ಧಾರವಾಡ: ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಧಾರವಾಡದ ಉದ್ಘಾಟನೆ ಮತ್ತು ಲೋಕಾರ್ಪಣೆಯನ್ನು ನೆಪ್ಟೆಂಬರ್ 26 ರಂದು ಮಧ್ಯಾಹ್ನ 3 ಗಂಟೆಗೆ ಸತ್ತೂರು ಬಳಿಯ ಹೊಚ್ಚಹೊಸ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿದೆ. 


COMMERCIAL BREAK
SCROLL TO CONTINUE READING

ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸ್ಥೆಯನ್ನು ಉದ್ಘಾಟಿಸಿಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರದ ಪ್ರತಿನಿಧಿಗಳು, ಕೈಗಾರಿಕಾ ಪಾಲುದಾರರಾದ ಕಿಯಾನಿಕ್ಸ್, ಇನ್ಫೋಸಿಸ್‍ನ ಪ್ರತಿನಿಧಿಗಳು, ಕಾಲೇಜಿನ ಬೋರ್ಡ್ ಆಫ್ ಗವರ್ನರ್ಸ್, ಸೆನಟ್, ಹಣಕಾಸು ಸಮಿತಿ, ಕಟ್ಟಡ ಮತ್ತು ಕಾಮಗಾರಿ ಸಮಿತಿಯವರು, ಪ್ರತಿಷ್ಠಿತ ಸಂಸ್ಥೆಗಳ ಶಿಕ್ಷಣ ತಜ್ಞರು ಮತ್ತು ಉದ್ಯಮಿಗಳು ಕಾರ್ಯಕ್ರಮಕ್ಕೆ ಆಗಮಿಸುವರು.ಕರ್ನಾಟಕ ಸರಕಾರ ಹಾಗೂ ಕೈಗಾರಿಕಾ ಸಂಸ್ಥೆಯಾದ ಕಿಯೋನಿಕ್ಸ್ ಇವುಗಳ ಸಹಭಾಗಿತ್ವದೊಂದಿಗೆ 2015 ಲ್ಲಿ ಅಸ್ತಿತ್ವಕ್ಕೆ ಬಂತು. ದೇಶದಲ್ಲಿ ಮಾಹಿತಿ ತಂತ್ರಜ್ಞಾನ ಉನ್ನತ ಶಿಕ್ಷಣ, ವೃತ್ತಿಪರ ಪರಿಣತಿ ಮತ್ತು ಕೌಶಲ್ಯವನ್ನು ಹೆಚ್ಚಿಸುವ ಉದ್ದೇಶಕ್ಕೆ ಈ ಸಂಸ್ಥೆಯನ್ನು ಸ್ಥಾಪಿಸಲಾಯಿತು. 2017 ಸಂಸತ್ತಿನ 23 ನೇ ಕಾಯ್ದೆಯಡಿಯಲ್ಲಿ ಈ ಸಂಸ್ಥೆಯನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯೆಂದು ಘೋಷಿಸಲಾಗಿದೆ.


ಇದನ್ನೂ ಓದಿ: Pro Kabaddi League 9 : ರಾಕೇಶ್ ಗೌಡನನ್ನು ಭರ್ಜರಿಯಾಗಿ ಸ್ವಾಗತಿಸಿದ ಬೆಂಗಳೂರು ಬುಲ್ಸ್ ಟೀಂ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.