ತಿರುವನಂತಪುರಂ (Kerala): ಶಬರಿಮಲೆ (Sabarimala) ಕುರಿತು ಸುಪ್ರೀಂ ಕೋರ್ಟ್‌ನ(Supreme Court) ತೀರ್ಪನ್ನು ಸರ್ಕಾರ ಜಾರಿಗೆ ತರುತ್ತದೆ ಎಂದು ಕೇರಳ ಸಚಿವ ಕಡಕಂಪಲ್ಲಿ ಸುರೇಂದ್ರನ್ ಮಂಗಳವಾರ ಇಲ್ಲಿ ನಡೆದ ಕೇರಳ ವಿಧಾನಸಭಾ ಅಧಿವೇಶನದಲ್ಲಿ ಹೇಳಿದರು.


COMMERCIAL BREAK
SCROLL TO CONTINUE READING

ಈ ತಿಂಗಳು ಶಬರಿಮಲೆ ದೇವಸ್ಥಾನದ ಬಾಗಿಲು ತೆರೆಯಲಿದೆ. ರಾಜ್ಯ ಸರ್ಕಾರ ಮಾಡಿರುವ ವ್ಯವಸ್ಥೆಗಳು ಮತ್ತು ಈ ವಿಷಯದಲ್ಲಿ ನಿಧಿ ಹಂಚಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ.


"ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿಗೆ ತರುವುದಿಲ್ಲ ಎಂದು ಕೇರಳ ಸರ್ಕಾರ(Kerala Government) ಹೇಳಲು ಸಾಧ್ಯವಿಲ್ಲ" ಎಂದು ಸ್ಪಷ್ಟಪಡಿಸಿದ ಸುರೇಂದ್ರನ್, ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವೀಕರಿಸುವುದಿಲ್ಲ ಎಂದು ಹೇಳುವ ಧೈರ್ಯವಿದೆಯೇ ಎಂದು ಪ್ರತಿಪಕ್ಷಗಳಿಗೆ ಸವಾಲು ಹಾಕಿದರು.


ಪ್ರಸ್ತುತ ಬಿಕ್ಕಟ್ಟನ್ನು ಎದುರಿಸಲು ನಾವು ದೇವಾಸ್ವಂ ಮಂಡಳಿಗೆ 100 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದೇವೆ ಮತ್ತು ಈಗಾಗಲೇ 30 ಕೋಟಿ ನೀಡಲಾಗಿದೆ ಎಂದು ಅವರು ಹೇಳಿದರು.


ಎಲ್ಲಾ ವಯಸ್ಸಿನ ಮಹಿಳೆಯರನ್ನು ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶಿಸಲು ಅನುಮತಿ ನೀಡುವ ಸುಪ್ರೀಂ ಕೋರ್ಟ್ ಆದೇಶವನ್ನು ತಪ್ಪಿಸಲು ಕಾನೂನುಗಳನ್ನು ಮಾಡಲು ಸಾಧ್ಯವಿಲ್ಲ ಮತ್ತು ಅದನ್ನು ಕಾರ್ಯಗತಗೊಳಿಸಲು ಬದ್ಧವಾಗಿದೆ ಎಂದು ಸೋಮವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಧಾನಸಭೆಯಲ್ಲಿ ತಿಳಿಸಿದ್ದರು.


ಶಬರಿಮಲ ಅಯ್ಯಪ್ಪ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರನ್ನು ಪ್ರವೇಶಿಸಬಹುದು ಆದೇಶಿಸಿ ಸುಪ್ರೀಂ ಕೋರ್ಟ್ ಕಳೆದ ವರ್ಷ ಸೆಪ್ಟೆಂಬರ್ 28 ರಂದು ತೀರ್ಪು ಪ್ರಕಟಿಸಿತ್ತು.  ನವೆಂಬರ್ 16 ರಂದು ವಾರ್ಷಿಕ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ತೆರೆಯಲಾಗುತ್ತಿದೆ.


[With ANI Inputs]