ನವದೆಹಲಿ: ದೇಶಾದ್ಯಂತ ಕೇಂದ್ರೀಯ ವಿದ್ಯಾಲಯದಲ್ಲಿ ಶಾಲಾ ಪ್ರಾರ್ಥನೆ ಹಿಂದೂ ಧರ್ಮವನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂಕೋರ್ಟ್ ಒಪ್ಪಿಕೊಂಡಿದ್ದು, ಈ ಆರೋಪದ ಕುರಿತು ಪ್ರತಿಕ್ರಿಯೆ ನೀಡುವಂತೆ ಬುಧವಾರ ಕೇಂದ್ರಕ್ಕೆ ನೋಟಿಸ್ ಜಾರಿಗೊಳಿಸಿತು.


COMMERCIAL BREAK
SCROLL TO CONTINUE READING

ದೇಶಾದ್ಯಂತ ಕೇಂದ್ರೀಯ ವಿದ್ಯಾಲಯಗಳಲ್ಲಿ ಹಿಂದಿ ಪ್ರಾರ್ಥನೆ ಹಾಡುಗಳು ಹಿಂದೂ ಧರ್ಮವನ್ನು ಉತ್ತೇಜಿಸುತ್ತವೆ ಮತ್ತು ಸರ್ಕಾರಿ ಶಾಲೆಗಳಲ್ಲಿ ಇದನ್ನು ಅನುಮತಿಸಬಾರದು ಎಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸರ್ಕಾರಿ ಸಂಸ್ಥೆಗಳಲ್ಲಿ ಧರ್ಮ ಆಚರಣೆಗೆ ಅವಕಾಶವಿಲ್ಲ ಎಂದು ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ. 


ಕೇಂದ್ರದಿಂದ ಪ್ರತಿಕ್ರಿಯೆಯನ್ನು ಪಡೆಯಲು ಸುಪ್ರೀಂ ಕೋರ್ಟ್ ಇದು 'ಗಂಭೀರ ಸಾಂವಿಧಾನಿಕ ವಿಷಯ' ಎಂದು ಗಮನಿಸಿದೆ. ದೇಶದಲ್ಲಿ 1100 ಕೆ.ವಿ.ಗಳಲ್ಲಿ ಹಾಡಲಾದ ಹಿಂದಿ ಪ್ರಾರ್ಥನೆ ನಿರ್ದಿಷ್ಟ ಧರ್ಮವನ್ನು ಉತ್ತೇಜಿಸುತ್ತದೆಯೇ ಮತ್ತು ಸಂವಿಧಾನವನ್ನು ಉಲ್ಲಂಘಿಸಿದೆಯೇ ಎಂಬುದನ್ನು ಸುಪ್ರೀಂಕೋರ್ಟ್ ನಿರ್ಧರಿಸುತ್ತದೆ.