ರಾಷ್ಟ್ರಪತಿಗಳಿಂದ ಸೆ.26 ರಂದು ಧಾರವಾಡ ಐಐಐಟಿಯ ನೂತನ ಕ್ಯಾಂಪಸ್ ಉದ್ಘಾಟನೆ

ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಧಾರವಾಡದ ಉದ್ಘಾಟನೆ ಮತ್ತು ಲೋಕಾರ್ಪಣೆಯನ್ನು ನೆಪ್ಟೆಂಬರ್ 26 ರಂದು ಮಧ್ಯಾಹ್ನ 3 ಗಂಟೆಗೆ ಸತ್ತೂರು ಬಳಿಯ ಹೊಚ್ಚಹೊಸ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿದೆ. 

Last Updated : Sep 24, 2022, 03:35 PM IST
  • ಹಿಂದಿನ ಶೈಕ್ಷಣಿಕ ವರ್ಷದಲ್ಲಿ 834 ವಿದ್ಯಾರ್ಥಿಗಳಿದ್ದರು. ಈ ವರ್ಷದ ಪ್ರವೇಶಾತಿ ಕೊನೆಯಲ್ಲಿ 1000 ವಿದ್ಯಾರ್ಥಿಗಳನ್ನು ಹೊಂದುವ ಅಪೇಕ್ಷೆ ಇದೆ.
ರಾಷ್ಟ್ರಪತಿಗಳಿಂದ ಸೆ.26 ರಂದು ಧಾರವಾಡ ಐಐಐಟಿಯ ನೂತನ ಕ್ಯಾಂಪಸ್ ಉದ್ಘಾಟನೆ title=

ಧಾರವಾಡ: ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಧಾರವಾಡದ ಉದ್ಘಾಟನೆ ಮತ್ತು ಲೋಕಾರ್ಪಣೆಯನ್ನು ನೆಪ್ಟೆಂಬರ್ 26 ರಂದು ಮಧ್ಯಾಹ್ನ 3 ಗಂಟೆಗೆ ಸತ್ತೂರು ಬಳಿಯ ಹೊಚ್ಚಹೊಸ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿದೆ. 

ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸ್ಥೆಯನ್ನು ಉದ್ಘಾಟಿಸಿಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರದ ಪ್ರತಿನಿಧಿಗಳು, ಕೈಗಾರಿಕಾ ಪಾಲುದಾರರಾದ ಕಿಯಾನಿಕ್ಸ್, ಇನ್ಫೋಸಿಸ್‍ನ ಪ್ರತಿನಿಧಿಗಳು, ಕಾಲೇಜಿನ ಬೋರ್ಡ್ ಆಫ್ ಗವರ್ನರ್ಸ್, ಸೆನಟ್, ಹಣಕಾಸು ಸಮಿತಿ, ಕಟ್ಟಡ ಮತ್ತು ಕಾಮಗಾರಿ ಸಮಿತಿಯವರು, ಪ್ರತಿಷ್ಠಿತ ಸಂಸ್ಥೆಗಳ ಶಿಕ್ಷಣ ತಜ್ಞರು ಮತ್ತು ಉದ್ಯಮಿಗಳು ಕಾರ್ಯಕ್ರಮಕ್ಕೆ ಆಗಮಿಸುವರು.May be an image of road and text that says 'ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಧಾರವಾಡ INDIAN INSTITUTE OF INFORMATION TECHNOLOGY DHARWAD'

ಧಾರವಾಡದಲ್ಲಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯು ಸಾರ್ವಜನಿಕ ಖಾಸಗಿ-ಕೈಗಾರಿಕಾ ಪಾಲುದಾರಿಕೆಯ ಮಾದರಿಯಲ್ಲಿ ಭಾರತ ಸರಕಾರ, ಕರ್ನಾಟಕ ಸರಕಾರ ಹಾಗೂ ಕೈಗಾರಿಕಾ ಸಂಸ್ಥೆಯಾದ ಕಿಯೋನಿಕ್ಸ್ ಇವುಗಳ ಸಹಭಾಗಿತ್ವದೊಂದಿಗೆ 2015 ಲ್ಲಿ ಅಸ್ತಿತ್ವಕ್ಕೆ ಬಂತು. ದೇಶದಲ್ಲಿ ಮಾಹಿತಿ ತಂತ್ರಜ್ಞಾನ ಉನ್ನತ ಶಿಕ್ಷಣ, ವೃತ್ತಿಪರ ಪರಿಣತಿ ಮತ್ತು ಕೌಶಲ್ಯವನ್ನು ಹೆಚ್ಚಿಸುವ ಉದ್ದೇಶಕ್ಕೆ ಈ ಸಂಸ್ಥೆಯನ್ನು ಸ್ಥಾಪಿಸಲಾಯಿತು. 2017 ಸಂಸತ್ತಿನ 23 ನೇ ಕಾಯ್ದೆಯಡಿಯಲ್ಲಿ ಈ ಸಂಸ್ಥೆಯನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯೆಂದು ಘೋಷಿಸಲಾಗಿದೆ.

ಇದನ್ನೂ ಓದಿ: Pro Kabaddi League 9 : ರಾಕೇಶ್ ಗೌಡನನ್ನು ಭರ್ಜರಿಯಾಗಿ ಸ್ವಾಗತಿಸಿದ ಬೆಂಗಳೂರು ಬುಲ್ಸ್ ಟೀಂ!

May be an image of sky

ಹೊಸ ಹುರುಪಿನಲ್ಲಿ ಆರಂಭವಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಧಾರವಾಡಕ್ಕೆ ಭಾರತೀಯ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ, ಶೈಕ್ಷಣಿಕ ಮತ್ತು ಸಂಶೋಧನಾ ಸಮುದಾಯಕ್ಕೆ ಬದಲಾವಣೆ ತರುವಂತಹ ಅಪರೂಪದ ಅವಕಾಶವನ್ನು ಹೊಂದಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರವು ಈಗಾಗಲೇ ಉತ್ತರ ಕರ್ನಾಟಕದಲ್ಲಿ ತಾಂತ್ರಿಕ, ಕೃಷಿ, ವೈದ್ಯಕೀಯ, ಕಾನೂನು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಉತ್ಕøಷ್ಟ ಶೈಕ್ಷಣಿಕ ಸಂಸ್ಥೆಯನ್ನು ಹೊಂದಿದ್ದು, ಶೈಕ್ಷಣಿಕ ನಗರಿ ಎಂದು ಪ್ರಸಿದ್ಧಿ ಪಡೆದಿದೆ. ವಾತಾವರಣದೊಂದಿಗೆ,ಬೆಂಗಳೂರಿಗೂ ಹತ್ತಿರವಾಗಿದ್ದು, ಐಐಐಟಿ ಧಾರವಾಡ ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯಾಗಿ ಬೆಳೆಯುತ್ತಿದೆ. May be an image of outdoors

ಹಿಂದಿನ ಶೈಕ್ಷಣಿಕ ವರ್ಷದಲ್ಲಿ 834 ವಿದ್ಯಾರ್ಥಿಗಳಿದ್ದರು. ಈ ವರ್ಷದ ಪ್ರವೇಶಾತಿ ಕೊನೆಯಲ್ಲಿ 1000 ವಿದ್ಯಾರ್ಥಿಗಳನ್ನು ಹೊಂದುವ ಅಪೇಕ್ಷೆ ಇದೆ. ಪ್ರಸ್ತುತ ಭಾರತದ ಮತ್ತು ಹೊರ ದೇಶದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಿಂದ ಪಿ.ಎಚ್.ಡಿ, ಪೆÇಸ್ಟ್ ಡಾಕ್ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಪರಿಣತಿಯನ್ನು ಪಡೆದಿರುವ 36 ಅಧ್ಯಾಪಕರನ್ನು ನಮ್ಮ ಸಂಸ್ಥೆ ಹೊಂದಿದೆ. ಇವರು ಮಾಹಿತಿ ತಂತ್ರಜ್ಞಾನದ ಕೆಲವು ಆಯಾಮಗಳಲ್ಲಿ, ಪ್ರತಿಷ್ಠಿತ ಸಂಸ್ಥೆಗಳೊಂದಿಗೆ ಸಹಯೋಗದಲ್ಲಿ ಸಂಶೋಧನೆಯನ್ನು ಕೈಗೊಳ್ಳುತ್ತಿದ್ದಾರೆ. ಸಂಸ್ಥೆಯಲ್ಲಿ 29 ಭೋಧಕೇತರ ಸಿಬ್ಬಂದಿಗಳಿದ್ದಾರೆ. ನಮ್ಮ ಸಂಸ್ಥೆಯ ನಾಲ್ಕನೇ ಸರದಿಯಲ್ಲಿ ತೇರ್ಗಡೆಗೊಳ್ಳುತ್ತಿರುವವರ ಮಕ್ಕಳ ಕ್ಯುಮಿಲೇಟಿವ್ ಸರಾಸರಿ 7.0 ಇದೆ ಹಾಗೂ ಆಸಕ್ತಿಯಿರುವ ಮಕ್ಕಳಲ್ಲಿ ಶೇ.100 ರಷ್ಟು ಕೆಲಸ ಗಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News