ನವದೆಹಲಿ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸೋಮವಾರದಿಂದ ಸಂಸತ್ ಭವನದ ಸಂಪೂರ್ಣ ಭದ್ರತೆಯನ್ನು ವಹಿಸಿಕೊಂಡಿದೆ.


COMMERCIAL BREAK
SCROLL TO CONTINUE READING

3300ಕ್ಕೂ ಹೆಚ್ಚು ಸಿಐಎಸ್‌ಎಫ್ ಸೈನಿಕರು ಸಂಸತ್ ಭವನದ ಸಂಕೀರ್ಣದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಮತ್ತು ವಿಧ್ವಂಸಕ ಕೃತ್ಯಗಳನ್ನು ಹತ್ತಿಕ್ಕುವ ಜವಾಬ್ದಾರಿಯನ್ನು ಇನ್ನು ಮುಂದೆ ವಹಿಸಿಕೊಳ್ಳಲಿದ್ದಾರೆ. ಸಂಸತ್ ಭವನದ ಭದ್ರತೆಯ ಹೊಣೆ ಹೊತ್ತಿದ್ದ ಕೇಂದ್ರೀಯ ಮೀಸಲು ರಕ್ಷಣಾ ಪಡೆ (ಸಿಆರ್‌ಪಿಎಫ್) ತನ್ನ 1,400 ಸಿಬ್ಬಂದಿಯನ್ನು ಹಿಂಪಡೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.


ಸಿಆರ್‌ಪಿಎಫ್‌ನ ಪಾರ್ಲಿಮೆಂಟರಿ ಡ್ಯೂಟಿ ಗ್ರೂಪ್ (ಪಿಡಿಜಿ) ತನ್ನ ವಾಹನಗಳು, ಶಸ್ತ್ರಾಸ್ತ್ರಗಳು ಮತ್ತು ಕಮಾಂಡೋಗಳನ್ನು ಸ್ಥಳದಿಂದ ತೆಗೆದುಹಾಕಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ತೆರೆಯಲಾದ ಎಲ್ಲಾ ಭದ್ರತಾ ಕೇಂದ್ರಗಳನ್ನು ಶುಕ್ರವಾರವೇ ಸಿಐಎಸ್‌ಎಫ್ ತಂಡಕ್ಕೆ ಹಸ್ತಾಂತರಿಸಲಾಯಿತು. ಸಂಸತ್ ಭವನದಿಂದ ಹೊರಡುವಾಗ ಸಿಆರ್‌ಪಿಎಫ್ ಯೋಧರು ಸೆಲ್ಫಿ ತೆಗೆದುಕೊಂಡು ತಮ್ಮ ಮೊಬೈಲ್‌ನಲ್ಲಿ ಚಿತ್ರಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.


3,317 ಸಿಐಎಸ್‌ಎಫ್ ಸಿಬ್ಬಂದಿ ಸಂಸತ್ತಿನ ಹಳೆಯ ಮತ್ತು ಹೊಸ ಸದನಗಳು ಮತ್ತು ಅದಕ್ಕೆ ಹೊಂದಿಕೊಂಡಂತಿರುವ ಕಟ್ಟಡಗಳ ಭದ್ರತೆಯ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಕಳೆದ ವರ್ಷ ಡಿಸೆಂಬರ್ 13 ರಂದು ಸಂಸತ್ತಿನಲ್ಲಿ ಭದ್ರತಾ ಲೋಪದ ನಂತರ, ಕೇಂದ್ರ ಸರ್ಕಾರವು ಸಿಆರ್‌ಪಿಎಫ್‌ಗೆ ಸಂಸತ್ತಿನ ಸಂಕೀರ್ಣದ ಉಸ್ತುವಾರಿ ವಹಿಸುವಂತೆ ಸೂಚಿಸಿತ್ತು ಎಂದು ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.


ಸೋಮವಾರ ಬೆಳಗ್ಗೆ 6 ಗಂಟೆಯಿಂದ ಸಂಸತ್ತಿನ ಭದ್ರತೆಯ ಸಂಪೂರ್ಣ ಜವಾಬ್ದಾರಿಯನ್ನು ಸಿಐಎಸ್‌ಎಫ್‌ನ ಭಯೋತ್ಪಾದನಾ ನಿಗ್ರಹ ದಳ ವಹಿಸಿಕೊಳ್ಳಲಿದೆ ಎಂದು ಹೇಳಿದರು.ನೋಂದಣಿ ಗೇಟ್ ಸೇರಿದಂತೆ ಕಟ್ಟಡದ ವಿವಿಧೆಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪಾಸ್ ವಿಭಾಗವಲ್ಲದೆ ಶ್ವಾನದಳ, ಅಗ್ನಿಶಾಮಕ ದಳ, ಸಿಸಿ ಕ್ಯಾಮೆರಾ ಕೊಠಡಿ, ಸಂಪರ್ಕ ಕೇಂದ್ರ, ವೀಕ್ಷಣಾ ಗೋಪುರಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.


ಸಿಐಎಸ್ಎಫ್ ಸಿಬ್ಬಂದಿಯನ್ನು 'ಆಂತರಿಕ ಭದ್ರತಾ ಕರ್ತವ್ಯ'ದ ರೀತಿಯಲ್ಲಿ ತಾತ್ಕಾಲಿಕವಾಗಿ ನಿಯೋಜಿಸಲಾಗಿದೆ. ಚುನಾವಣೆ ಬಳಿಕ ಹೊಸ ಸರ್ಕಾರದಿಂದ ಸಂಪೂರ್ಣ ಅನುಮತಿ ದೊರೆಯಲಿದೆ ಎಂದು ಮೂಲಗಳು ತಿಳಿಸಿವೆ.
ಸಿಐಎಸ್‌ಎಫ್ ಯೋಧರಿಗೆ ಪರ್ಸನಲ್ ಸ್ಕ್ರೀನಿಂಗ್, ಬ್ಯಾಗ್ ಸ್ಕ್ರೀನಿಂಗ್, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯತೆ ಸೇರಿದಂತೆ ಇತರೆ ತರಬೇತಿ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.