/kannada/photo-gallery/symptoms-that-appear-on-the-skin-when-blood-sugar-is-high-249392 ಬ್ಲಡ್‌ ಟೆಸ್ಟ್ ಅಗತ್ಯವೇ ಇಲ್ಲ... ಚರ್ಮದ ಮೇಲೆ ಈ ಗುರುತುಗಳು ಕಾಣಿಸಿಕೊಳ್ಳುತ್ತಿದ್ದರೆ ನಿಮಗೆ ಡಯಾಬಿಟಿಸ್ ಹೆಚ್ಚಾಗಿರುವುದು ಖಚಿತ! ಬ್ಲಡ್‌ ಟೆಸ್ಟ್ ಅಗತ್ಯವೇ ಇಲ್ಲ... ಚರ್ಮದ ಮೇಲೆ ಈ ಗುರುತುಗಳು ಕಾಣಿಸಿಕೊಳ್ಳುತ್ತಿದ್ದರೆ ನಿಮಗೆ ಡಯಾಬಿಟಿಸ್ ಹೆಚ್ಚಾಗಿರುವುದು ಖಚಿತ! 249392

Kathua terror attack: ಜಮ್ಮುವಿನಲ್ಲಿ ಸೇನಾ ವಾಹನದ ಮೇಲೆ ಉಗ್ರರ ಗುಂಡಿನ ದಾಳಿ

Kathua terror attack: ಜಮ್ಮುವಿನ ಕಥುವಾ ಜಿಲ್ಲೆಯಲ್ಲಿ ಉಗ್ರರು ಸೇನಾ ವಾಹನದ ಮೇಲೆ ದಾಳಿ ಮಾಡಿದ್ದಾರೆ. 

Written by - Chetana Devarmani | Last Updated : Jul 8, 2024, 06:07 PM IST
  • ಜಮ್ಮುವಿನಲ್ಲಿ ಉಗ್ರರ ಗುಂಡಿನ ದಾಳಿ
  • ಸೇನಾ ವಾಹನದ ಮೇಲೆ ಉಗ್ರರ ದಾಳಿ
  • ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಘಟನೆ
Kathua terror attack: ಜಮ್ಮುವಿನಲ್ಲಿ ಸೇನಾ ವಾಹನದ ಮೇಲೆ ಉಗ್ರರ ಗುಂಡಿನ ದಾಳಿ  title=

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಉಗ್ರರು ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದಾರೆ. ಸೇನೆಯು ಇದಕ್ಕೆ ಪ್ರತ್ಯುತ್ತರವಾಗಿ ಎನ್‌ಕೌಂಟರ್ ಆರಂಭಿಸಿದೆ. ಇದು ಯೋಜಿತ ಭಯೋತ್ಪಾದಕ ದಾಳಿ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಭದ್ರತಾ ಪಡೆಗಳ ಹೆಚ್ಚುವರಿ ತಂಡಗಳು ಸ್ಥಳಕ್ಕೆ ತಲುಪಿವೆ. ಜಿಲ್ಲೆಯ ಬಿಲ್ವಾರ್ ತೆಹಸಿಲ್‌ನ ಮಚ್ಚೇಡಿ ಪ್ರದೇಶದ ಬದ್ನೋಟಾ ಗ್ರಾಮದಲ್ಲಿ ಭಯೋತ್ಪಾದಕರು ಈ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Bengaluru's 2nd airport: ಎಲ್ಲಿ ನಿರ್ಮಾಣವಾಗಲಿದೆ ಗೊತ್ತಾ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ?

ಉಗ್ರರ ಗುಂಡಿನ ದಾಳಿಗೆ ಸೇನಾ ಯೋಧರು ಪ್ರತಿದಾಳಿ ನಡೆಸಿದ್ದಾರೆ. ಎರಡೂ ಕಡೆಯಿಂದ ಗುಂಡಿನ ಚಕಮಕಿ ಮುಂದುವರಿದಿದೆ. ಶನಿವಾರ ಮುಂಜಾನೆ, ಕಾಶ್ಮೀರದ ಕುಲ್ಗಾಮ್‌ನಲ್ಲಿ ನಡೆದ ಎರಡು ಎನ್‌ಕೌಂಟರ್‌ಗಳಲ್ಲಿ ಆರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಈ ಅವಧಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದರು.

ಮೊದರ್ಗಾಂ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರ ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಭಾನುವಾರ ಚಿನ್ನಿಗಮ್‌ನಿಂದ ನಾಲ್ಕು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಕುಲ್ಗಾಂ ಜಿಲ್ಲೆಯ ಎರಡು ಗ್ರಾಮಗಳಲ್ಲಿ ಶನಿವಾರದಿಂದ ಎನ್‌ಕೌಂಟರ್ ಆರಂಭವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ಪ್ಯಾರಾ ಕಮಾಂಡೋ ಸೇರಿದಂತೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಇದನ್ನೂ ಓದಿ: Hyundai Creta: ಭರ್ಜರಿ ಸೇಲ್‌ ಆಗುತ್ತಿರುವ ಹೊಸ ಹುಂಡೈ ಕ್ರೆಟಾದ ವೈಶಿಷ್ಟ್ಯಗಳ ಬಗ್ಗೆ ತಿಳಿಯಿರಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.