ನವದೆಹಲಿ: ಕೇಂದ್ರ ಗೃಹ ಇಲಾಖೆ ವಲಸೆ ಕಾರ್ಮಿಕರಿಗೆ, ಪ್ರವಾಸಿಗರಿಗೆ, ವಿದ್ಯಾರ್ಥಿಗಳು ಸೇರಿದಂತೆ  ಲಾಕ್​ಡೌನ್ (Lockdown)​ನಿಂದಾಗಿ ಬೇರೆ ಬೇರೆ ಕಡೆ ಸಿಲುಕಿಕೊಂಡವರಿಗೆ ತಮ್ಮ ತಮ್ಮ ಸ್ವ ಗ್ರಾಮಕ್ಕೆ ತೆರಳಲು ಅನುಮತಿ ನೀಡಿದೆ. ಕೇಂದ್ರ ಸರ್ಕಾರ (Central Government) ಈ ಕುರಿತು ಪ್ರಕಟಣೆ ಹೊರಡಿಸಿದ್ದು ಅದರಲ್ಲಿ ಎಲ್ಲಾ ರಾಜ್ಯಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ.


COMMERCIAL BREAK
SCROLL TO CONTINUE READING

1. ಎಲ್ಲಾ ರಾಜ್ಯಗಳು ವಲಸಿಗರನ್ನು ಕಳುಹಿಸಿಕೊಡುವಾಗ ನೋಡಲ್ ಅಧಿಕಾರಿಗಳ ಮಾರ್ಗಸೂಚಿಯನ್ನು ಅನುಸರಿಸಬೇಕು.
2. ವಲಸಿಗರು ಗುಂಪು ಗುಂಪಾಗಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪ್ರಯಾಣಿಸುವುದಾದರೆ ಎರಡೂ ರಾಜ್ಯಗಳು ಮಾತುಕತೆ ನಡೆಸಿ ರಸ್ತೆಗಳಲ್ಲಿ ಸಂಚರಿಸಲು ಅನುಕೂಲ ಮಾಡಿಕೊಡಬೇಕು.
3. ಪ್ರಯಾಣ ಬೆಳೆಸುವವರು ಸೋಂಕು ತಗುಲಿದೆಯೋ ಇಲ್ಲವೋ ಎಂದು ಪರೀಕ್ಷಿಸಿಕೊಳ್ಳಬೇಕು.
4. ಜನರನ್ನು ಗುಂಪು ಗುಂಪಾಗಿ ಸಾಗಿಸಲು ಬಸ್​ಗಳನ್ನು ಬಳಸಿಕೊಳ್ಳಬಹುದು. ಬಸ್​ಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಿರಬೇಕು ಮತ್ತು ಸೋಷಿಯಕ್ ಡಿಸ್ಟೆನ್ಸ್ ಕಾಪಾಡಿಕೊಳ್ಳಬೇಕು.
5. ಹೊರರಾಜ್ಯದಿಂದ ಬಂದವರನ್ನು ಅವರವರ ರಾಜ್ಯಗಳಿಗೆ ಕಳುಹಿಸುವುದು ಆಯಾ ರಾಜ್ಯಗಳ ಜವಾಬ್ದಾರಿಯಾಗಿರುತ್ತದೆ.
6. ಹೊರರಾಜ್ಯದಿಂದ ಬಂದಿಳಿದವರನ್ನು ಸ್ಥಳೀಯ ಆರೋಗ್ಯ ಇಲಾಖೆ ಪರೀಕ್ಷಿಸಬೇಕು, ಮತ್ತು ಹೋಮ್​ ಕ್ವಾರಂಟೈನ್​ನಲ್ಲಿ ಇರಿಸಬೇಕು. ಅಗತ್ಯ ಬಿದ್ದಲ್ಲಿ ಇನ್ಸ್​ಟಿಟ್ಯೂಟ್ ಕ್ವಾರಂಟೈನ್(Quarantine)​ನಲ್ಲಿ ಇರಿಸತಕ್ಕದ್ದು. ಹೀಗೆ ಇರಿಸಿದವರನ್ನು ಆಗಾಗ್ಗೆ ಪರೀಕ್ಷೆಗೊಳಿಸುವುದು.


ಗುಜರಾತ್, ಒರಿಸ್ಸಾ, ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಕಾರ್ಮಿಕರು ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಮತ್ತಿತರ ಕಡೆಗೆ ಉದ್ಯೋಗ ಹುಡುಕಿಕೊಂಡು ಹೋಗಿದ್ದರು. ಲಾಕ್ಡೌನ್ ಜಾರಿಯಾಗಿರುವುದರಿಂದ ಅದೇ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ತವರು ರಾಜ್ಯ/ಊರುಗಳಿಗೆ ಕಳುಹಿಸಿಕೊಡುವಂತೆ ಕೆಲ ರಾಜ್ಯಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿದೆ.