ಅಹ್ಮದಾಬಾದ್: ಗುಜರಾತ್ನಲ್ಲಿ ಬಿಜೆಪಿಯ ಹೊಸ ಸರ್ಕಾರವು ಡಿಸೆಂಬರ್ 25 ರಂದು ಅಧಿಕಾರ ಸ್ವೀಕರಿಸಬಹುದು ಎಂದು ಬಿಜೆಪಿ ಮೂಲಗಳು ಮಂಗಳವಾರ ಮಾಹಿತಿ ತಿಳಿಸಿವೆ. ಏತನ್ಮಧ್ಯೆ, ರಾಜ್ಯದಲ್ಲಿ ಮುಖ್ಯಮಂತ್ರಿ ಗದ್ದುಗೆ  ಯಾರಿಗೆ ನೀಡಬೇಕು ಎಂಬ ಬಗ್ಗೆ ಬಿಜೆಪಿ ನಾಯಕರು ಇನ್ನೂ ನಿರ್ಧರಿಸದ ಕಾರಣ ಅದು ಸಸ್ಪೆನ್ಸ್ ಆಗೇ ಉಳಿದಿದೆ. "ಈ ಬಾರಿ ಗೆಲುವಿನ ಅಂತರ ಅತಿ ಕಡಿಮೆ ಇದ್ದದ್ದರಿಂದ, ಪಕ್ಷದ ಮುಖಂಡರು ಮುಖ್ಯಮಂತ್ರಿಯನ್ನು ಬದಲಿಸುವ ಬಗ್ಗೆ ಯೋಚಿಸಬಹುದು" ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಮತ್ತು ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.


COMMERCIAL BREAK
SCROLL TO CONTINUE READING

ಮುಂದಿನ ಮುಖ್ಯಮಂತ್ರಿ ಯಾರು ಎಂದು ವಿಜಯ್ ರೂಪಾನಿ ಅವರನ್ನು ಕೇಳಿದಾಗ, "ಈ ಬಾರಿ ಗುಜರಾತ್ನಲ್ಲಿ ಬಿಜೆಪಿ ಬಹುಮತದಿಂದ ಗೆದ್ದಿದೆ. ಆದರೆ ಪಕ್ಷದ ಪಾರ್ಲಿಮೆಂಟರಿ ಮಂಡಳಿಯು ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ. "182 ಸದಸ್ಯ ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳನ್ನು ಪಡೆಯಿತು. ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು 80 ಸ್ಥಾನಗಳನ್ನು ಪಡೆಯಿತು. ಮುಖ್ಯಮಂತ್ರಿ ವಿಜಯ್ ರುಪಾನಿ ಮತ್ತು ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ನೇತೃತ್ವದಲ್ಲಿ ಬಿಜೆಪಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾರವರು ಪ್ರಚಾರ ಅಭಿಯಾನದಲ್ಲಿ ಘೋಷಿಸಿದ್ದರು. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚುನಾವಣೆಯಲ್ಲಿ ಪಕ್ಷದ ಪ್ರಮುಖವಾಗಿ ಕಾಣಿಸಿಕೊಂಡರು.


ಡಿ.25 ರಂದು ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನವಾದ ಕಾರಣ ಅಂದು ಗುಜರಾತ್ನ ನೂತನ ಮಂತ್ರಿಗಳು ಅಧಿಕಾರ ಸ್ವೀಕರಿಸುವ ನಿರೀಕ್ಷೆ ಇದೆ ಎಂದು ಮೂಲಗಳ ಮಾಹಿತಿ ಲಭಿಸಿದೆ. 2012 ರ ಚುನಾವಣೆ ನಂತರ, ನಾಲ್ಕನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಾಗ ನರೇಂದ್ರ ಮೋದಿ ಡಿಸೆಂಬರ್ 25 ರಂದು ಪ್ರಮಾಣವಚನ ಸ್ವೀಕರಿಸಿದರು. ಗುಜರಾತ್ ಮುಖ್ಯ ಕಾರ್ಯದರ್ಶಿ ಜೆ.ಎನ್. ಸಿಂಗ್ ಅವರು ಅಹಮದಾಬಾದ್ನಲ್ಲಿ ಸರ್ದಾರ್ ಪಟೇಲ್ ಕ್ರೀಡಾಂಗಣವನ್ನು ಪ್ರಮಾಣವಚನ ಕಾರ್ಯಕ್ರಮ ಆಯೋಜಿಸುವ ಸಲುವಾಗಿ ಮಂಗಳವಾರ ಪರೀಕ್ಷಿಸಿದ್ದಾರೆ.  "ನಾವು ಕ್ರೀಡಾಂಗಣವನ್ನು ಪರೀಕ್ಷಿಸಲು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಇಲ್ಲಿ ಪ್ರಮಾಣವಚನ-ಸಮಾರಂಭವನ್ನು ಮಾಡಬಹುದು" ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.


ಆದಾಗ್ಯೂ, ಮಹಾತ್ಮಾ ಮಂದಿರ ಮತ್ತು ಸಬರಮತಿ ನದಿ ಮುಂಭಾಗ ಸೇರಿದಂತೆ ಇತರ ಸ್ಥಳಗಳನ್ನು ತಂಡ ಪರಿಶೀಲಿಸಲಿದೆ ಎಂದು ಸಿಂಗ್ ಹೇಳಿದರು. ಚೀನಾ ಅಧ್ಯಕ್ಷ ಕ್ಸಿ ಕ್ನ್ಫಿಂಗ್ ಮತ್ತು ಅವರ ಪತ್ನಿ ಮತ್ತು ಜಪಾನ್ ಪ್ರಧಾನ ಮಂತ್ರಿ ಶಿಂಜೊ ಅಬೆ ಮತ್ತು ಅವರ ಪತ್ನಿ ಮೋದಿ ಸ್ವತಃ ಸಬರ್ಮತಿ ನದಿಯ ಮುಂಭಾಗಕ್ಕೆ ತೆರಳಿದರು. ಬಿಜೆಪಿ ಮೂಲಗಳು ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಬಿಜೆಪಿ ಆಳ್ವಿಕೆಯ ರಾಜ್ಯಗಳು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಬಹುದು ಎಂದು ಇದೇ ಸಂದರ್ಭದಲ್ಲಿ ವಿವರಿಸಿದರು.


"ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ನಂತರ ಮುಖ್ಯಮಂತ್ರಿಯನ್ನು ನಿರ್ಧರಿಸಲು ನೂತನ ಶಾಸಕರೊಂದಿಗೆ ದೆಹಲಿಯ ಮೇಲ್ವಿಚಾರಕರು ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಹೊಸ ಮುಖ್ಯಮಂತ್ರಿ ಸರ್ಕಾರ ರಚಿಸುವ ಹಕ್ಕನ್ನು ಮಂಡಿಸಲಿದ್ದಾರೆ ಮತ್ತು ನಂತರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಜಗದೀಶ್ ಭಾವ್ಸರ್ ತಿಳಿಸಿದ್ದಾರೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಸರೋಜ್ ಪಾಂಡೆ ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ ಎಂದು ಸೋಮವಾರ ಬಿಜೆಪಿ ಪ್ರಕಟಿಸಿದೆ. ಹೊಸ ಮುಖ್ಯಮಂತ್ರಿ ಆಯ್ಕೆಗಾಗಿ ಡಿಸೆಂಬರ್ 21 ರ ನಂತರ ಮೇಲ್ವಿಚಾರಕರು ಗುಜರಾತ್ ಪ್ರವಾಸ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ.