ನವದೆಹಲಿ: ಮಹಾರಾಷ್ಟ್ರದಲ್ಲಿ ಧ್ವನಿವರ್ಧಕದ ವಿವಾದ ಸ್ಪೋಟಗೊಂಡ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರವು ಮಸೀದಿಗಳು ಮತ್ತು ದೇವಾಲಯಗಳಂತಹ ಅನೇಕ ಧಾರ್ಮಿಕ ಸ್ಥಳಗಳಿಂದ ಸ್ಪೀಕರ್‌ಗಳನ್ನು ತೆಗೆದುಹಾಕಿತು.ಈ ವಿವಾದದ ಮಧ್ಯೆ, ಅಲಹಾಬಾದ್ ಹೈಕೋರ್ಟ್ ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಹೊಂದಿರುವುದು ಮೂಲಭೂತ ಹಕ್ಕಲ್ಲ ಎಂದು ಹೇಳಿದೆ.


COMMERCIAL BREAK
SCROLL TO CONTINUE READING

ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್, "ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ" ಎಂದು ಹೇಳಿದೆ, ನ್ಯಾಯಮೂರ್ತಿ ವಿವೇಕ್ ಕುಮಾರ್ ಬಿರ್ಲಾ ಮತ್ತು ನ್ಯಾಯಮೂರ್ತಿ ವಿಕಾಸ್ ಅವರ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ.


ಇದನ್ನೂ ಓದಿ : ತೆರೆಮೇಲೆ ಅಬ್ಬರಿಸಲು ಸಜ್ಜಾದ 'ಮಾರ್ಟಿನ್‌'! ರಿಲೀಸ್‌ ಡೇಟ್‌ ಫಿಕ್ಸ್


ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಪೀಠ, 'ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದು ಸಾಂವಿಧಾನಿಕ ಹಕ್ಕು ಅಲ್ಲ ಎಂದು ಕಾನೂನು ಹೇಳುತ್ತದೆ,'ಎಂದು ಹೇಳಿದೆ.ಉತ್ತರಪ್ರದೇಶದ ಅಧಿಕಾರಿಗಳು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯ ಮೇಲೆ ಕಠಿಣ ಕ್ರಮ ಕೈಗೊಂಡಿರುವ ಬೆನ್ನಲ್ಲೇ ಈ ಕೋರ್ಟ್ ನ ಆದೇಶ ಬಂದಿದೆ.ರಾಜ್ಯದಲ್ಲಿ ಒಮಿಕ್ರಾನ್‌ ಪತ್ತೆ: ದೇಶದಲ್ಲಿ 3,545 ಹೊಸ ಕೊರೊನಾ ಪ್ರಕರಣ ದಾಖಲು


ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಧಾರ್ಮಿಕ ಸ್ಥಳದ ಒಳಗೆ ಅಳವಡಿಸಲಾಗಿರುವ ಧ್ವನಿವರ್ಧಕದ ಶಬ್ದವು ಆವರಣದ ಹೊರಗೆ ಕೇಳಬಾರದು ಎಂದು ಹೇಳಿದ್ದರು.ಕೆಲವು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಯುಪಿ ಸರ್ಕಾರವು ಧಾರ್ಮಿಕ ಸ್ಥಳಗಳಿಂದ ಹಲವಾರು ಧ್ವನಿವರ್ಧಕಗಳನ್ನು ತೆಗೆದುಹಾಕಿದೆ.ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಂತಹ ಹಲವಾರು ರಾಜ್ಯಗಳಲ್ಲಿ ಧ್ವನಿವರ್ಧಕದ ವಿವಾದ ಕಂಡು ಬಂದಿರುವುದರಿಂದ ಈ ಆದೇಶ ಬಂದಿದೆ, ಅಲ್ಲಿ ಪೂಜಾ ಸ್ಥಳಗಳಲ್ಲಿ ಧ್ವನಿವರ್ಧಕಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಒತ್ತಾಯಿಸಲಾಗಿದೆ.


ಎಂಎನ್‌ಎಸ್ ನಾಯಕ ರಾಜ್ ಠಾಕ್ರೆ ಅವರು ಮಹಾರಾಷ್ಟ್ರದ ಮಸೀದಿಗಳ ಆವರಣದಲ್ಲಿ ಧ್ವನಿವರ್ಧಕಗಳನ್ನು ಬಳಸುವುದರ ವಿರುದ್ಧ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಇದರ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.ಇನ್ನೊಂದೆಡೆಗೆ ಆಜಾನ್‌ಗಾಗಿ ಧ್ವನಿವರ್ಧಕಗಳನ್ನು ಬಳಸುತ್ತಿದ್ದ ಮಸೀದಿಗಳ ಹೊರಗೆ ಹನುಮಾನ್ ಚಾಲೀಸಾ ನುಡಿಸಿದ್ದಕ್ಕಾಗಿ ಅನೇಕ ಎಂಎನ್‌ಎಸ್ ಕಾರ್ಯಕರ್ತರನ್ನು ಇತ್ತೀಚೆಗೆ ಬಂಧಿಸಲಾಯಿತು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.