ನವದೆಹಲಿ: ಅಕ್ಟೋಬರ್ 16 ರಂದು ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ಸಭೆ ಸಭೆ ಸೇರಲಿದ್ದು, ಈ ಸಂದರ್ಭದಲ್ಲಿ ಪ್ರಸ್ತುತ ರಾಜಕೀಯದ ಪರಿಸ್ಥಿತಿ, ನೂತನ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಹಾಗೂ ಮುಂಬರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

"ಕಾಂಗ್ರೆಸ್ (Congress) ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯು ಅಕ್ಟೋಬರ್ 16 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ" ಎಂದು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಹೇಳಲಾಗಿದೆ.ಕಳೆದ ತಿಂಗಳು, ಪಕ್ಷವು ನಾಯಕತ್ವದ ಬದಲಾವಣೆಯ ನಡುವೆ ಪಂಜಾಬ್‌ನಲ್ಲಿ ಪ್ರಕ್ಷುಬ್ಧತೆಯನ್ನು ಎದುರಿಸಿತು. ಈ ಸಂದರ್ಭದಲ್ಲಿ ಕಾಂಗ್ರೆಸ್  ಪಕ್ಷವು ಅಮರಿಂದರ್ ಸಿಂಗ್ ಬದಲಿಗೆ ರಾಜ್ಯದ ಮೊದಲ ದಲಿತ ಮುಖ್ಯಮಂತ್ರಿಯಾಗಿ ಚರಣ್ಜಿತ್ ಚನ್ನಿ ಅವರನ್ನು ನೇಮಕ ಮಾಡಿತ್ತು. ಈಗ ಪಕ್ಷವನ್ನು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಚುನಾಯಿತ ಅಧ್ಯಕ್ಷರ ಹುಡುಕಾಟದಲ್ಲಿ ತೊಡಗಿದೆ.


ಇದನ್ನೂ ಓದಿ: ನವಜೋತ್ ಸಿಂಗ್ ಸಿಧು ರಾಜೀನಾಮೆ ಸ್ವೀಕರಿಸಿದ ಪಂಜಾಬ್ ಸಿಎಂ ಅಮರಿಂದರ್ ಸಿಂಗ್


ಈಗಾಗಲೇ ಪಕ್ಷದ ಹಿರಿಯ ನಾಯಕರು ಹೈಕಮಾಂಡ್ ನಿರ್ಧಾರಗಳಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇತ್ತೀಚಿಗೆ ಕಾಂಗ್ರೆಸ್ ಪಕ್ಷದ ನಾಯಕ ಸಿಬಲ್ ಅವರು ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ 'ಕಾಂಗ್ರೆಸ್ ನಲ್ಲಿ ಈಗ ಚುನಾಯಿತ ಅಧ್ಯಕ್ಷರಿಲ್ಲ. ಯಾರು ಕರೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ? ಪಕ್ಷದಲ್ಲಿ ಯಾರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ.ನಾವು ಜಿ -23, ಖಂಡಿತವಾಗಿಯೂ ಜಿ ಹುಜೂರ್ -23 ಅಲ್ಲ. ನಾವು ಸಮಸ್ಯೆಗಳನ್ನು ಎತ್ತುತ್ತಲೇ ಇರುತ್ತೇವೆ" ಎಂದು ಸಿಬಲ್ ಹೇಳಿದ್ದರು.ಇದಾದ ನಂತರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅವರ ಮನೆ ಮುಂದೆ ಜಮಾಯಿಸಿ ಪ್ರತಿಭಟನೆಯಲ್ಲಿ ತೊಡಗಿದ್ದರು.


ಇದನ್ನೂ ಓದಿ: ನವಜೋತ್ ಸಿಂಗ್ ಸಿಧು ಗೆ ಔತಣಕೂಟಕ್ಕೆ ಆಹ್ವಾನ ನೀಡಿ ಅಚ್ಚರಿ ಮೂಡಿಸಿದ ಸಿಎಂ ಅಮರಿಂದರ್ ಸಿಂಗ್


ಇನ್ನೊಂದೆಡೆಗೆ ಉತ್ತರ ಪ್ರದೇಶದ ಉಸ್ತುವಾರಿಯನ್ನು ವಹಿಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ ನಿರಂತರವಾಗಿ ಬಿಜೆಪಿ ಮೇಲೆ ವಾಗ್ದಾಳಿ ನಡೆಸುತ್ತಿದ್ದಾರೆ.ಈ ವಾರ ಯುಪಿಯ ಲಖಿಂಪುರ್ ಜಿಲ್ಲೆಯಲ್ಲಿ ಹತರಾದವರ ಕುಟುಂಬಗಳಿಗೆ ಭೇಟಿ ನೀಡಿದಾಗ, ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಬಂಧಿಸಲಾಯಿತು.


ಇದನ್ನೂ ಓದಿ : CRICURU App : ಕ್ರಿಕೆಟ್ ತರಬೇತಿಗೆ 'ಆ್ಯಪ್' ಆರಂಭಿಸಿದ ವೀರೇಂದ್ರ ಸೆಹ್ವಾಗ್!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.