ನವದೆಹಲಿ: ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾದಲ್ಲಿ ಫೆಬ್ರವರಿ 16 ಮತ್ತು 27 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದೆ.


COMMERCIAL BREAK
SCROLL TO CONTINUE READING

ತ್ರಿಪುರಾದಲ್ಲಿ ಫೆಬ್ರವರಿ 16 ರಂದು ಮತದಾನ ನಡೆಯಲಿದ್ದು, ಮೇಘಾಲಯ ಮತ್ತು ನಾಗಾಲ್ಯಾಂಡ್ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಫಲಿತಾಂಶವನ್ನು ಮಾರ್ಚ್ 2 ರಂದು ಪ್ರಕಟಿಸಲಾಗುತ್ತದೆ.ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೂರು ಈಶಾನ್ಯ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಸಂಸ್ಥೆ ಪ್ರಕಟಿಸಿದೆ.


ಮೂರು ವಿಧಾನಸಭೆಗಳ ಅವಧಿಯು ಮಾರ್ಚ್‌ನಲ್ಲಿ ವಿವಿಧ ದಿನಾಂಕಗಳಲ್ಲಿ ಕೊನೆಗೊಳ್ಳುತ್ತಿದೆ. ಪ್ರಸ್ತುತ ನಾಗಾಲ್ಯಾಂಡ್ ವಿಧಾನಸಭೆಯ ಐದು ವರ್ಷಗಳ ಅವಧಿಯು ಮಾರ್ಚ್ 12 ರಂದು ಮುಕ್ತಾಯಗೊಂಡರೆ, ಮೇಘಾಲಯ ವಿಧಾನಸಭೆ ಮತ್ತು ತ್ರಿಪುರಾ ವಿಧಾನಸಭೆಯ ಅವಧಿ ಕ್ರಮವಾಗಿ ಮಾರ್ಚ್ 15 ಮತ್ತು ಮಾರ್ಚ್ 22 ರಂದು ಕೊನೆಗೊಳ್ಳಲಿದೆ.ತ್ರಿಪುರಾದಲ್ಲಿ ಬಿಜೆಪಿ ಅಧಿಕಾರದಲ್ಲಿದೆ ಮತ್ತು ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಆಡಳಿತಾರೂಢ ಸಮ್ಮಿಶ್ರ ಸರ್ಕಾರದ ಭಾಗವಾಗಿದೆ.


ಇದನ್ನೂ ಓದಿ: Miss Universe 2022 : ಯುಸ್‌ನ ಚೆಲುವೆಯ ಮುಡಿಗೆ ಭುವನ ಸುಂದರಿ ಕಿರೀಟ, ಭಾರತದ ದಿವಿತಾ ರೈಗೆ ನಿರಾಸೆ


ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ ಪ್ರತಿ ಚುನಾವಣೆಗೆ ತನ್ನದೇ ಆದ ಸವಾಲುಗಳಿವೆ.ಚುನಾವಣಾ ಸಂಸ್ಥೆಯು ಮುಕ್ತ, ನ್ಯಾಯಸಮ್ಮತ, ಭಾಗವಹಿಸುವಿಕೆ, ಒಳಗೊಳ್ಳುವಿಕೆ, ಪ್ರಚೋದನೆ ಮುಕ್ತ ಮತ್ತು ಶಾಂತಿಯುತ ಚುನಾವಣೆ ನಡೆಸಲು ಬದ್ಧವಾಗಿದೆ.ಕಷ್ಟಕರವಾದ ಭೂಪ್ರದೇಶಗಳ ಹೊರತಾಗಿಯೂ, ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ವಿಚಾರದಲ್ಲಿ ಮೂರು ರಾಜ್ಯಗಳು ದೇಶದ ಉಳಿದ ರಾಜ್ಯಗಳಿಗೆ ಮಾದರಿಯಾಗಿವೆ ಎಂದು ಹೇಳಿದರು.


ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ಮತದಾರರ ಲಿಂಗ ಅನುಪಾತವು 1000 ಕ್ಕಿಂತ ಹೆಚ್ಚಿದೆ ಮತ್ತು ತ್ರಿಪುರಾದಲ್ಲಿ ಇದು 989 ರಷ್ಟಿದೆ, ಇದು ರಾಷ್ಟ್ರೀಯ ಸರಾಸರಿ 969 ಕ್ಕಿಂತ ಹೆಚ್ಚಾಗಿದೆ ಎಂದು ಕುಮಾರ್ ಹೇಳಿದರು. 2018 ರ ವಿಧಾನಸಭಾ ಚುನಾವಣೆಯಲ್ಲಿ ಪುರುಷರಿಗಿಂತ ಶೇಕಡಾವಾರು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಅವರು ಹೇಳಿದರು.


ಇದನ್ನೂ ಓದಿ: ದಂಡ ವಸೂಲಿಗೆ ಮನೆ ಬಾಗಿಲಿಗೆ ಬರಲಿದೆ ವಸೂಲಿ ವಾಹನ: ಪಾಲಿಕೆ ಮತ್ತೊಂದು ನಿರ್ಧಾರ...!


ಚುನಾವಣಾ ಆಯೋಗವು ಜನವರಿ 11 ರಿಂದ 15 ರವರೆಗೆ ಮೂರು ರಾಜ್ಯಗಳಿಗೆ ಭೇಟಿ ನೀಡಿತು ಮತ್ತು ವಿವರವಾದ ಪರಿಶೀಲನಾ ಸಭೆಗಳನ್ನು ನಡೆಸಿತು ಮತ್ತು ರಾಜಕೀಯ ಪಕ್ಷಗಳನ್ನು ಭೇಟಿ ಮಾಡಿದೆ.ಮುಂಬರುವ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗಾಗಿ 180 ವಿಧಾನಸಭಾ ಕ್ಷೇತ್ರಗಳಲ್ಲಿ 9,125 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಅದು ತಿಳಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.