ನವದೆಹಲಿ: ಏಪ್ರಿಲ್ 18 ರಂದು ನಿಗದಿಯಾಗಿದ್ದ ನೀಟ್-ಪಿಜಿ ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಗುರುವಾರ ಸಂಜೆ ಟ್ವೀಟ್ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : Weekend Curfew in Delhi: ವೀಕ್-ಎಂಡ್ ಕರ್ಫ್ಯೂ ಮೊರೆಹೋದ ರಾಷ್ಟ್ರ ರಾಜಧಾನಿ


ದೇಶವ್ಯಾಪಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಕೊಂಡಿದೆ.ಈ ಪರೀಕ್ಷೆ ಇದು ಅಂದಾಜು 1.7 ಲಕ್ಷ ವೈದ್ಯಕೀಯ ಆಕಾಂಕ್ಷಿಗಳ ಭವಿಷ್ಯವನ್ನು ನಿರ್ಧರಿಸುತ್ತದೆ.ಹೊಸ ದಿನಾಂಕವನ್ನು ಆನಂತರ ಘೋಷಿಸಲಾಗುವುದು ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: Basavaraj Bommai: 'ರೆಮ್‌ಡೆಸಿವಿರ್' ಕದ್ದು ಮಾರುವವರಿಗೆ ಖಡಕ್ ಎಚ್ಚರಿಕೆ ನೀಡಿದ ಗೃಹ ಸಚಿವ!


COVID -19 ಪ್ರಕರಣಗಳ ಹೆಚ್ಚಳದ ಹಿನ್ನಲೆಯಲ್ಲಿ ಏಪ್ರಿಲ್ 18 ರಂದು ನಡೆಯಬೇಕಿದ್ದ ನೀಟ್-ಪಿಜಿ 2021 ಪರೀಕ್ಷೆಯನ್ನು ಮುಂದೂಡಲು ಭಾರತ ಸರ್ಕಾರ ನಿರ್ಧರಿಸಿದೆ.ಮುಂದಿನ ದಿನಾಂಕವನ್ನು ನಂತರ ನಿರ್ಧರಿಸುತ್ತೇವೆ.ನಮ್ಮ ಯುವ ವೈದ್ಯಕೀಯ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಉತ್ತಮ ನಿರ್ಧಾರ ತೆಗೆದುಕೊಳ್ಳಲಾಗಿದೆ' ಎಂದು ಅವರು ತಿಳಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.