ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ಪ್ರಧಾನಮಂತ್ರಿಗಳಿಂದ ನಿಲ್ದಾಣ ಅಭಿವೃದ್ಧಿಗೆ ಚಾಲನೆ

 ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಬಳ್ಳಾರಿ ರೈಲ್ವೆ ಸೇರಿದಂತೆ ಭಾರತೀಯ ರೈಲ್ವೆಯ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿಯವರು ಭಾನುವಾರದಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.

Written by - Manjunath Naragund | Last Updated : Aug 6, 2023, 05:55 PM IST
  • ರೈಲ್ವೆ ಜೋನ್ ಅಭಿವೃದ್ಧಿ ಪಡಿಸಲು ಅನುಮತಿ ಬೇಕಾಗುತ್ತದೆ
  • ಅನುಮತಿ ಬೇಗ ಬಂದರೆ ರಾಜ್ಯ ಸರ್ಕಾರದಿಂದ ಜೋನ್ ಅಭಿವೃದ್ಧಿ ಪಡಿಸುವುದಾಗಿ ತಿಳಿಸಿದರು
  • ಇದಕ್ಕೆ ರಾಜ್ಯ ಸರ್ಕಾರದಿಂದ ಬೇಕಾದ ಸೌಲಭ್ಯ ನೀಡುತ್ತೇವೆ ಎಂದರು
ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ಪ್ರಧಾನಮಂತ್ರಿಗಳಿಂದ ನಿಲ್ದಾಣ ಅಭಿವೃದ್ಧಿಗೆ ಚಾಲನೆ title=

ಬಳ್ಳಾರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಬಳ್ಳಾರಿ ರೈಲ್ವೆ ಸೇರಿದಂತೆ ಭಾರತೀಯ ರೈಲ್ವೆಯ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿಯವರು ಭಾನುವಾರದಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.

ಇದನ್ನೂ ಓದಿ-ಓಂ ಸಿನಿಮಾ ತರ ರೌಡಿಸಂ ಬಿಡಿಸಿ ಒಳ್ಳೆ ಜೀವನ ನಡೆಸಲು ಮುಂದಾಗಿದ್ದ ಸಿದ್ದಾಪುರ ಮಹೇಶನ ಹೆಂಡತಿ..!

ಭಾರತೀಯ ರೈಲ್ವೆಯು ಅತ್ಯಾಧುನಿಕ ಸಾರ್ವಜನಿಕ ಸಾರಿಗೆಯನ್ನು ಒದಗಿಸುವುದಕ್ಕೆ ಒತ್ತು ನೀಡುತ್ತಿದೆ. ರೈಲು ನಿಲ್ದಾಣಗಳಲ್ಲಿ ವಿಶ್ವದರ್ಜೆಯ ಸೌಕರ್ಯಗಳನ್ನು ಒದಗಿಸಲು ಒತ್ತು ನೀಡಲಾಗುತ್ತಿದೆ ಎಂದು ಪ್ರಧಾನಿಯವರು ಹೇಳಿದರು.

ನಗರದ ಪಾರಂಪರಿಕ ಕಟ್ಟಡವಾದ ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಬಳ್ಳಾರಿ ರೈಲ್ವೆ ನಿಲ್ದಾಣಕ್ಕೆ ಭಾನುವಾರ ವೇದಿಕೆ ಕಾರ್ಯಕ್ರಮದಲ್ಲಿ ಸಂಸದರಾದ ದೇವೇಂದ್ರಪ್ಪ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂಸದ ದೇವೇಂದ್ರಪ್ಪ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಳ್ಳಾರಿ ರೈಲ್ವೆ ನಿಲ್ದಾಣ, ರೈಲ್ವೆ ಸಂಪರ್ಕ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರುವ ಪ್ರಯತ್ನ ಮಾಡುವೆ ಎಂದರು. ಸುಧಾ ಕ್ರಾಸ್ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಟೆಂಡರ್ ಹಂತದಲ್ಲಿ ಇದೆ ಆದಷ್ಟು ಬೇಗ ಫ್ಲೈ ಓವರ್ ನಿರ್ಮಾಣ ಮಾಡುವುದಾಗಿ ತಿಳಿಸಿದರು.

ಇದನ್ನೂ ಓದಿ-"ಸರಕಾರದ ದುಡ್ಡು ಸಾರ್ವಜನಿಕರ ದುಡ್ಡೇ ಆಗಿರುವುದರಿಂದ ಅದನ್ನು ಇತಿಮಿತಿಯಲ್ಲಿ ಬಳಸಬೇಕು"

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಮಾತನಾಡಿ, ಬಳ್ಳಾರಿ ರೈಲ್ವೆ ನಿಲ್ದಾಣಕ್ಕೆ 150 ವರ್ಷಗಳ ಇತಿಹಾಸ ಇದೆ. ಗಾಂಧೀಜಿ ಅವರು ಸ್ವಾತಂತ್ರ್ಯ ಹೋರಾಟಗಾರರನ್ನು ಹುರಿದುಂಬಿಸುವ ಸಲುವಾಗಿ ರೈಲ್ವೆ ನಿಲ್ದಾಣದಲ್ಲಿ ಸುಮಾರು 8 ಗಂಟೆಗಳ ಕಾಲ ವಾಸ್ತವ್ಯ ಹೂಡಿದ್ದರು. ಇಂತಹ ರೈಲು ನಿಲ್ದಾಣ ಅಭಿವೃದ್ಧಿ ಮಾಡಬೇಕಾಗಿದೆ ಎಂದರು.

ರೈಲ್ವೆ ಜೋನ್ ಅಭಿವೃದ್ಧಿ ಪಡಿಸಲು ಅನುಮತಿ ಬೇಕಾಗುತ್ತದೆ, ಅನುಮತಿ ಬೇಗ ಬಂದರೆ ರಾಜ್ಯ ಸರ್ಕಾರದಿಂದ ಜೋನ್ ಅಭಿವೃದ್ಧಿ ಪಡಿಸುವುದಾಗಿ ತಿಳಿಸಿದರು. ಇದಕ್ಕೆ ರಾಜ್ಯ ಸರ್ಕಾರದಿಂದ ಬೇಕಾದ ಸೌಲಭ್ಯ ನೀಡುತ್ತೇವೆ ಎಂದರು.

ಚೀಫ್ ಪ್ರಾಜೆಕ್ಟ್ ಮ್ಯಾನೇಜರ್ ಜಿ.ಆರ್.ಎಸ್ ರಾವ್ ಅವರು ಮಾತನಾಡಿ, ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಸುಮಾರು 17 ಕೋಟಿ ವೆಚ್ಚದಲ್ಲಿ ಬಳ್ಳಾರಿ ನಗರದಲ್ಲಿನ ರೈಲ್ವೆ ನಿಲ್ದಾಣದ ಕಟ್ಟಡವನ್ನು ಒಳಾಂಗಣ ಮತ್ತು ಹೊರಗಡೆ ಕಟ್ಟಡವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ತ್ರಿವೇಣಿ, ಕರ್ನಾಟಕ ರಾಜ್ಯ ರೈಲ್ವೆ ಕ್ರಿಯಾ ಸಮಿತಿ ಅಧ್ಯಕ್ಷ ಮಹೇಶ್ವರಯ್ಯ ಸ್ವಾಮಿ, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಶ್ರೀನಿವಾಸ್ ರಾವ್, ಸಂಜಯ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

---------

Trending News