ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ: ನಿನ್ನೆ (ಗುರುವಾರ) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ವಲಸೆ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಪುಲ್ವಾಮಾದ ಗಡೂರ ಪ್ರದೇಶದಲ್ಲಿ ವಲಸೆ ಕಾರ್ಮಿಕರ ಮೇಲೆ ಭಯೋತ್ಪಾದಕರು ಗ್ರೆನೇಡ್‌ಗಳ ದಾಳಿ ನಡೆಸಿದ್ದು ಈ ಭಯೋತ್ಪಾದಕ ದಾಳಿ ಘಟನೆಯಲ್ಲಿ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ ಎಂದು ಕಾಶ್ಮೀರ ವಲಯದ ಪೊಲೀಸರು ಮಾಹಿತಿ ನೀಡಿದ್ದಾರೆ. ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ.
ಮೃತ ಕಾರ್ಮಿಕನನ್ನು ಬಿಹಾರದ ಸಕ್ವಾ ಪರ್ಸಾ ನಿವಾಸಿ ಮೊಹಮ್ಮದ್ ಮುಮ್ತಾಜ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಬಿಹಾರದ ರಾಂಪುರ ನಿವಾಸಿಗಳಾದ ಮೊಹಮ್ಮದ್ ಆರಿಫ್ ಮತ್ತು ಮೊಹಮ್ಮದ್ ಮಜ್ಬೂಲ್ ಎಂದು ಗುರುತಿಸಲಾಗಿದೆ. ಸದ್ಯ ಇಬ್ಬರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಗಮನಾರ್ಹವಾಗಿ, ಜಮ್ಮು ಮತ್ತು ಕಾಶ್ಮೀರದಿಂದ ಆರ್ಟಿಕಲ್ 370 ಅನ್ನು ತೆಗೆದುಹಾಕಿದ ವಾರ್ಷಿಕೋತ್ಸವವಕ್ಕೂ ಮೊದಲು ಈ ಭಯೋತ್ಪಾದಕ ದಾಳಿ ನಡೆದಿದೆ. 2019 ರಲ್ಲಿ, ಆಗಸ್ಟ್ 5 ರಂದು ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ತೆಗೆದುಹಾಕಿತು, ರಾಜ್ಯದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸಿತು, ಇದರಿಂದಾಗಿ ಕಣಿವೆಯಲ್ಲಿ ದೀರ್ಘಕಾಲದವರೆಗೆ ಉದ್ವಿಗ್ನತೆ ಇತ್ತು. ಈ ವರ್ಷದ ಆರಂಭದಲ್ಲಿ, ಭಯೋತ್ಪಾದಕರು ಸ್ಥಳೀಯರಲ್ಲದ ಕಾರ್ಮಿಕರ ಮೇಲೆ ದಾಳಿಯನ್ನು ಹೆಚ್ಚಿಸಿದ್ದರು, ಆದರೆ ಅಂತಹ ಗುರಿ ದಾಳಿಗಳು ಕಳೆದ ಎರಡು ತಿಂಗಳಿಂದ ಕಡಿಮೆಯಾಗಿತ್ತು.
ಇದನ್ನೂ ಓದಿ- LIC HFL recruitment 2022 : LIC HFL ನಲ್ಲಿ 80 ಹುದ್ದೆಗಳಿಗೆ ಅರ್ಜಿ : ಇಲ್ಲಿದೆ ಸಂಪೂರ್ಣ ಮಾಹಿತಿ
ಗುರುವಾರವೇ ಕಾಶ್ಮೀರದ ಕುಪ್ವಾರದಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ. ಬಂಧಿತ ಭಯೋತ್ಪಾದಕರಿಂದ ದೋಷಾರೋಪಣೆಯ ದಾಖಲೆಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯ ಹಂದ್ವಾರಾ ಪ್ರದೇಶದಲ್ಲಿ ಸಾಮಾನ್ಯ ಜನರ ಪ್ರಾಣ ಮತ್ತು ಆಸ್ತಿ-ಪಾಸ್ತಿ ನಷ್ಟದೊಂದಿಗೆ ಶಾಂತಿ ಕದಡುವ ರೀತಿಯಲ್ಲಿ ದಾಳಿ ನಡೆಸಲು ಈ ಮೂವರನ್ನು ನಿಯೋಜಿಸಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ- 5G network in India : ಆಗಸ್ಟ್ನಿಂದ ಭಾರತದಲ್ಲಿ ಏರ್‌ಟೆಲ್, ಜಿಯೋದಿಂದ 5G ಸೇವೆ
ಹಂದ್ವಾರದ ಫಲ್ ಮಂಡಿ ಬಳಿಯ ಚೆಕ್‌ಪೋಸ್ಟ್‌ನಲ್ಲಿ ನಿಂತಿದ್ದ ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಮೂವರನ್ನು ತಡೆದಾಗ, ಪೊಲೀಸ್ ತಂಡವನ್ನು ನೋಡಿ ಓಡಿಹೋಗಲು ಪ್ರಯತ್ನಿಸಿದರು. ಅವರ ಬೆನ್ನತ್ತಿದ ಪೊಲೀಸರು ಮೂವರನ್ನು ಸೆರೆ ಹಿಡಿಯುವಲ್ಲಿ ಯಶಸ್ವಿ ಆಗಿದ್ದಾರೆ. ಬಂಧಿತ ಆರೋಪಿಗಳನ್ನು ಮಂಜೂರ್ ಅಹಮದ್ ಮತ್ತು ಶೌಕತ್ ಅಹಮದ್ ಭಟ್ ಎಂದು ಗುರುತಿಸಲಾಗಿದೆ. ಬಂಧಿತ ಮೂರನೇ ಆರೋಪಿಯ ಗುರುತು ಇನ್ನೂ ಪತ್ತೆ ಆಗಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.