ಲೋಕಸಭೆ ಚುನಾವಣೆ ಅಧಿಕೃತ ಫಲಿತಾಂಶ ಬಿಡುಗಡೆಗೊಳಿಸಿದ ಚುನಾವಣಾ ಆಯೋಗ

ಲೋಕಸಭಾ ಚುನಾವಣೆಯ ಅಧಿಕೃತ ಫಲಿತಾಂಶವನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಒಟ್ಟು 543 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 303 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾದರೆ, ಇನ್ನೊಂದೆಡೆಗೆ ಕಾಂಗ್ರೆಸ್ ಪಕ್ಷ 52 ಸ್ಥಾನಗಳನ್ನು ಗೆಲ್ಲುವು ಮೂಲಕ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

Last Updated : May 24, 2019, 09:00 PM IST
ಲೋಕಸಭೆ ಚುನಾವಣೆ ಅಧಿಕೃತ ಫಲಿತಾಂಶ ಬಿಡುಗಡೆಗೊಳಿಸಿದ ಚುನಾವಣಾ ಆಯೋಗ

ನವದೆಹಲಿ: ಲೋಕಸಭಾ ಚುನಾವಣೆಯ ಅಧಿಕೃತ ಫಲಿತಾಂಶವನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಒಟ್ಟು 543 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 303 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾದರೆ, ಇನ್ನೊಂದೆಡೆಗೆ ಕಾಂಗ್ರೆಸ್ ಪಕ್ಷ 52 ಸ್ಥಾನಗಳನ್ನು ಗೆಲ್ಲುವು ಮೂಲಕ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಇನ್ನು ಪ್ರಾದೇಶಿಕ ಪಕ್ಷಗಳಾಗಿರುವ ಡಿಎಂಕೆ 23, ತೃಣಮೂಲ ಕಾಂಗ್ರೆಸ್ 22, ಯೈಎಸ್ಆರ್ ಕಾಂಗ್ರೆಸ್ 22, ಶಿವಸೇನಾ 18, ಜೆಡಿಯು 16, ಬಿಜೆಡಿ 12, ಬಿಎಸ್ಪಿ 10 ಸ್ಥಾನಗಳನ್ನು ಪಡೆದಿವೆ. ಪ್ರಧಾನಿ ಮೋದಿ ಸತತ ಎರಡನೇ ಬಾರಿಗೆ ಸ್ವಂತ ಬಹುಮತದ ಮೇಲೆ ಆಯ್ಕೆಯಾದ ಮೊದಲ ಕಾಂಗ್ರೆಸೇತರ ಪ್ರಧಾನಿ ಎನ್ನುವ ಖ್ಯಾತಿಯನ್ನು ಪಡೆದಿದ್ದಾರೆ. ಇನ್ನೊಂದೆಡೆಗೆ ಕಾಂಗ್ರೆಸ್ ಸತತ ಎರಡನೇ ಬಾರಿಗೆ ವಿರೋಧ ಪಕ್ಷದ ಸ್ಥಾನಕ್ಕೆ ಅರ್ಹತೆಯನ್ನು ಪಡೆಯುವಲ್ಲಿ ವಿಫಲವಾಗಿದೆ.

ಪ್ರಧಾನಿ ಮೋದಿ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್  ಹಾಗೂ ಹಿರಿಯ ಬಿಜೆಪಿ ನಾಯಕರಾದ ಎಲ್.ಕೆ.ಆಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿ ಮಾಡಿದರು.ಶನಿವಾರದಂದು ಎನ್ಡಿಎ ಮೈತ್ರಿಕೂಟದ ಸಭೆ ನಡೆಯಲಿದ್ದು, ಆಗ ಸರ್ಕಾರ ರಚನೆ, ನೂತನ ಕ್ಯಾಬಿನೆಟ್ ವಿಚಾರವಾಗಿ ಚರ್ಚಿಸಲಿದೆ ಎಂದು ತಿಳಿದುಬಂದಿದೆ.

 

More Stories

Trending News