ನವದೆಹಲಿ: ಅಕ್ಟೋಬರ್ ತಿಂಗಳಿನ ಜಿಎಸ್ಟಿ ಸಂಗ್ರಹವು ಈ ವರ್ಷದ ಫೆಬ್ರವರಿಯಿಂದ ಮೊದಲ ಬಾರಿಗೆ 1 ಲಕ್ಷ ಕೋಟಿ ರೂ.ಗಳನ್ನು ದಾಟಿದೆ ಎಂದು ಹಣಕಾಸು ಸಚಿವಾಲಯ ಭಾನುವಾರ ತಿಳಿಸಿದೆ. ಈಗ ಒಟ್ಟು ಸಂಗ್ರಹವು 1.05 ಲಕ್ಷ ಕೋಟಿ ರೂ.ಆಗಿದೆ.ಅಕ್ಟೋಬರ್ 31, 2020 ರವರೆಗೆ ಸಲ್ಲಿಸಿದ ಒಟ್ಟು ಜಿಎಸ್‌ಟಿಆರ್ -3 ಬಿ ರಿಟರ್ನ್‌ಗಳ ಸಂಖ್ಯೆ 80 ಲಕ್ಷ ಎನ್ನಲಾಗಿದೆ.


GST ವಿಷಯದಲ್ಲಿ ರಾಜ್ಯಗಳ ಪರಿಸ್ಥಿತಿ ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ ಎಂಬಂತಾಗಿದೆ: ಕುಮಾರಸ್ವಾಮಿ


COMMERCIAL BREAK
SCROLL TO CONTINUE READING

2020 ರ ಅಕ್ಟೋಬರ್‌ನಲ್ಲಿ ಸಂಗ್ರಹಿಸಿದ ಒಟ್ಟು ಜಿಎಸ್‌ಟಿ ಆದಾಯ 1,05,155 ಕೋಟಿ ರೂ. ಇದರಲ್ಲಿ ಸಿಜಿಎಸ್‌ಟಿ 19,193 ಕೋಟಿ ರೂ., ಎಸ್‌ಜಿಎಸ್‌ಟಿ 5,411 ಕೋಟಿ ರೂ., ಐಜಿಎಸ್‌ಟಿ 52,540 ಕೋಟಿ ರೂ. (ಸರಕುಗಳ ಆಮದಿನಲ್ಲಿ ಸಂಗ್ರಹಿಸಿದ 23,375 ಕೋಟಿ ರೂ.) ಮತ್ತು ಸೆಸ್ 8,011 ಕೋಟಿ ರೂ. (ಸರಕುಗಳ ಆಮದಿಗೆ ಸಂಗ್ರಹಿಸಿದ 932 ಕೋಟಿ ರೂ. ಸೇರಿದಂತೆ) ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.ಕಳೆದ ವರ್ಷದ ಇದೇ ತಿಂಗಳಲ್ಲಿ ಸಂಗ್ರಹಿಸಿದ 95,379 ಕೋಟಿ ರೂ.ಗಳಿಗಿಂತ ಈ ತಿಂಗಳ ಆದಾಯವು ಶೇಕಡಾ 10 ರಷ್ಟು ಹೆಚ್ಚಾಗಿದೆ.


ತೆರಿಗೆದಾರರೇ ಗಮನಿಸಿ! GST ಹೆಸರಿನಿಂದ ನಡೆಯುತ್ತಿರುವ ವಂಚನೆ ಬಗ್ಗೆ ಇರಲಿ ಎಚ್ಚರ


ಸರಕುಗಳ ಆಮದಿನಿಂದ ಬರುವ ಆದಾಯವು ಶೇಕಡಾ 9 ರಷ್ಟು ಹೆಚ್ಚಾಗಿದೆ ಮತ್ತು ದೇಶೀಯ ವಹಿವಾಟಿನಿಂದ (ಸೇವೆಗಳ ಆಮದು ಸೇರಿದಂತೆ) ಆದಾಯವು ಕಳೆದ ವರ್ಷ ಇದೇ ತಿಂಗಳಲ್ಲಿ ಈ ಮೂಲಗಳಿಂದ ಬಂದ ಆದಾಯಕ್ಕಿಂತ 11 ಶೇಕಡಾ ಹೆಚ್ಚಾಗಿದೆ.2020 ರ ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳುಗಳಿಗೆ ಹೋಲಿಸಿದರೆ ಜಿಎಸ್ಟಿ ಆದಾಯದ ಬೆಳವಣಿಗೆಯು ಆರ್ಥಿಕತೆಯ ಚೇತರಿಕೆಯ ಪಥವನ್ನು ತೋರಿಸುತ್ತದೆ ಮತ್ತು ಅದಕ್ಕೆ ಅನುಗುಣವಾಗಿ ಆದಾಯವನ್ನು ತೋರಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.