ಶ್ರೀನಗರ: ಜಮ್ಮು-ಕಾಶ್ಮೀರದ ಅನಾಂತ್ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದು, ಮೂರು ಮಹಿಳೆಯರು, ಇಬ್ಬರು CRPF ಯೋಧರು ಸೇರಿದಂತೆ ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಅನಂತನಾಗ್ ಪ್ರದೇಶದ ಶೆರ್ಬಾಗ್ ನಲ್ಲಿ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.


ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಸದ್ಯ ಅವರ ಸ್ಥಿತಿ ಸ್ಥಿರವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಳೆದ ಎರಡು ದಿನಗಳಲ್ಲಿ ಇದು ದಕ್ಷಿಣ ಕಾಶ್ಮೀರದ ಭದ್ರತಾ ಪಡೆಗಳ ಮೇಲಿನ ಎರಡನೇ ಗ್ರೆನೇಡ್ ದಾಳಿ ಎಂಬುದು ಗಮನಾರ್ಹವಾಗಿದೆ.


ಬುಧವಾರ, ಭಯೋತ್ಪಾದಕರು ಕುಲ್ಗಮ್ ಜಿಲ್ಲೆಯ ಪೋಲಿಸ್ ಠಾಣೆಯ ಮೇಲೆ ಗ್ರೆನೇಡ್ ದಾಳಿ ನಡೆಸಿದ ಬಳಿಕ ಮೂವರು ನಾಗರಿಕರು ಗಾಯಗೊಂಡಿದ್ದಾರೆ.