ಅಭ್ಯರ್ಥಿಯ ಹಠಾತ್ ನಿಧನದಿಂದ ಈ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆ ರದ್ದು..!

 ಮಧ್ಯಪ್ರದೇಶದ ಬೇತುಲ್ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಅಶೋಕ್ ಭಲಾವಿ ಅವರು ಹೃದಯಾಘಾತದಿಂದ ನಿಧನರಾಗಿದ್ದರಿಂದಾಗಿ ಈಗ ಈ ಕ್ಷೇತ್ರದ ಚುನಾವಣೆಯನ್ನು ರದ್ದುಗೊಳಿಸಲಾಗಿದೆ.

Written by - Manjunath N | Last Updated : Apr 9, 2024, 09:48 PM IST
  • ಏಪ್ರಿಲ್ 9 ರಂದು, ಬೇತುಲ್ ಲೋಕಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಭ್ಯರ್ಥಿ ಅಶೋಕ್ ಭಲಾವಿ ನಿಧನರಾದರು
  • ಸೊಹಾಗ್‌ಪುರದ ನಿವಾಸದಲ್ಲಿ ಅವರಿಗೆ ಹೃದಯಾಘಾತವಾಗಿದೆ
  • ಅವರ ಸ್ಥಿತಿ ನೋಡಿ ತಕ್ಷಣ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಕರೆತಂದರೂ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು
 ಅಭ್ಯರ್ಥಿಯ ಹಠಾತ್ ನಿಧನದಿಂದ ಈ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆ ರದ್ದು..! title=

ಭೂಪಾಲ್: ಮಧ್ಯಪ್ರದೇಶದ ಬೇತುಲ್ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಅಶೋಕ್ ಭಲಾವಿ ಅವರು ಹೃದಯಾಘಾತದಿಂದ ನಿಧನರಾಗಿದ್ದರಿಂದಾಗಿ ಈಗ ಈ ಕ್ಷೇತ್ರದ ಚುನಾವಣೆಯನ್ನು ರದ್ದುಗೊಳಿಸಲಾಗಿದೆ.

ಕುಟುಂಬ ಸದಸ್ಯರ ಪ್ರಕಾರ, ಮಂಗಳವಾರ ಮಧ್ಯಾಹ್ನ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.ಇದರಿಂದಾಗಿ ಈಗ ಈ ಕ್ಷೇತ್ರದ ಚುನಾವಣೆ ರದ್ದಾಗಿದೆ.

ಇದನ್ನು ಓದಿ : Pushpa 2 Teaser: ಸಾರ್ವಕಾಲಿಕ ದಾಖಲೆ ಬರೆದ ಪುಷ್ಪರಾಜ್‌.

ಬೇತುಲ್‌ನಲ್ಲಿ ಚುನಾವಣೆ ರದ್ದು

ಬೇತುಲ್ ಲೋಕಸಭಾ ಸ್ಥಾನಕ್ಕೆ ಎರಡನೇ ಹಂತದಲ್ಲಿ ಅಂದರೆ ಏಪ್ರಿಲ್ 26 ರಂದು ಮತದಾನ ನಡೆಯಬೇಕಿತ್ತು. ಎರಡನೇ ಹಂತದ ಚುನಾವಣೆಗೆ ನಾಮಪತ್ರಗಳು ಭರ್ತಿಯಾಗಿವೆ. ಅದೇ ಸಮಯದಲ್ಲಿ, ಬಿಎಸ್ಪಿ ಅಭ್ಯರ್ಥಿ ಅಶೋಕ್ ಭಿಲವಿ ಅವರ ನಿಧನದಿಂದಾಗಿ, ಈ ಸ್ಥಾನದ ಚುನಾವಣೆಯನ್ನು ಮುಂದೂಡಲಾಗಿದೆ.ಈಗ ಮತ್ತೆ ನಿಯಮಾನುಸಾರ ಈ ಸ್ಥಾನಕ್ಕೆ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ. ಮತ್ತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ಬಳಿಕ ಮತದಾನದ ದಿನಾಂಕ ನಿರ್ಧಾರವಾಗಲಿದೆ.

ಇದನ್ನು ಓದಿ : ರಾಯಚೂರು ಜಿಲ್ಲೆಯಲ್ಲಿ ಅತೀ ಹೆಚ್ವಿನ ತಾಪಮಾನ ದಾಖಲು, ಬಿಸಿಲಿನ ಹೊಡೆತಕ್ಕೆ ಜನ ಹೈರಾಣು

2019 ರ ಲೋಕಸಭೆ ಚುನಾವಣೆಯಲ್ಲೂ ಅಶೋಕ್ ಭಲಾವಿ ಬಿಎಸ್‌ಪಿ ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು.ಮೂಲತಃ ಸೊಹಗಪುರ ಗ್ರಾಮದ ನಿವಾಸಿಯಾಗಿದ್ದು, ವೃತ್ತಿಯಲ್ಲಿ ತರಕಾರಿ ವ್ಯಾಪಾರಿಯಾಗಿದ್ದರು. ಬುಧವಾರ ಬೆಳಗ್ಗೆ ಸೊಹಗ್‌ಪುರದಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News