ನವದೆಹಲಿ: ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈಗ ಈ ಕುರಿತಾಗಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ "ಸಂಸತ್ತಿನ ವಿಶೇಷ ಅಧಿವೇಶನವನ್ನು ಸಪ್ಟೆಂಬರ್ 18 ರಿಂದ 22ರ ವರೆಗೆ ಕರೆಯಲಾಗಿದ್ದು ಒಟ್ಟು 5 ಅವಧಿಗಳು ಇರಲಿವೆ. 17ನೇ ಲೋಕಸಭೆಯ 13ನೇ ಅಧಿವೇಶನ ಹಾಗೂ ರಾಜ್ಯಸಭೆಯ 261 ನೇ ಅಧಿವೇಶನ ಇದಾಗಿರಲಿದೆ. ಅಮೃತ್ ಕಾಲದ ಈ ಮಹತ್ವದ ಕಾಲಫಟ್ಟದಲ್ಲಿ ಒಂದು ರಚನಾತ್ಮಕ ಅಧಿವೇಶವನ್ನು ಮುನ್ನೋಡುತ್ತಿದ್ದೇವೆ" ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಟೈಟಲ್ ಮೂಲಕ ಗಮನ ಸೆಳೆಯುತ್ತಿರುವ ‘ಕಿಡ್ನಾಪ್ ಕಾವ್ಯ’!
Special Session of Parliament (13th Session of 17th Lok Sabha and 261st Session of Rajya Sabha) is being called from 18th to 22nd September having 5 sittings. Amid Amrit Kaal looking forward to have fruitful discussions and debate in Parliament.
ಸಂಸತ್ತಿನ ವಿಶೇಷ ಅಧಿವೇಶನವನ್ನು… pic.twitter.com/k5J2PA1wv2
— Pralhad Joshi (@JoshiPralhad) August 31, 2023
ಸರ್ಕಾರದ ಮೂಲಗಳು ಇಲ್ಲಿಯವರೆಗೆ ಸಂಭವನೀಯ ಅಜೆಂಡಾಗಳ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ, ಆದರೆ ಹಳೆಯ ಸಂಸತ್ ನಿಂದ ಹೊಸ ಸಂಸತ್ ಭವನಕ್ಕೆ ಸ್ಥಳಾಂತರ ಪ್ರಕ್ರಿಯೆ ಆರಂಭಿಸುವ ನಿಟ್ಟಿನಲ್ಲಿ ವಿಶೇಷ ಅಧಿವೇಶನ ಕರೆಯಲಾಗುತ್ತಿದೆ ಎಂಬ ಊಹಾಪೋಹಗಳಿವೆ.ಆದ್ದರಿಂದ ಈ ಅಧಿವೇಶನವು ಈಗ ಹಳೆಯ ಸಂಸತ್ ಭವನದಿಂದ ಆರಂಭವಾಗಿ ಹೊಸ ಸಂಸತ್ ನಲ್ಲಿ ಕೊನೆಗೊಳ್ಳಬಹುದು ಎನ್ನುವ ಮಾಹಿತಿ ಇದೆ.
ಇದನ್ನೂ ಓದಿ-HD Kumaraswamy Health Updates: ಎಚ್ಡಿಕೆ ಆರೋಗ್ಯದ ಬಗ್ಗೆ ಅನಿತಾ ಕುಮಾರಸ್ವಾಮಿ ಹೇಳಿದ್ದೇನು..?
ಸರ್ಕಾರಿ ಮೂಲಗಳ ಪ್ರಕಾರ ಭಾರತವನ್ನು ಅಭಿವೃದ್ದಿ ಹೊಂದಿದ ರಾಷ್ಟ್ರ ಎಂದು ಘೋಷಿಸುವ ಸಾಧ್ಯತೆ ಇದ್ದು, ಈ ವೇಳೆ ಯಾವುದೇ ರೀತಿಯ ಹೊಸ ಮಸೂದೆಗಳು ಅಂಗೀಕಾರವಾಗುವುದಿಲ್ಲ ಎನ್ನಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.