BJP Candidate List For Lok Sabha Election : ಮಿಷನ್ 370 ಪೂರ್ಣಗೊಳಿಸಲು, ಬಿಜೆಪಿಯ ಸಂಪೂರ್ಣ ಗಮನ ಈಗ ಅಭ್ಯರ್ಥಿಗಳ ಆಯ್ಕೆಯ ಮೇಲೆ ಕೇಂದ್ರೀಕೃತವಾಗಿದೆ. 2024ರ ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಈ ವಾರ ಬಿಡುಗಡೆ ಮಾಡುವ ನಿರೀಕ್ಷೆ ಇದೆ.   ಮೂಲಗಳ ಪ್ರಕಾರ ಮೊದಲ ಪಟ್ಟಿಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವುದು ಬಹಿರಂಗವಾಗಲಿದೆ.ಈ ಬಾರಿ ಕೂಡಾ  ಪ್ರಧಾನಿ ಮೋದಿ ವಾರಣಾಸಿಯಿಂದ ಮೂರನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುವ ಎಲ್ಲಾ ಸಾಧ್ಯತೆಗಳಿವೆ. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುಮಾರು ಹನ್ನೆರಡು ರಾಜ್ಯಗಳ ಕೋರ್ ಗುಂಪಿನ ಸಭೆಯನ್ನು ಬಿಜೆಪಿ ಕರೆದಿದೆ. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿ ರಾಜ್ಯದ ನಾಯಕರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಪ್ರತಿ ರಾಜ್ಯದ ಮುಖ್ಯಮಂತ್ರಿಗಳು, ರಾಜ್ಯ ಉಸ್ತುವಾರಿಗಳು ಮತ್ತು ಇತರ ಹಿರಿಯ ನಾಯಕರನ್ನು ದೆಹಲಿಗೆ ಕರೆಸಲಾಗಿದೆ.


COMMERCIAL BREAK
SCROLL TO CONTINUE READING

ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಮಹತ್ವದ ಸಭೆ ಗುರುವಾರ ನಡೆಯಲಿದೆ. ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯನ್ನು ನವದೆಹಲಿಯಲ್ಲಿ ನಡೆಯಲಿದೆ. ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಗೆ ಇಲ್ಲಿಯೇ  ಅಂತಿಮ ಒಪ್ಪಿಗೆ ಸಿಗಲಿದೆ. ಸುಮಾರು 100 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 1 ಅಥವಾ 2 ರಂದು ಬಿಡುಗಡೆ ಮಾಡುವ ಸಾಧ್ಯತೆಯಿದೆ. 


ಇದನ್ನೂ ಓದಿ :  ಆಸ್ಪತ್ರೆಗಳಲ್ಲಿ ಪ್ರಮಾಣಿತ ಶುಲ್ಕ ನಿಗದಿಪಡಿಸಿ, ಇಲ್ಲದಿದ್ದರೆ CGHS ದರ ಪರಿಗಣನೆ ಖಚಿತ: ಸುಪ್ರೀಂ ಕೋರ್ಟ್ ಸೂಚನೆ


ಲೋಕಸಭೆ ಚುನಾವಣೆ 2024: ಬಿಜೆಪಿಯ ಗುರಿ ಏನು?
ಮುಂಬರುವ ಚುನಾವಣೆಯಲ್ಲಿ ಕನಿಷ್ಠ 370 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದೆ. 2024ರಲ್ಲಿ 2019ರ ಅಂಕಿಅಂಶಗಳನ್ನು ಮೀರಿಸುತ್ತೇವೆ ಎಂದು ಬಿಜೆಪಿ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೂರನೇ ಅವಧಿಯ ಮೊದಲ 100 ದಿನಗಳ ನೀಲನಕ್ಷೆಯನ್ನು ಸಿದ್ಧಪಡಿಸುವಂತೆ ಪ್ರಧಾನಿ ಸಂಪುಟದ ಸಚಿವರನ್ನು ಕೇಳಿದ್ದಾರೆ ಎನ್ನಲಾಗಿದೆ. 


2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 400+ ಸ್ಥಾನಗಳನ್ನು ಪಡೆಯಲಿದೆ ಎಂದು ಪ್ರಧಾನಿ ಮೋದಿ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಕೇವಲ ಸೀಟುಗಳ ಹೆಚ್ಚಳಕ್ಕೆ ಒತ್ತು ನೀಡದೆ ಮತಗಳಿಕೆಗೂ ಒತ್ತು ನೀಡುತ್ತಿದೆ. ಈ ಕಾರಣದಿಂದಲೇ ಪಕ್ಷ ಇತ್ತೀಚಿನ ದಿನಗಳಲ್ಲಿ ಹಲವು ಪಕ್ಷಗಳನ್ನು ಎನ್ ಡಿಎಯತ್ತ ಸೆಳೆದುಕೊಂಡಿದೆ. 


ಇದನ್ನೂ ಓದಿ :  ಹೃದಯಾಘಾತಕ್ಕೆ ಪತಿ ಬಲಿ; ಆಘಾತದಿಂದ ಆತ್ಮಹತ್ಯೆ ಮಾಡಿಕೊಂಡ ಪತ್ನಿ!


1984ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐತಿಹಾಸಿಕ ಗೆಲುವಿಗಿಂತ ದೊಡ್ಡ ಗೆಲುವನ್ನು ದಾಖಲಿಸಲು ಬಿಜೆಪಿ ಮುಂದಾಗಿದೆ. ಇಂದಿರಾ ಗಾಂಧಿಯವರ ನಿಧನದ ನಂತರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 49.10% ಮತಗಳನ್ನು ಪಡೆಯುವ ಮೂಲಕ 414 ಸ್ಥಾನಗಳನ್ನು ಗಳಿಸಿತ್ತು. ಸೀಟುಗಳ ಜೊತೆಗೆ ಮತಗಳಿಕೆಯಲ್ಲಿ ಕಾಂಗ್ರೆಸ್ ಅನ್ನು ಹಿಂದಿಕ್ಕಬೇಕು ಎನ್ನುವ ಬಯಕೆ ಬಿಜೆಪಿಯದ್ದು. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಶೇ.37.36 ಮತಗಳನ್ನು ಪಡೆದಿತ್ತು.  


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.