ನವದೆಹಲಿ: ರಾಹುಲ್ ಗಾಂಧಿ ಅವರು ಇಂದು ಸಂಸತ್ತಿನಲ್ಲಿ ಗೌತಮ್ ಅದಾನಿ ವಿರುದ್ಧ ಸರಣಿ ಆರೋಪಗಳನ್ನು ಮಾಡಿದ್ದಾರೆ.ಇತ್ತೀಚಿಗಷ್ಟೇ ಹಿಂಡನ್ ಬರ್ಗ್ ರಿಸರ್ಚ್ ವರದಿ ನಂತರ ಗೌತಮ್ ಅದಾನಿ ನೇತೃತ್ವದ ಅದಾನಿ ಗ್ರೂಪ್ ಸುಮಾರು 120 ಮಿಲಿಯನ್ ಡಾಲರ್ ಸಂಪತ್ತನ್ನು ಕಳೆದುಕೊಂಡ ನಂತರ ಅವರ ಆರೋಪಗಳು ಬಂದಿವೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಅಧಿಕಾರದಿಂದ ಕಿತ್ತು ಕೆಳಗಿಳಿಸಿದರೂ ಕಾಂಗ್ರೆಸ್ ನಾಯಕರ ಮದ ಇಳಿಯುತ್ತಿಲ್ಲ: ಬಿಜೆಪಿ ಟೀಕೆ


ಇತ್ತೀಚಿಗಷ್ಟೇ ಭಾರತ ಜೋಡೋ ಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿರುವ ರಾಹುಲ್ ಗಾಂಧಿ ಸಂಸತ್ತಿನ ಅಧಿವೇಶನದಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಅವರು ಗೌತಮ್ ಅದಾನಿ ಅವರ ವ್ಯಾಪಾರ ಸಾಮ್ರಾಜ್ಯಕ್ಕೆ ಕ್ಷೇತ್ರಗಳಲ್ಲಿ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಇದಕ್ಕೆ ಆಡಳಿತ ಪಕ್ಷವು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿತು.


ಇದನ್ನೂ ಓದಿ : ಟಿ 20 ಕ್ರಿಕೆಟ್ ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾದ ಈ ಸ್ಟಾರ್ ಆಟಗಾರ..! 


"ಅದಾನಿ ಜೀ ಅವರು ಸೌರಶಕ್ತಿ, ಪವನ ಶಕ್ತಿಯಲ್ಲಿ ತೊಡಗುವ ಯಾವುದೇ ವ್ಯವಹಾರದಲ್ಲಿ ಎಂದಿಗೂ ವಿಫಲರಾಗುವುದಿಲ್ಲ.ನಾನು ಭಾರತ ಜೋಡೋ ಯಾತ್ರೆಯಲ್ಲಿದ್ದಾಗ ಜನರು ನನಗೆ ಅದಾನಿ ಅನೇಕ ಕ್ಷೇತ್ರಗಳಲ್ಲಿ ಏಕಾಕಾಲದಲ್ಲಿ ಯಶಸ್ಸನ್ನು ಪಡೆದದ್ದು ಹೇಗೆ ಎಂದು ಪ್ರಶ್ನಿಸಿದರು. ಇನ್ನೂ ಮುಂದುವರೆದು ಪ್ರಧಾನಿ ಮೋದಿ ಅವರ ಜೊತೆ ಇರುವ ಅವರ ಸಂಬಂಧವೇನು? ವಿದೇಶಗಳಿಗೆ ಮೋದಿ ಭೇಟಿದ ದೇಶಗಳಲ್ಲಿ ಅದಾನಿ ಗುತ್ತಿಗೆಯನ್ನು ಪಡೆದಿದ್ದಾರೆ ಎಂದರು.


“ನಾನು ಯಾತ್ರೆಯಲ್ಲಿದ್ದಾಗ ಜನರು 2014 ಮತ್ತು 2022 ರ ನಡುವೆ ಅದಾನಿ ನಿವ್ವಳ ಮೌಲ್ಯವು $ 8 ಶತಕೋಟಿಯಿಂದ 140 ಶತಕೋಟಿಗೆ ಹೇಗೆ ಹೆಚ್ಚಾಯಿತು .2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಉದ್ಯಮಿ 600 ನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಹೋಗಿದ್ದು ಹೇಗೆ ಎಂದೆಲ್ಲಾ ಪ್ರಶ್ನಿಸಿದರು ಎಂದು ರಾಹುಲ್ ಗಾಂಧಿ ಆರೋಪಿಸಿದರು.ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕಾನೂನು ಸಚಿವ ಕಿರಣ್ ರಿಜು ಸುಮ್ಮನೇ ಆರೋಪ ಮಾಡಬೇಡಿ ಇದಕ್ಕೆ ಪುರಾವೆ ನೀಡಿ ಎಂದು ಅವರು ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.