ಭಾರತೀಯ ಸೇನೆ ನಡೆಸಿದ ಎನ್ಕೌಂಟರ್ ಗೆ ಓರ್ವ ಉಗ್ರ ಬಲಿ

ಕುಪ್ವಾರ ಅರಣ್ಯ ಪ್ರದೇಶದಲ್ಲಿ ಗಡಿ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ ನಲ್ಲಿ ಉಗ್ರನೊಬ್ಬ ಸಾವನ್ನಪ್ಪಿದ್ದಾನೆ.

Updated: Jun 29, 2018 , 12:04 PM IST
ಭಾರತೀಯ ಸೇನೆ ನಡೆಸಿದ ಎನ್ಕೌಂಟರ್ ಗೆ ಓರ್ವ ಉಗ್ರ ಬಲಿ

ಶ್ರೀನಗರ: ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಗಡಿ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ ನಲ್ಲಿ ಉಗ್ರನೊಬ್ಬ ಮೃತಪಟ್ಟಿದ್ದಾನೆ. 

ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ನಂತರ ಕುಪ್ವಾರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂಬಂಧಿತ ಘಟನೆಯಲ್ಲಿ, ಷೋಫಿಯನ್ನ ಅಹಗಮ್ನಲ್ಲಿ ಒಂದು ಗ್ರೆನೇಡ್ನೊಂದಿಗೆ ಸೈನ್ಯದ ಮೇಲೆ ದಾಳಿ ಮಾಡಲಾಯಿತು. ಈ ದಾಳಿಯಲ್ಲಿ ಓರ್ವ ಸೇನಾ ಸಿಬ್ಬಂದಿ ಗಾಯಗೊಂಡಿದ್ದರು. ನಂತರ ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಯಿತು.