ಜಮ್ಮು-ಕಾಶ್ಮೀರ: ಉಗ್ರರಿಂದ ಗ್ರೇನೆಡ್ ದಾಳಿ, ಇಬ್ಬರು ಪೊಲೀಸರಿಗೆ ಗಾಯ

ದಾಳಿಯ ನಂತರ, ಪೊಲೀಸ್ ಪಡೆ ಮತ್ತು ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದಿದ್ದು ದಾಳಿಕೋರರ ಹುಡುಕಾಟ ನಡೆಸುತ್ತಿವೆ.

Last Updated : Mar 21, 2019, 12:40 PM IST
ಜಮ್ಮು-ಕಾಶ್ಮೀರ: ಉಗ್ರರಿಂದ ಗ್ರೇನೆಡ್ ದಾಳಿ, ಇಬ್ಬರು ಪೊಲೀಸರಿಗೆ ಗಾಯ title=
File Image

ಶ್ರೀನಗರ: ಹೋಳಿ ದಿನವಾದ ಇಂದೂ ಕೂಡ ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಜಮ್ಮು-ಕಾಶ್ಮೀರದ ಸೋಪೋರ್ ನಲ್ಲಿ ಭದ್ರತಾ ಪಡೆಗಳನ್ನು ಗುರಿಪಡಿಸಿ ಗ್ರೇನೆಡ್ ದಾಳಿ ನಡೆಸಿದ್ದಾರೆ. ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಸೊಪೋರ್ ನಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ, ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದರು. ಅಡಗಿಕೊಂಡಿರುವ ಉಗ್ರರಿಗಾಗಿ ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಭದ್ರತಾ ಪಡೆಯನ್ನೇ ಗುರಿಯಾಗಿಸಿ ಉಗ್ರರು ಗ್ರೇನೆಡ್ ದಾಳಿ ನಡೆಸಿದ್ದಾರೆ.

ಈ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ನ್ಯೂಸ್ ಏಜೆನ್ಸಿ ಪಿಟಿಐ ವರದಿ ಮಾಡಿದೆ. 

ಮುನ್ನೆಚ್ಚರಿಕೆ ಕ್ರಮವಾಗಿ ಸೊಪೋರ್ ನಲ್ಲಿ ಮೊಬೈಲ್, ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ IANS ವರದಿ ಮಾಡಿದೆ.

ದಾಳಿಯ ನಂತರ, ಪೊಲೀಸ್ ಪಡೆ ಮತ್ತು ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದಿದ್ದು ದಾಳಿಕೋರರ ಹುಡುಕಾಟ ನಡೆಸುತ್ತಿವೆ. 
 

Trending News