ಕಾಶ್ಮೀರದಲ್ಲಿ ಶಿಕ್ಷಕಿಯನ್ನುನ್ನು ಹತ್ಯೆಗೈದ ಉಗ್ರರು
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ವಲಸಿಗ ಕಾಶ್ಮೀರಿ ಪಂಡಿತ್ ಶಿಕ್ಷಕಿಯನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ.
ಕಾಶ್ಮೀರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್‌ಪೋರಾದಲ್ಲಿ ಮಂಗಳವಾರ ಉಗ್ರರು ವಲಸಿಗ ಕಾಶ್ಮೀರಿ ಪಂಡಿತ್ ಶಿಕ್ಷಕಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಮೃತ ಶಿಕ್ಷಕಿಯನ್ನು ರಜನಿ ಎಂದು ಗುರುತಿಸಲಾಗಿದೆ. ಆಕೆಯ ಗಂಡನ ಹೆಸರು ರಾಜ್ ಕುಮಾರ್ ಮತ್ತು ಜಮ್ಮುವಿನ ಸಾಂಬಾ ಜಿಲ್ಲೆಯ ನಿವಾಸಿ ಎಂದು ಮಂಗಳವಾರ ಪೊಲೀಸರು ಈ ಮಾಹಿತಿ ನೀಡಿದ್ದಾರೆ.
ಮಾಹಿತಿಯ ಪ್ರಕಾರ, ಭಯೋತ್ಪಾದಕರು ಶಿಕ್ಷಕಿಯ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ ಅವರು ಕೊನೆ ಉಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ- Covid-19: : ಓಮಿಕ್ರಾನ್‌ನ ಉಪ-ರೂಪಾಂತರಗಳಾದ BA.4, BA.5 ಎಷ್ಟು ಅಪಾಯಕಾರಿ?
ಈ ಕುರಿತಂತೆ ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಮೃತ ಶಿಕ್ಷಕಿಯು ಹಿಂದೂ ಆಗಿದ್ದು ಸಾಂಬಾ (ಜಮ್ಮು ವಿಭಾಗ) ನಿವಾಸಿ ಎಂದು ತಿಳಿಸಿದ್ದಾರೆ.
ಈ ಭೀಕರ ಹತ್ಯೆಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಶೀಘ್ರವೇ ಹಿಡಿಯಲಾಗುವುದು. ಶಿಕ್ಷಕಿಯ ಮೇಲೆ ಗುಂಡಿನ ದಾಳಿ ನಡೆಸಿದ ಪ್ರದೇಶವನ್ನು ಸುತ್ತುವರೆಯಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪಡೆಗಳು ಆಗಮಿಸಿದ್ದು, ಉಗ್ರರ ಪತ್ತೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ- ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಪತ್ರ: ತನ್ನ ತಾಯಿಯ ನೋವಿನ ಕಥೆ ಬರೆದ ಪ್ರಧಾನಿ
ಗಮನಾರ್ಹ ಸಂಗತಿಯೆಂದರೆ, ಮೇ ತಿಂಗಳಲ್ಲಿ ಎರಡನೇ ಬಾರಿಗೆ ಕಾಶ್ಮೀರಿ ಪಂಡಿತರೊಬ್ಬರ ಹತ್ಯೆಯಾಗಿದೆ. ಮೇ 12 ರಂದು ಬುದ್ಗಾಮ್ ಜಿಲ್ಲೆಯ ಚದೂರ ತಹಸಿಲ್‌ನಲ್ಲಿರುವ ತಹಸೀಲ್ದಾರ್ ಕಚೇರಿಯಲ್ಲಿ ರಾಹುಲ್ ಭಟ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮೇ ತಿಂಗಳಲ್ಲಿ ಕಾಶ್ಮೀರದಲ್ಲಿ ಇದುವರೆಗೆ ಏಳು ಉದ್ದೇಶಿತ ಹತ್ಯೆಗಳನ್ನು ಮಾಡಲಾಗಿದೆ. ಈ ಪೈಕಿ ನಾಲ್ವರು ನಾಗರಿಕರು ಹಾಗೂ ಮೂವರು ಪೊಲೀಸರು ಸೇರಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.