲ್ಲಿ ಬಿಜೆಪಿ ಮುಖಂಡ ಹಾಗೂ ಮಾಜಿ ಸರಪಂಚ್ ಎಜಾಜ್ ಅಹ್ಮದ್ ಮೇಲೆ ಉಗ್ರರು ಗುಂಡಿನ ದಾಳಿ ನಡೆದಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಎಜಾಜ್ ಅಹ್ಮದ್ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅನಂತನಾಗ್‌ನ ಪಹಲ್ಗಾಮ್ ಪ್ರದೇಶದಲ್ಲಿಯೂ ರಾಜಸ್ಥಾನದ ದಂಪತಿಯ ಮೇಲೆ ಗುಂಡು ಹಾರಿಸಲಾಗಿದೆ.
ಇದನ್ನೂ ಓದಿ: JEE ಅಡ್ವಾನ್ಸ್ಡ್ 2024 ಪ್ರವೇಶ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ..! ಇಲ್ಲಿದೆ ಸಂಪೂರ್ಣ ವಿವರ
ಭಯೋತ್ಪಾದಕರು ಪಹಲ್ಗಾಮ್ ಪ್ರವಾಸಿ ಶಿಬಿರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇಲ್ಲಿ, ಜೈಪುರದ ದಂಪತಿಗಳಾದ ಫರ್ಹಾ ಮತ್ತು ತಬ್ರೇಜ್ ಮೇಲೆ ಗುಂಡು ಹಾರಿಸಲಾಗಿದೆ. ಇಬ್ಬರನ್ನೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾಹಿತಿ ಪ್ರಕಾರ, ಪತಿ-ಪತ್ನಿ ಇಬ್ಬರೂ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಲಭಿಸಿದ ತಕ್ಷಣ ಭದ್ರತಾ ಪಡೆ ತಂಡವು ಪ್ರದೇಶವನ್ನು ತಲುಪಿದೆ. ಗುಂಡಿನ ದಾಳಿ ನಂತರ ಪ್ರದೇಶವನ್ನು ಸುತ್ತುವರಿದಿದೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ ಖಂಡನೆ
ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮತ್ತು ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಅನಂತನಾಗ್ ಮತ್ತು ಶೋಪಿಯಾನ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ. ಇಂತಹ ಕ್ರೌರ್ಯದ ಕೃತ್ಯಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯನ್ನು ಸಾಧಿಸುವಲ್ಲಿ ಗಂಭೀರ ಅಡಚಣೆಯಾಗಿವೆ ಎಂದು ಅವರು ಹೇಳಿದ್ದಾರೆ.
ದಾಳಿಯನ್ನು ಮೆಹಬೂಬಾ ಮುಫ್ತಿ ಖಂಡಿಸಿದ್ದಾರೆ
ಉಗ್ರರ ಬಂಧನಕ್ಕೆ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಭಯೋತ್ಪಾದಕ ದಾಳಿಯ ಘಟನೆಯ ಕುರಿತು ಪ್ರತಿಕ್ರಿಯಿಸಿದ್ದು, "ಇಂದು ಪಹಲ್ಗಾಮ್‌ನಲ್ಲಿ ಇಬ್ಬರು ಪ್ರವಾಸಿಗರು ಗಾಯಗೊಂಡಿರುವ ದಾಳಿಯನ್ನು ನಾವು ಖಂಡಿಸುತ್ತೇವೆ. ಶೋಪಿಯಾನ್‌ನಲ್ಲಿ ಸರಪಂಚ್ ಮೇಲಿನ ದಾಳಿಯನ್ನು ಸಹ ನಾವು ಖಂಡಿಸುತ್ತೇವೆ. ಇದು ಕಳವಳಕಾರಿ ವಿಷಯವಾಗಿದೆ" ಎಂದಿದ್ದಾರೆ.
ಇದನ್ನೂ ಓದಿ: Chardham Yatra : ಮೇ 31ರವರೆಗೆ VIP ದರ್ಶನಕ್ಕಿಲ್ಲ ಅವಕಾಶ, ವಿಡಿಯೋಗ್ರಫಿ ನಿಷೇಧ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.