Terrorist Trapped In Jammu Kashmir: ಪುಲ್ವಾಮಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರ ಹತ

Terrorist In Jammu Kashmir: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗನೊಬ್ಬನನ್ನು ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ. 

Written by - Yashaswini V | Last Updated : Apr 11, 2024, 11:10 AM IST
  • ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಮುರಾನ್ ಪ್ರದೇಶದಲ್ಲಿ ಎನ್‌ಕೌಂಟರ್‌
  • ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ
  • ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕ ಹತ
Terrorist Trapped In Jammu Kashmir: ಪುಲ್ವಾಮಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರ ಹತ  title=

Terrorist Trapped In Jammu Kashmir: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು (ಗುರುವಾರ) ಬೆಳ್ಳಂಬೆಳಗ್ಗೆ ಭದ್ರತಾಪಡೆಗಳು ಮತ್ತು  ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೋರ್ವ ಹತನಾಗಿದ್ದಾನೆ ಎಂದು ತಿಳಿದುಬಂದಿದೆ. 

ಜಮ್ಮು-ಕಾಶ್ಮೀರದ ಪುಲ್ವಾಮಾ (Jammu Kahsmir Pulwama) ಜಿಲ್ಲೆಯ ಮುರಾನ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರದೇಶವನ್ನು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ. 

ಇದನ್ನೂ ಓದಿ- Weather Update: ದೇಶದಲ್ಲಿ ಕೆಲ ಭಾಗಗಳಲ್ಲಿ ಮುಂದುವರೆದ ಹೀಟ್‌ವೇವ್, ಈ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ ನೀಡಿದ ಐಎಂಡಿ

ಉಗ್ರರ ಗುಂಡಿನ ದಾಳಿಗೆ ಪ್ರತ್ಯುತ್ತರವಾಗಿ ಭದ್ರತಾ ಪಡೆಗಳು (Security forces) ಗುಂಡಿನ ಕಾಳಗ ನಡೆಸಿದ್ದು ಪುಲ್ವಾಮಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರನೋರ್ವ ಹತನಾಡಿದ್ದಾನೆ ಎಂದು ತಿಳಿದುಬಂದಿದೆ. 

ಇದನ್ನೂ ಓದಿ- Exclusive: "ಪ್ರಜಾಪ್ರಭುತ್ವ ಅಪಾಯದಲ್ಲಿದೆ" ರಾಗಾ ಹೇಳಿಕೆಗೆ ಕೌಂಟರ್; 25 ರಾಷ್ಟ್ರಗಳ ರಾಜಕೀಯ ಪಕ್ಷಗಳಿಗೆ ಚುನಾವಣೆ ವೀಕ್ಷಿಸಲು ಬಿಜೆಪಿ ಆಮಂತ್ರಣ

ಗಮನಾರ್ಹವಾಗಿ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ (Baramulla) ಜಿಲ್ಲೆಯ ಉರಿಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಭಾರತೀಯ ಸೇನೆಯು ಭಯೋತ್ಪಾದಕರ  ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ ಸುಮಾರು ಒಂದು ವಾರದ ನಂತರ ಈ ಘಟನೆ ನಡೆದಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News