ನವದೆಹಲಿ: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಜೀ ನ್ಯೂಸ್ ಪ್ರಧಾನ ಸಂಪಾದಕ ಸುಧೀರ್ ಚೌಧರಿ ಅವರಿಗೆ ವಿಶೇಷ ಸಂದರ್ಶನ ನೀಡಿ ಕಾಶ್ಮೀರದ ಪರಿಸ್ಥಿತಿ, ಆರ್ಟಿಕಲ್ 370, ಎನ್ಆರ್ಸಿ, ಅಯೋಧ್ಯೆ ಪ್ರಕರಣ ಮತ್ತು ಆರ್ಥಿಕತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾತನಾಡಿದರು.
ಸಂದರ್ಶನದಲ್ಲಿ ಕೇಂದ್ರ ಗೃಹ ಸಚಿವರು ಕಾಶ್ಮೀರದ ಪರಿಸ್ಥಿತಿ 100% ಸಾಮಾನ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಕರ್ಫ್ಯೂ ಇಲ್ಲ ಮತ್ತು ಆರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾತ್ರ ಸೆಕ್ಷನ್ 144 ಅನ್ನು ವಿಧಿಸಲಾಗಿದೆ ಎಂದು ಹೇಳಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಲ್ಯಾಂಡ್ಲೈನ್ಗಳು ಮತ್ತು ಮೊಬೈಲ್ ಫೋನ್ಗಳು ಕಾರ್ಯನಿರ್ವಹಿಸುತ್ತಿದ್ದು, ಸೇಬಿನ ವ್ಯವಹಾರವೂ ಸುಗಮವಾಗಿ ನಡೆಯುತ್ತಿದೆ. ರಸ್ತೆ ಸಂಚಾರ ಮತ್ತು ಮಾರುಕಟ್ಟೆಗಳು ಸಹ ಮತ್ತೆ ಸಾಮಾನ್ಯ ಸ್ಥಿತಿಯತ್ತ ಮರಳುತ್ತಿವೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.
ಪಾಕಿಸ್ತಾನವು ಈ ಪ್ರದೇಶದಲ್ಲಿ ಶಾಂತಿ ಕದಡಲು ಪದೇ ಪದೇ ಯತ್ನಿಸುತ್ತಿರುವುದರಿಂದ ಭದ್ರತಾ ಪಡೆಗಳು ಮತ್ತು ಸರ್ಕಾರವು ಸದಾ ಜಾಗರೂಕರಾಗಿರಬೇಕು ಎಂದು ಶಾ ತಿಳಿಸಿದರು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೂವರು ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಗೃಹ ಬಂಧನದಲ್ಲಿ ಇರಿಸಲಾಗಿದೆ. ಅವರನ್ನು ಬಿಡುಗಡೆ ಮಾಡುವ ಬಗ್ಗೆ ಭದ್ರತಾ ಸಂಸ್ಥೆಗಳು ನಿರ್ಧರಿಸುತ್ತವೆ ಎಂದು ಅಮಿತ್ ಶಾ ತಿಳಿಸಿದರು.
ಕಾಶ್ಮೀರದ ಸ್ಥಿತಿ ಸಾಮಾನ್ಯವಾಗಿಲ್ಲ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದ ಅಮಿತ್ ಶಾ, ಕೇವಲ ಪ್ರಧಾನಮಂತ್ರಿಯ ಕುರ್ಚಿಯನ್ನು ಉಳಿಸಿಕೊಳ್ಳುವ ಸಲುವಾಗಿ 19 ತಿಂಗಳ ಕಾಲ ಇಡೀ ವಿರೋಧ ಪಕ್ಷಗಳನ್ನು ಜೈಲಿನಲ್ಲಿರಿಸಿದ್ದನ್ನು ಕಾಂಗ್ರೆಸ್ ಮರೆಯಬಾರದು ಎಂದು ತಿರುಗೇಟು ನೀಡಿದರು.
370 ನೇ ವಿಧಿಯನ್ನು ರದ್ದುಪಡಿಸಿರುವ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಹರಡಲು ಪಾಕಿಸ್ತಾನ ಬಳಸುತ್ತಿದ್ದ 370 ನೇ ವಿಧಿಯನ್ನು ರದ್ದುಗೊಳಿಸುವ ಮಸೂದೆಯನ್ನು ಮಂಡಿಸುವ ಅವಕಾಶ ದೊರೆತಿರುವುದು ಅದೃಷ್ಟ ಎಂದು ಬಣ್ಣಿಸಿದರು. ಭಾರತದ ಅಭಿವೃದ್ಧಿಯಲ್ಲಿ ಆಸಕ್ತಿ ಹೊಂದಿರುವ ರಾಜಕೀಯ ಪಕ್ಷಗಳು ಸಂಸತ್ತಿನಲ್ಲಿ ಮಸೂದೆಯನ್ನು ಬೆಂಬಲಿಸಿದರೆ, ಮತ ಬ್ಯಾಂಕ್ನ ರಾಜಕೀಯ ಮಾಡುವವರು ಮಸೂದೆಯನ್ನು ವಿರೋಧಿಸಿದರು ಎಂದು ಅವರು ಹೇಳಿದರು.