ನವದೆಹಲಿ: ರಾಜಸ್ತಾನದಲ್ಲಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಇದುವರೆಗೆ ರಾಜ್ಯದ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ವಿಚಾರ ಇನ್ನು ಕಗ್ಗಂಟಾಗಿ ಉಳಿದಿದೆ. ಈ ಹಿನ್ನಲೆಯಲ್ಲಿ ಈ ವಿಚಾರವಾಗಿ ನಾಳೆ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಅಂತಿಮ ನಿರ್ಧಾರ ತಗೆದುಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ರಾಜಸ್ತಾನದಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಪಡೆದಿದೆ. ಬಹುಮತಕ್ಕೆ ಇನ್ನು ಒಂದು ಸ್ಥಾನದ ಅಗತ್ಯವಿದೆ. ಇದಕ್ಕೆ ಕಾಂಗ್ರೆಸ್ ನ ಮೈತ್ರಿ ಪಕ್ಷವಾದ ಆರ್ಎಲ್ಡಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿರುವುದರಿಂದ ಬೆಂಬಲ ನೀಡಲಿದೆ ಎನ್ನಲಾಗಿದೆ.ಈಗಾಗಲೇ ಕಾಂಗ್ರೆಸ್ ನಾಯಕರು ಇಂದು ಸಂಜೆ ರಾಜ್ಯಪಾಲ ಕಲ್ಯಾಣ ಸಿಂಗ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆ ಮಾಡುವ ಪ್ರಸ್ತಾವನೆ ಇಟ್ಟಿದ್ದಾರೆ.ಆದರೆ ಮುಖ್ಯಮಂತ್ರಿ ಯಾರು ಎನ್ನುವ ವಿಚಾರ ಇನ್ನು ಸ್ಪಷ್ಟವಾಗದಿರುವುದರಿಂದ ಈ ವಿಚಾರವಾಗಿ ಅಂತಿಮ ನಿರ್ಧಾರವನ್ನು ತಗೆದುಕೊಳ್ಳಲು ರಾಹುಲ್ ಗಾಂಧಿಯವರಿಗೆ ನೀಡಲಾಗಿದೆ.


ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿನ್ ಪೈಲೆಟ್ " ಶಾಸಕರು ಏನು ಹೇಳುಬೇಕೋ ಅದೆಲ್ಲವನ್ನು ಕೂಡ ಮೀಟಿಂಗ್ ನಲ್ಲಿ ಹೇಳಲಿ ಆದರೆ ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಮುಖಸ್ಥರು ಹಾಗೂ ಇತರ ನಾಯಕರು ತಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.