ಬಿಹಾರಕ್ಕೆ ಇಬ್ಬರು ಡಿಸಿಎಂ ಆಗಿ ರೇಣುದೇವಿ, ತಾರ್ಕಿಶೋರ್ ಪ್ರಸಾದ್ ಆಯ್ಕೆಯಾಗುವ ಸಾಧ್ಯತೆ!

ಮುಖ್ಯಮಂತ್ರಿಯಾಗಿ ಚುನಾಯಿತರಾದ ನಿತೀಶ್ ಕುಮಾರ್ ನೇತೃತ್ವದ ಬಿಹಾರದ ಹೊಸ ಸಂಪುಟವು ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಹೊಂದುವ ಸಾಧ್ಯತೆಯಿದೆ.

Last Updated : Nov 15, 2020, 11:48 PM IST
ಬಿಹಾರಕ್ಕೆ ಇಬ್ಬರು ಡಿಸಿಎಂ ಆಗಿ ರೇಣುದೇವಿ, ತಾರ್ಕಿಶೋರ್ ಪ್ರಸಾದ್ ಆಯ್ಕೆಯಾಗುವ ಸಾಧ್ಯತೆ!  title=
Photo Courtesy: ANI

ನವದೆಹಲಿ: ಮುಖ್ಯಮಂತ್ರಿಯಾಗಿ ಚುನಾಯಿತರಾದ ನಿತೀಶ್ ಕುಮಾರ್ ನೇತೃತ್ವದ ಬಿಹಾರದ ಹೊಸ ಸಂಪುಟವು ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಹೊಂದುವ ಸಾಧ್ಯತೆಯಿದೆ.

ನಿತೀಶ್ ಕುಮಾರ್ ಅವರ ಮಿತ್ರಪಕ್ಷ  ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ ಕತಿಹಾರ್ ಶಾಸಕ ತಾರ್ಕಿಶೋರ್ ಪ್ರಸಾದ್ ಮತ್ತು ಬೆಟ್ಟಯ್ಯ ಶಾಸಕ ರೇಣು ದೇವಿ ಅವರ ಶಾಸಕಾಂಗ ಪಕ್ಷದ ಕ್ರಮವಾಗಿ ನಾಯಕ ಮತ್ತು ಉಪನಾಯಕನಾಗಿ ಆಯ್ಕೆ ಮಾಡಿಕೊಂಡಿದ್ದು, ರಾಜ್ಯದಲ್ಲಿ ಬಿಜೆಪಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳು ಇರಲಿದ್ದಾರೆ ಎಂದು ಸೂಚಿಸುತ್ತದೆ.

ಬಿಹಾರದಲ್ಲಿ ಮಹಾಘಟಬಂಧನ್ ಸೋತಿದ್ದು ಈ ಕಾರಣಕ್ಕಾಗಿ ..!

ಬಿಹಾರದ ಹಿರಿಯ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ ಅವರು ಜುಲೈ 2017 ರಿಂದ ನಿತೀಶ್ ಕುಮಾರ್ ಸಚಿವ ಸಂಪುಟದಲ್ಲಿ ಡಿಸಿಎಂ ಆಗಿ ಸೇವೆ ಸಲ್ಲಿಸಿದ್ದರು.ಈಗ ಅವರು ಕೇಂದ್ರ ಸಚಿವ ಸಂಪುಟಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಬಿಹಾರದ ಸಿಎಂ ಆಗುವ ಕನಸಿನಲ್ಲಿದ್ದ ಸುಶಿಲ್ ಕುಮಾರ್ ಮೋದಿ ಹೇಳಿದ್ದೇನು?

ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ  ಆರ್ಜೆಡಿ ಅತಿ ಹೆಚ್ಚಿನ ಸ್ಥಾನಗಳನ್ನು ಗೆದ್ದಿದ್ದರೆ, ಎರಡನೇ ಸ್ಥಾನದಲ್ಲಿ ಬಿಜೆಪಿ ಹಾಗೂ ಮೂರನೇ ಸ್ಥಾನಕ್ಕೆ ಜೆಡಿಯು ತೃಪ್ತಿಪಟ್ಟುಕೊಂಡಿತ್ತು. ಒಟ್ಟಾರೆ ಎನ್ದಿಎ 125 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತದ ಗೆರೆಯನ್ನು ದಾಟಿತ್ತು. ಈಗ ನಿತೀಶ್ ಕುಮಾರ್ ಅವರು ಎನ್ದಿಎ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ.ಮುಂದಿನ 5ವರ್ಷಗಳ ಕಾಲ ಅವರು ಮುಖ್ಯಮಂತ್ರಿಯಾಗಿರಲಿದ್ದಾರೆ.
 

Trending News