ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಂದಿನ 72 ಗಂಟೆಗಳಲ್ಲಿ ಮಾನ್ಸೂನ್ ಮುನ್ಸೂಚನೆ ನೀಡಲಾಗಿದೆ. ದೆಹಲಿಯಲ್ಲಿ ಮುಂದಿನ ಮೂರು ದಿನ ಬಿರುಗಾಳಿ ಸಹಿತ ಮಳೆಯಾಗುವ ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ ಜನರನ್ನು ಜಾಗರೂಕರಾಗಿರುವಂತೆ ಸೂಚಿಸಿದೆ. ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಸೇರಿದಂತೆ ದೇಶದಾದ್ಯಂತದ 13 ರಾಜ್ಯಗಳಲ್ಲಿ ಮುಂದಿನ 3 ದಿನಗಳಲ್ಲಿ ಮಳೆಯಾಗಲಿದೆ ಹವಾಮಾನ ಇಲಾಖೆ ತಿಳಿಸಿದೆ. 13 ರಾಜ್ಯಗಳಲ್ಲಿ IMD ಆರೆಂಜ್ ಅಲರ್ಟ್ ಜಾರಿಮಾಡಿದೆ.


COMMERCIAL BREAK
SCROLL TO CONTINUE READING

ಏನಿದು IMD ಆರೆಂಜ್ ಅಲರ್ಟ್?
ಮಾನ್ಸೂನ್ ಸಮಯದಲ್ಲಿ, ಭಾರತೀಯ ಹವಾಮಾನ ಇಲಾಖೆಯು ವಿಭಿನ್ನ ಬಣ್ಣಗಳಲ್ಲಿ ಎಚ್ಚರಿಕೆ ನೀಡುತ್ತದೆ. ಇವುಗಳಲ್ಲಿ ಒಂದು ಆರೆಂಜ್ ಎಚ್ಚರಿಕೆ. ಈ ಎಚ್ಚರಿಕೆಯು ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂಬುದನ್ನು ಸೂಚಿಸುತ್ತದೆ. ಅಂತಹ ಪ್ರದೇಶದಲ್ಲಿ ನೆಲೆಸಿರುವವರು ಭಾರೀ ಮಳೆಯಿಂದ ಹಾನಿಯಾಗದಂತೆ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. 


ಮುಂದಿನ 24 ಗಂಟೆಗಳಲ್ಲಿ ಮುಂಗಾರು ಪೂರ್ವ ರಾಜಸ್ಥಾನ, ಮಧ್ಯ ಪ್ರದೇಶ, ಉತ್ತರ ಪ್ರದೇಶ, ಬಿಹಾರ, ಛತ್ತೀಸ್ಗಢ ಮತ್ತು ಜಾರ್ಖಂಡ್ಗಳನ್ನು ಒಳಗೊಳ್ಳುತ್ತದೆ. ಇದರ ನಂತರ, ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಉತ್ತರಖಂಡದಲ್ಲಿ ಮಾನ್ಸೂನ್ ಪ್ರವೇಶವಿರುತ್ತದೆ. ಜುಲೈ 1 ರಿಂದ 2 ರವರೆಗೆ ಇಡೀ ದೇಶದಲ್ಲಿ ಮಾನ್ಸೂನ್ ಪ್ರಭಾವ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಜೂನ್ 28- ಹವಾಮಾನ ಇಲಾಖೆ, ಜೂನ್ 28 ರಂದು ದೆಹಲಿ, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ಗಢ, ಜಮ್ಮು ಮತ್ತು ಕಾಶ್ಮೀರ ಮತ್ತು ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ಸಂದೇಶವನ್ನು ರವಾನಿಸಿತು. ಆದಾಗ್ಯೂ, ಉತ್ತರಾಖಂಡ, ಪಂಜಾಬ್, ರಾಜಸ್ಥಾನ, ಗೋವಾ, ಮಧ್ಯ ಮಹಾರಾಷ್ಟ್ರ, ವಿದರ್ಭ, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒರಿಸ್ಸಾ, ಜಾರ್ಖಂಡ್ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೇ ಎಂದು ಹೇಳಲಾಗಿದೆ.


ಜೂನ್ 29- ಹವಾಮಾನ ಇಲಾಖೆಯ ಪ್ರಕಾರ, ಜೂನ್ 29 ರಂದು ಉತ್ತರಖಂಡ, ಕೊಂಕಣ, ಗೋವಾ ಮತ್ತು ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮತ್ತೊಂದೆಡೆ ಹಿಮಾಚಲ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ಜಮ್ಮು ಮತ್ತು ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಭಾರಿ ಎಚ್ಚರಿಕೆ ನೀಡಲಾಗಿದೆ.


ಜೂನ್ 30- IMD ಪ್ರಕಾರ, ಉತ್ತರಾಖಂಡ್, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಹಿಮಾಲಯನ್ ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಜೂನ್ 30 ರಂದು ಭಾರಿ ಮಳೆಯಾಗುವ ಬಗ್ಗೆ ವರದಿಯಾಗಿದೆ. ಅದೇ ಸಮಯದಲ್ಲಿ ಬಿಹಾರ, ಉತ್ತರ ಪ್ರದೇಶ ಮತ್ತು ಕೇರಳದಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ.



ಆರೆಂಜ್ ಅಲರ್ಟ್ ಹೊಂದಿರುವ ರಾಜ್ಯಗಳು
ಹವಾಮಾನ ಇಲಾಖೆ ದೆಹಲಿ, ಮಧ್ಯಪ್ರದೇಶ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ್, ಛತ್ತೀಸ್ಗಢ, ಒರಿಸ್ಸಾ, ಹರಿಯಾಣ, ಕರ್ನಾಟಕ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಆರೆಂಜ್ ಅಲರ್ಟ್ ಜಾರಿ ಮಾಡಿದೆ.